Odisha CM Oath Taking: ಒಡಿಶಾ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಇಂದು ಪ್ರಮಾಣವಚನ ಸ್ವೀಕಾರ; ಪ್ರಧಾನಿ ಮೋದಿ ಭಾಗಿ

Mohan Charan Majhi Swearing in Ceremony: ಒಡಿಶಾದಲ್ಲಿ 24 ವರ್ಷಗಳ ಕಾಲ ಆಡಳಿತ ನಡೆಸಿದ್ದ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರ ಪತನವಾಗಿದೆ. ಇಂದು ರಾಜ್ಯದಲ್ಲಿ ಮೊದಲ ಬಿಜೆಪಿ ಸರ್ಕಾರ ರಚನೆಯಾಗಲಿದ್ದು, ಮುಖ್ಯಮಂತ್ರಿಯಾಗಿ ಆರ್​ಎಸ್​ಎಸ್​ ಹಿನ್ನೆಲೆಯ ಮೋಹನ್ ಚರಣ್ ಮಾಝಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Odisha CM Oath Taking: ಒಡಿಶಾ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಇಂದು ಪ್ರಮಾಣವಚನ ಸ್ವೀಕಾರ; ಪ್ರಧಾನಿ ಮೋದಿ ಭಾಗಿ
ಮೋಹನ್ ಮಾಝಿ
Follow us
|

Updated on: Jun 12, 2024 | 7:10 AM

ನವದೆಹಲಿ: ಒಡಿಶಾದಲ್ಲಿ ಇಂದು ಬಿಜೆಪಿ ಸರ್ಕಾರ (Odisha Government) ರಚನೆಯಾಗಲಿದೆ. ನೂತನ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ (Mohan Charan Majhi) ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಉಪಮುಖ್ಯಮಂತ್ರಿಗಳಾಗಿ ಕನಕ್ ವರ್ಧನ್ ಸಿಂಗ್ ಡಿಯೋ (Kanak Vardhan Singh Deo) ಮತ್ತು ಪ್ರವತಿ ಪರಿದಾ (Pravati Parida) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದಿನ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಒಡಿಶಾದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ.

ಆರ್​ಎಸ್​ಎಸ್​ ಹಿನ್ನೆಲೆಯಿಂದ ಬಂದಿರುವ ಮೋಹನ್ ಚರಣ್ ಮಾಝಿ 4 ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮೋಹನ್ ಚರಣ್ ಮಾಝಿ ಅವರು ಈ ಬಾರಿಯ ಚುನಾವಣೆಯಲ್ಲಿ ಕಿಯೋಂಜಾರ್ ವಿಧಾನಸಭಾ ಕ್ಷೇತ್ರದಿಂದ ಬಿಜು ಜನತಾ ದಳದ ಮಿನಾ ಮಾಝಿ ಅವರನ್ನು 11,577 ಮತಗಳಿಂದ ಸೋಲಿಸಿದರು.

ಮೋಹನ್ ಚರಣ್ ಮಾಝಿ ಅವರು ಫೈರ್‌ಬ್ರಾಂಡ್ ಬುಡಕಟ್ಟು ನಾಯಕರಾಗಿದ್ದಾರೆ. ವಿವಾದಾತ್ಮಕ ವ್ಯಕ್ತಿಯಾಗಿರುವ ಮೋಹನ್ ಮಾಝಿ ಅವರು ಬಿಜೆಪಿಯ ನಿಷ್ಠಾವಂತ ಸದಸ್ಯ ಮತ್ತು ಪ್ರಬಲ ಸಂಘಟನಾ ನಾಯಕ ಎಂದು ಪರಿಗಣಿಸಲ್ಪಟ್ಟಿದ್ದಾರೆ. ಬಲವಾದ ಆರ್‌ಎಸ್‌ಎಸ್ ಸಂಪರ್ಕ ಹೊಂದಿರುವ ಮಾಝಿ, ಬಿಜೆಪಿಯ ಒಡಿಶಾ ರಾಜ್ಯ ಘಟಕದಲ್ಲಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: Mohan Charan Majhi: ಸ್ಪೀಕರ್ ಮೇಲೆ ದಾಲ್ ಎರಚಿದ್ದ ಮೋಹನ್ ಮಾಝಿ ಅವರನ್ನೇ ಒಡಿಶಾದ ಸಿಎಂ ಆಗಿ ಬಿಜೆಪಿ ಆಯ್ಕೆ ಮಾಡಿದ್ದೇಕೆ?

ಒಡಿಶಾ ವಿಧಾನಸಭೆಯಲ್ಲಿ 147 ಸ್ಥಾನಗಳಲ್ಲಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಒಡಿಶಾದಲ್ಲಿ ಸರ್ಕಾರ ರಚನೆಗೆ ಮುಂದಾಗಿದೆ. ಇಂದು (ಜೂನ್ 12) ನಡೆಯಲಿರುವ ಪ್ರಮಾಣ ವಚನ ಸಮಾರಂಭಕ್ಕೆ ಬಿಜೆಡಿ ಅಧ್ಯಕ್ಷ ಮತ್ತು ನಿರ್ಗಮಿತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಕೂಡ ಆಹ್ವಾನಿಸಲಾಗಿದೆ.

147 ಸದಸ್ಯ ಬಲದ ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಪಡೆಯುವ ಮೂಲಕ ಅನುಕೂಲಕರ ಬಹುಮತವನ್ನು ಸಾಧಿಸಿತ್ತು. ಬಿಜೆಪಿ ಒಡಿಶಾದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸದೆ ಮೋದಿ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸಿತ್ತು. ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ 2024ರಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆದ್ದು 40.07 ಶೇಕಡಾ ಮತಗಳನ್ನು ಗಳಿಸಿತು. ಇಡೀ ರಾಜ್ಯದಲ್ಲಿ ಬಿಜೆಪಿ 1,00,64,827 ಮತಗಳನ್ನು ಪಡೆದಿದೆ. 2019, 2014 ಮತ್ತು 2009ರ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ಕೇಸರಿ ಪಕ್ಷ 23, 10 ಮತ್ತು 6 ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: Mohan Charan Majhi: ಒಡಿಶಾದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಆಯ್ಕೆ

ಇಂದು ಭುವನೇಶ್ವರದಲ್ಲಿ ಅರ್ಧ ದಿನ ರಜೆ ಘೋಷಣೆ:

ಒಡಿಶಾದಲ್ಲಿ ಹೊಸ ಮುಖ್ಯಮಂತ್ರಿ ಮತ್ತು ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಕಾರಣದಿಂದ ಇಂದು (ಜೂನ್ 12) ಮಧ್ಯಾಹ್ನ 1 ಗಂಟೆಯ ನಂತರ ಭುವನೇಶ್ವರದಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಮತ್ತು ನ್ಯಾಯಾಲಯಗಳನ್ನು ಮುಚ್ಚಲಾಗುವುದು ಎಂದು ಒಡಿಶಾ ಸರ್ಕಾರ ಘೋಷಿಸಿದೆ.

ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ಆದೇಶವು ಭುವನೇಶ್ವರ ಮುನ್ಸಿಪಲ್ ಕಾರ್ಪೊರೇಷನ್ (BMC) ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು ಮತ್ತು ಕಂದಾಯ ಮತ್ತು ಮ್ಯಾಜಿಸ್ಟ್ರಿಯಲ್ ನ್ಯಾಯಾಲಯಗಳಿಗೆ (ಕಾರ್ಯನಿರ್ವಾಹಕ) ಅನ್ವಯಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ