Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್​ ಯಾದವ್ ಆಯ್ಕೆ

ಪಂಚ ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ (ಮಧ್ಯಪ್ರದೇಶ, ಛತ್ತೀಸ್​ಗಢ, ರಾಜಸ್ಥಾನ) ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್​​​ ಹಾಗೂ ಮಿಜೋರಾಂನಲ್ಲಿ ಸ್ಥಳೀಯ ಪಕ್ಷ ಅಧಿಕಾರ ಪಡೆದುಕೊಂಡಿದೆ. ಈಗಾಗಲೇ ಛತ್ತೀಸ್​ಗಢನಲ್ಲಿ ವಿಷ್ಣುದೇವ್ ಸಾಯಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದು, ಇದೀಗ ಮಧ್ಯಪ್ರದೇಶದಲ್ಲಿ ಮೋಹನ್​ ಯಾದವ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್​ ಯಾದವ್ ಆಯ್ಕೆ
ಮೋಹನ್​ ಯಾದವ್
Follow us
ಅಕ್ಷಯ್​ ಪಲ್ಲಮಜಲು​​
|

Updated on:Dec 11, 2023 | 5:31 PM

ಭೋಪಾಲ್, ಡಿ.11: ಮಧ್ಯಪ್ರದೇಶ ನೂತನ ಸಿಎಂ ಆಗಿ ಮೋಹನ್​ ಯಾದವ್ (Mohan Yadav) ಆಯ್ಕೆ​ ಮಾಡಲಾಗಿದೆ. ಮಧ್ಯಪ್ರದೇಶ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಉಜ್ಜೈನ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಮೋಹನ್​ ಯಾದವ್ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದ ಮಾಜಿ  ಸಿಎಂ ಶಿವರಾಜ್​ ಸಿಂಗ್ ಚೌಹಾಣ್​ಗೆ ನಿರಾಸೆ ಉಂಟು ಮಾಡಿದೆ.ಮುಖ್ಯಮಂತ್ರಿಯ ಜತೆಗೆ ಇಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ. ಡಿಸಿಎಂ ಆಗಿ ಜಗದೀಶ್ ದೇವಡಾ, ರಾಜೇಶ್ ಶುಕ್ಲಾ ಆಯ್ಕೆಯಾಗಿದ್ದಾರೆ.

58 ವರ್ಷದ ಯಾದವ್ ಉಜ್ಜಯಿನಿ ಜಿಲ್ಲೆಯಿಂದ ಮೂರು ಬಾರಿ ಶಾಸಕರಾಗಿದ್ದರು, ಇದೀಗ ಶಿವರಾಜ್ ಸಿಂಗ್ ಚೌಹಾಣ್ ಸ್ಥಾನಕ್ಕೆ ಮೋಹನ್​ ಯಾದವ್ ಬಂದಿರುವುದು ಪಕ್ಷದ ದೊಡ್ಡ ಬದಲಾವಣೆಯನ್ನೇ ತಂದಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಈ ಬದಲಾವಣೆಯನ್ನು ಮಾಡಿದೆ. ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಮೋಹನ್​ ಯಾದವ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ:ಕೊನೆಗೂ ಛತ್ತೀಸ್‌ಗಢದ ಸಿಎಂ ಸ್ಥಾನಕ್ಕೆ ವಿಷ್ಣುದೇವ್ ಸಾಯಿ ಹೆಸರು ಫೈನಲ್, ಪ್ರಮಾಣ ವಚನ ಯಾವಾಗ? 

ಕಳೆದ ತಿಂಗಳ ಚುನಾವಣೆಯಲ್ಲಿ ಸ್ಪರ್ಧಿಸಿದ ಮೂವರು ಕೇಂದ್ರ ಸಚಿವರಲ್ಲಿ ನರೇಂದ್ರ ಸಿಂಗ್ ತೋಮರ್ ಅವರನ್ನು ವಿಧಾನಸಭೆಯ ಸ್ಪೀಕರ್​​ನ್ನಾಗಿ ಮಾಡಲಾಗಿದೆ.ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ಸಚಿವಾಲಯವನ್ನು ಮುನ್ನಡೆಸಿದ್ದ ತೋಮರ್ ಅವರು ಚೌಹಾಣ್ ಅವರಿಗೆ ಈ ಮುಖ್ಯಮಂತ್ರಿ ಸ್ಥಾನ ಸಿಗಬಹುದು ಎಂದು ಹೇಳಲಾಗಿತ್ತು. ಆದರೆ ಲೋಕಸಭೆ ಚುನಾವಣೆ ಇರುವ ಕಾರಣ ಹಿರಿಯರ ನಾಯಕರನ್ನು ಬಿಟ್ಟು ಮೋಹನ್​ ಯಾದವ್ ಅವರನ್ನು ಸಿಎಂ ಮಾಡಲಾಗಿದೆ.

ಮಾಜಿ ಸಿಎಂ ಶಿವರಾಜ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ಮೋಹನ್ ಯಾದವ್, 2013ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಮೋಹನ್ ಯಾದವ್ 2013, 2018 ಮತ್ತು 2023ರ ಚುನಾವಣೆಯಲ್ಲಿ 13 ಸಾವಿರಕ್ಕಿಂತ ಹೆಚ್ಚು ಮತಗಳಿಂದ ಜಯ ಸಾಧಿಸಿದರು. 1965ರ ಮಾರ್ಚ್ 25ರಂದು ಉಜ್ಜೈನ್‌ನಲ್ಲಿ ಜನಿಸಿದ ಮೋಹನ್ ಯಾದವ್ ಎಬಿವಿಪಿ ಕಾರ್ಯಕರ್ತರಾಗಿದ್ದರು. ತಂದೆ ಪೂನಂಚಂದ್‌ ಯಾದವ್, ಪತ್ನಿ ಸೀಮಾ ಯಾದವ್. ಇವರಿಗೆ ಇಬ್ಬರು ಗಂಡು ಮಕ್ಕಳು ಮತ್ತು ಒಬ್ಬರು ಹೆಣ್ಣು ಮಗಳು ಇದ್ದರೆ. ಯಾದವ್ ಬಿಎಸ್ಸಿ, ಎಲ್‌ಎಲ್‌ಬಿ, ಎಂಎ ಮತ್ತು ಪಿಹೆಚ್‌ಡಿ ಶಿಕ್ಷಣವನ್ನು ಕೂಡ ಪಡೆದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:57 pm, Mon, 11 December 23

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ