Money Laundering Case: ಅಕ್ರಮ ಹಣ ವರ್ಗಾವಣೆ, ಇಡಿಯಿಂದ ತಮಿಳುನಾಡು ಸಚಿವ ಸೆಂಥಿಲ್ ಬಂಧನ, ಬಿಕ್ಕಿ ಬಿಕ್ಕಿ ಅತ್ತ ಸಚಿವರು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ದಾಳಿ ನಡೆಸಿದ್ದು ಅವರನ್ನು ವಶಕ್ಕೆ ಪಡೆದಿದ್ದಾರೆ.

Money Laundering Case: ಅಕ್ರಮ ಹಣ ವರ್ಗಾವಣೆ, ಇಡಿಯಿಂದ ತಮಿಳುನಾಡು ಸಚಿವ ಸೆಂಥಿಲ್ ಬಂಧನ, ಬಿಕ್ಕಿ ಬಿಕ್ಕಿ ಅತ್ತ ಸಚಿವರು
ಸೆಂಥಿಲ್ ಬಾಲಾಜಿ

Updated on: Jun 14, 2023 | 8:20 AM

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ದಾಳಿ ನಡೆಸಿದ್ದು ಅವರನ್ನು ವಶಕ್ಕೆ ಪಡೆದಿದ್ದಾರೆ.  ಬಂಧನದ ಸಮಯದಲ್ಲಿ ಮನೆ ಎದುರು ಹೈ ಡ್ರಾಮಾ ನಡೆಸಿದ್ದಾರೆ, ಜೋರಾಗಿ ಅಳಲು ಪ್ರಾರಂಭಿಸಿದ್ದರು, ಬಳಿಕ ತೀವ್ರ ಎದೆನೋವು ಎಂದು ಕುಸಿದುಬಿದ್ದಿದ್ದು ಅವರನ್ನು ಓಮಂದೂರಾರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನಲ್ಲಿರುವ ಸೆಂಥಿಲ್ ಅವರ ಮನೆ ಹಾಗೂ ಕರೂರಿನಲ್ಲಿರುವ ಅವರ ಪೂರ್ವಜರ ನಿವಾಸದ ಮೇಲೂ ದಾಳಿ ನಡೆಸಲಾಗಿದೆ.

ತನಿಖಾ ಸಂಸ್ಥೆ ಸೆಂಥಿಲ್ ಬಾಲಾಜಿ ಅವರ ಮನೆ ಮೇಲೆ ದಾಳಿ ನಡೆಸಿದಾಗ. ಆ ಸಮಯದಲ್ಲಿ ಅವರು ಬೆಳಗಿನ ವಾಕಿಂಗ್‌ಗೆ ಹೊರಟಿದ್ದರು. ದಾಳಿಯ ಮಾಹಿತಿ ಸಿಕ್ಕ ತಕ್ಷಣ ಟ್ಯಾಕ್ಸಿ ಹಿಡಿದು ಮನೆಗೆ ಮರಳಿದರು. ಬಾಲಾಜಿ ಬಂಧನದ ನಂತರ ಡಿಎಂಕೆ ಸಕ್ರಿಯವಾಗಿದೆ ಮತ್ತು ಅವರ ಬಂಧನವನ್ನು ಅಸಾಂವಿಧಾನಿಕ ಎಂದು ಹೇಳುತ್ತಿದೆ ಡಿಎಂಕೆ ಕೂಡ ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ.

ಮತ್ತಷ್ಟು ಓದಿ: Tamil Nadu: ತಮಿಳುನಾಡು ಇಂಧನ ಸಚಿವ ಸೆಂಥಿಲ್ ಬಾಲಾಜಿ ನಿವಾಸದ ಮೇಲೆ ಇಡಿ ದಾಳಿ

ತಮಿಳುನಾಡು ಆರೋಗ್ಯ ಸಚಿವ ಎಂ ಸುಬ್ರಮಣಿಯನ್ ಮತ್ತು ರಾಜ್ಯ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರು ವಿದ್ಯುತ್ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಭೇಟಿ ಮಾಡಲು ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉದಯನಿಧಿ ಸ್ಟಾಲಿನ್, ಸೆಂಥಿಲ್ ಬಾಲಾಜಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರದಲ್ಲಿ ಕಾನೂನು ನೆರವು ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಸೆಂಥಿಲ್ ಬಾಲಾಜಿ ಅವರನ್ನು ಟಾರ್ಗೆಟ್ ಮಾಡಿ ಚಿತ್ರಹಿಂಸೆ ನೀಡಲಾಗಿದೆ ಎಂದು ತಮಿಳುನಾಡು ಕಾನೂನು ಸಚಿವ ಎಸ್.ರಘುಪತಿ ಹೇಳಿದ್ದಾರೆ. ಇಡಿ ಅಧಿಕಾರಿಗಳು ಅವರನ್ನು 24 ಗಂಟೆಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದರು. ಇದು ಸಂಪೂರ್ಣ ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ. ಇದಕ್ಕೆ ಇಡಿ ಉತ್ತರ ನೀಡಬೇಕು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us