Money Laundering Case: ಇಡಿ ಕಸ್ಟಡಿ ಅಂತ್ಯ: ನ್ಯಾಯಾಲಯದೆದುರು ಹಾಜರಾದ ದೆಹಲಿ ಸಚಿವ ಸತ್ಯೇಂದ್ರ ಜೈನ್

Money Laundering Case: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಇಡಿ ಕಸ್ಟಡಿ ಅಂತ್ಯವಾಗಿದ್ದು, ದೆಹಲಿಯ ರೋಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದೆದುರು ಅವರನ್ನು ಪ್ರಸ್ತುತಪಡಿಸಲಾಗಿದೆ.

Money Laundering Case: ಇಡಿ ಕಸ್ಟಡಿ ಅಂತ್ಯ: ನ್ಯಾಯಾಲಯದೆದುರು ಹಾಜರಾದ ದೆಹಲಿ ಸಚಿವ ಸತ್ಯೇಂದ್ರ ಜೈನ್
Satyendar JainImage Credit source: ANI
Follow us
TV9 Web
| Updated By: ನಯನಾ ರಾಜೀವ್

Updated on:Jun 09, 2022 | 12:24 PM

ದೆಹಲಿ: ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಇಡಿ ಕಸ್ಟಡಿ ಅಂತ್ಯವಾಗಿದ್ದು, ದೆಹಲಿಯ ರೋಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯದೆದುರು ಅವರನ್ನು ಪ್ರಸ್ತುತಪಡಿಸಲಾಗಿದೆ. ಹವಾಲಾ ಹಾಗೂ ಅಕ್ರಮ ಹಣ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮೇ 30 ರಂದು ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.

ಜೂನ್ 7 ರಂದು ಇಡಿ ಅಧಿಕಾರಿಗಳು ಸತ್ಯೇಂದ್ರ ಜೈನ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

ಇಡಿ ಅಧಿಕಾರಿಗಳು ದಾಳಿ ನಡೆಸಿರುವ ವೇಳೆ ಎರಡು ಕೋಟಿಗೂ ಹೆಚ್ಚು ನಗದು ಮತ್ತು 1.8 ಕೆಜಿ ತೂಕದ 133 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇಡಿ ತಿಳಿಸಿತ್ತು.

ಅಕ್ರಮ ಹಣ ವರ್ಗಾವಣೆ ಪ್ರಕರಣದ ಮುಂದುವರೆದ ಭಾಗವಾಗಿ ದೆಹಲಿಯಲ್ಲಿರುವ ಸತ್ಯೇಂದ್ರ ಜೈನ್ ಅವರ ನಿವಾಸ ಸೇರಿ ಒಟ್ಟು 7 ಕಡೆಗಳಲ್ಲಿ ದಾಳಿ ನಡೆಸಿತ್ತು.ಜೈನ್ ದೆಹಲಿಯಲ್ಲಿ ಹಲವಾರು ಶೆಲ್ ಕಂಪನಿಗಳನ್ನು ಖರೀದಿಸಿದ್ದಾರೆ ಮತ್ತು ಅವುಗಳ ಮೂಲಕ 16.39 ಕೋಟಿ ರೂ. ಮೌಲ್ಯದ ಕಪ್ಪು ಹಣವನ್ನು ವೈಟ್ ಮನಿಯನ್ನಾಗಿ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸತ್ಯೇಂದ್ರ ಜೈನ್ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಇ ಸಂಪೂರ್ಣ ಸುಳ್ಳು ಪ್ರಕರಣ ಎಂದು ಹೇಳಿದ್ದಾರೆ.ಹಣ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಚಿವರು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಾಯ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿತ್ತು.

ಸಚಿವ ಸತ್ಯೇಂದ್ರ ಜೈನ್ ಅವರು ಜೂನ್ 1 ರಿಂದ ಇಡಿ ಕಸ್ಟಡಿಯಲ್ಲಿದ್ದು, ಇಡಿ ಕಸ್ಟಡಿ ಅವಧಿಯನ್ನು ಜೂನ್ 9 ರವರೆಗೆ ಅವರೆಗೆ ವಿಸ್ತರಿಸಲಾಗಿದ್ದು ಇಂದು ಕಸ್ಟಡಿ ಅವಧಿ ಅಂತ್ಯಗೊಂಡಿದೆ.

ಪ್ರಕರಣವೇನು? ಕೋಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಏಪ್ರಿಲ್‌ನಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿತ್ತು.

ನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಜೈನ್ ಅವರು ಷೇರುದಾರರಾಗಿದ್ದ ನಾಲ್ಕು ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಜಾರಿ ನಿರ್ದೇಶನಾಲಯ ಆರೋಪ ಮಾಡಿತ್ತು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:23 pm, Thu, 9 June 22

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್