Breaking ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿಗೆ ಇಡಿ ಸಮನ್ಸ್

| Updated By: ರಶ್ಮಿ ಕಲ್ಲಕಟ್ಟ

Updated on: Jun 01, 2022 | 3:16 PM

National Herald Case ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ ಬುಧವಾರ ಸಮನ್ಸ್ ನೀಡಿದೆ.

Breaking ಅಕ್ರಮ ಹಣ ವರ್ಗಾವಣೆ ಪ್ರಕರಣ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ, ಪುತ್ರ ರಾಹುಲ್ ಗಾಂಧಿಗೆ ಇಡಿ ಸಮನ್ಸ್
ರಾಹುಲ್ ಗಾಂಧಿ-ಸೋನಿಯಾ ಗಾಂಧಿ
Follow us on

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi), ಪುತ್ರ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ (Enforcement Directorate )ಸಮನ್ಸ್  ನೀಡಿದೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ (National Herald newspaper) ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 8 ರಂದು ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿಗೆ (Rahul Gandhi) ಬುಧವಾರ ಸಮನ್ಸ್ ನೀಡಿದೆ. ಸೋನಿಯಾ ಗಾಂಧಿ ಅವರು ಹೇಳಿದ ದಿನಾಂಕದಂದು ಅಗತ್ಯವಿದ್ದಲ್ಲಿ ಹಾಜರಾಗುತ್ತಾರೆ. ಆದರೆ ಪಕ್ಷವು ತನಿಖಾ ಸಂಸ್ಥೆಗೆ ಪತ್ರ ಬರೆದು ರಾಹುಲ್ ಗಾಂಧಿಗೆ ಕೆಲವು ಸೌಕರ್ಯಗಳನ್ನು ಕೋರುತ್ತದೆ. ಅಕ್ರಮ ಹಣ ವಿನಿಮಯದ ಬಗ್ಗೆ ಯಾವುದೇ ಪುರಾವೆಗಳಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಇಡಿ ಮುಂದೆ ಹಾಜರಾಗಲು ನಿರ್ಧರಿಸಿದ್ದಾರೆ. ಹಾಜರಾಗುವುದಕ್ಕೆ ಅವರು ವಿಳಂಬ ಮಾಡುವುದಿಲ್ಲ ಅಥವಾ ಮುಂದೂಡುವುದಿಲ್ಲ ಎಂದು ಮೂಲಗಳು ತಿಳಿಸಿವೆ. “ಇದು ರಾಜಕೀಯ, ಸಾಮಾಜಿಕ, ಆರ್ಥಿಕ ಮತ್ತು ಕಾನೂನು ಹೋರಾಟ” ಎಂದು ಕಾಂಗ್ರೆಸ್ ಪಕ್ಷ ಹೇಳಿದೆ.


ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ,ಸೋನಿಯಾ ಮತ್ತು ರಾಹುಲ್ ಗಾಂಧಿಯವರಿಗೆ ಇಡಿ ನೋಟಿಸ್ ನೀಡಿದೆ. 1942ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಆರಂಭಿಸಲಾಯಿತು. ಆ ಹೊತ್ತಲ್ಲಿ ಬ್ರಿಟಿಷರು ಅದನ್ನು ದಮನಿಸಲು ನೋಡಿದರು. ಇದೀಗ ಮೋದಿ ಸರ್ಕಾರ ಇಡಿಯನ್ನು ಬಳಸಿ ಅದೇ ಕಾರ್ಯವನ್ನು ಮಾಡುತ್ತಿದೆ ಎಂದಿದ್ದಾರೆ.

ಜಾರಿ ನಿರ್ದೇಶನಾಲಯವು ಪ್ರಧಾನಿ ಮೋದಿಯವರ ಇಷ್ಟದ ಮತ್ತು ಅವರು ಸಾಕುತ್ತಿರುವ ಸಂಸ್ಥೆ. ಸಾರ್ವಜನಿಕರ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಈ ರೀತಿ ಮಾಡಲಾಗುತ್ತಿದೆ. ಈ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಸುರ್ಜೇವಾಲಾ ಹೇಳಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅನ್ನು ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ಪ್ರಕಟಿಸುತ್ತಿದ್ದು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಒಡೆತನದಲ್ಲಿದೆ. ತನಿಖೆಯ ಭಾಗವಾಗಿ ಇತ್ತೀಚೆಗೆ ಸಂಸ್ಥೆಯು ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಪವನ್ ಬನ್ಸಾಲ್ ಅವರನ್ನು ವಿಚಾರಣೆ ಮಾಡಿತ್ತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 2:00 pm, Wed, 1 June 22