AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hemant Soren: ದೆಹಲಿಗೆ ಬಂದಿದ್ದ ಜಾರ್ಖಂಡ್​ ಸಿಎಂ ಹೇಮಂತ್ ಸೊರೆನ್ ನಾಪತ್ತೆ, ಬಿಎಂಡಬ್ಲ್ಯೂ ಕಾರು ವಶಪಡಿಸಿಕೊಂಡ ಇಡಿ

ದೆಹಲಿಗೆ ಬಂದ ಬಳಿಕ ಜಾರ್ಖಂಡ್​ ಮುಖ್ಯಮಂತ್ರಿ ಹೇಮಂತ್ ಸೊರೆನ್ ನಾಪತ್ತೆಯಾಗಿದ್ದಾರೆ. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಜನವರಿ 31ರವರೆಗೆ ಜಾರಿ ನಿರ್ದೇಶನಾಲಯ ಸಮಯಾವಕಾಶವನ್ನು ನೀಡಿದೆ. ಸೋಮವಾರ ಇಡಿ ತಂಡವು ಹೇಮಂತ್ ಅವರ ದೆಹಲಿ ನಿವಾಸದಲ್ಲಿಯೇ ಇತ್ತು, ಆದರೂ ಎಲ್ಲಿಯೂ ಅವರು ಪತ್ತೆಯಾಗಿಲ್ಲ, ಬಳಿಕ ಅವರ ಬಿಎಂಡಬ್ಲ್ಯೂ ಕಾರನ್ನು ಇಡಿ ವಶಕ್ಕೆ ಪಡೆದಿದೆ.

Hemant Soren: ದೆಹಲಿಗೆ ಬಂದಿದ್ದ ಜಾರ್ಖಂಡ್​ ಸಿಎಂ ಹೇಮಂತ್ ಸೊರೆನ್ ನಾಪತ್ತೆ, ಬಿಎಂಡಬ್ಲ್ಯೂ ಕಾರು ವಶಪಡಿಸಿಕೊಂಡ ಇಡಿ
ಹೇಮಂತ್ ಸೊರೆನ್Image Credit source: Amarujala.com
ನಯನಾ ರಾಜೀವ್
|

Updated on: Jan 30, 2024 | 10:01 AM

Share

ದೆಹಲಿಗೆ ಬಂದ ಬಳಿಕ ಜಾರ್ಖಂಡ್​ ಮುಖ್ಯಮಂತ್ರಿ ಹೇಮಂತ್ ಸೊರೆನ್(Hemant Soren)ನಾಪತ್ತೆಯಾಗಿದ್ದಾರೆ. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಜನವರಿ 31ರವರೆಗೆ ಜಾರಿ ನಿರ್ದೇಶನಾಲಯ ಸಮಯಾವಕಾಶವನ್ನು ನೀಡಿದೆ. ಸೋಮವಾರ ಇಡಿ ತಂಡವು ಹೇಮಂತ್ ಅವರ ದೆಹಲಿ ನಿವಾಸದಲ್ಲಿಯೇ ಇತ್ತು, ಆದರೂ ಎಲ್ಲಿಯೂ ಅವರು ಪತ್ತೆಯಾಗಿಲ್ಲ, ಬಳಿಕ ಅವರ ಬಿಎಂಡಬ್ಲ್ಯೂ ಕಾರನ್ನು ಇಡಿ ವಶಕ್ಕೆ ಪಡೆದಿದೆ.

ಈ ವೇಳೆ ಹೇಮಂತ್ ಸೊರೆನ್ ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಇಡಿ ತಂಡ ಹೇಳಿದೆ. ಸೋಮವಾರ ದೆಹಲಿಯಲ್ಲಿರುವ ಸಿಎಂ ಹೇಮಂತ್ ಸೊರೆನ್ ಮನೆ ಮೇಲೂ ಇಡಿ ದಾಳಿ ನಡೆಸಿತ್ತು. ಈ ವೇಳೆ ತನಿಖಾ ತಂಡ ಕೆಲವು ದಾಖಲೆಗಳನ್ನು ಹಾಗೂ ಅವರ ಬಿಎಂಡಬ್ಲ್ಯು ಕಾರನ್ನು ಜಪ್ತಿ ಮಾಡಿದೆ. ಇಡಿ ಉನ್ನತ ಮೂಲಗಳ ಪ್ರಕಾರ, ತನಿಖಾ ಸಂಸ್ಥೆಗೆ ಮುಖ್ಯಮಂತ್ರಿ ಕಚೇರಿಯಿಂದ ಮೇಲ್ ಬಂದಿದೆ. ಜನವರಿ 31ರಂದು ಸಿಎಂ ತನಿಖೆಗೆ ಸಹಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅವರನ್ನು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯದ ಕೆಲವು ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಬೀಡುಬಿಟ್ಟಿವೆ. ಶನಿವಾರ ತಡರಾತ್ರಿ ಸೊರೆನ್ ದಿಢೀರ್ ದೆಹಲಿಗೆ ಹೊರಟಿದ್ದರು, ಚಾರ್ಟರ್ಡ್​ ವಿಮಾನದಲ್ಲಿ ಮುಂಜಾನೆ ದೆಹಲಿಗೆ ಬಂದಿಳಿದಿದ್ದರು.

ಮತ್ತಷ್ಟು ಓದಿ: Hemant Soren: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಪತ್ತೆ ಹಚ್ಚುವಲ್ಲಿ ಇಡಿ ತಂಡ ವಿಫಲ

ಅಂದಿನಿಂದ ಇಲ್ಲಿಯವರೆಗೆ ಅವರು ಎಲ್ಲಿದ್ದಾರೆ ಎಂದು ಯಾರಿಗೂ ತಿಳಿದಿಲ್ಲ. ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಇಡಿ 10ನೇ ಸಮನ್ಸ್ ಕಳುಹಿಸಿದೆ. ಇದಕ್ಕೂ ಮುನ್ನ ಜನವರಿ 20ರಂದು ಜಾರ್ಖಂಡ್‌ನಲ್ಲಿ ಇಡಿ ಸೋರೆನ್‌ರನ್ನು ವಿಚಾರಣೆ ನಡೆಸಿತ್ತು. ಈ ವೇಳೆ ಸೊರೆನ್‌ಗೆ 50 ಪ್ರಶ್ನೆಗಳನ್ನು ಕೇಳಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್