ಅಕ್ರಮ ಹಣ ವರ್ಗಾವಣೆ: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪಪಟ್ಟಿಯಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ. ಹರ್ಯಾಣದ ಫರಿದಾಬಾದ್‌ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು
ಪ್ರಿಯಾಂಕಾ ಗಾಂಧಿ ವಾದ್ರಾ
Follow us
ನಯನಾ ರಾಜೀವ್
|

Updated on: Dec 28, 2023 | 12:43 PM

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪಪಟ್ಟಿಯಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ. ಹರ್ಯಾಣದ ಫರಿದಾಬಾದ್‌ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ.

ನವದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್‌ಎಲ್ ಪಹ್ವಾ ಅವರಿಂದ 2006 ರಲ್ಲಿ ಭೂಮಿ ಖರೀದಿಸಿ, ಫೆಬ್ರವರಿ 2010 ರಲ್ಲಿ ಅದೇ ಭೂಮಿಯನ್ನು ಅವರಿಗೆ ಮಾರಾಟ ಮಾಡುವಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ.

ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರ ನಡುವೆ 334 ಕನಾಲ್ (40.08 ಎಕರೆ) ಅಳತೆಯ ಮೂರು ತುಂಡು ಭೂಮಿಯನ್ನು ಖರೀದಿಸಿದ್ದಾರೆ ಮತ್ತು ಅದೇ ಭೂಮಿಯನ್ನು 2010ರಲ್ಲಿ ಮಾರಾಟ ಮಾಡಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಲಂಡನ್ ಮೂಲದ ಸಂಜಯ್ ಭಂಡಾರಿ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಯುಎಇ ಮೂಲದ ಎನ್‌ಆರ್‌ಐ ಉದ್ಯಮಿ ಸಿಸಿ ಅಥವಾ ಚೆರುವತ್ತೂರು ಚಾಕುಟ್ಟಿ ಥಂಪಿ ಮತ್ತು ಯುಕೆ ಪ್ರಜೆ ಸುಮಿತ್ ಚಡ್ಡಾ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಇಡಿ ಹೇಳಿಕೆ ನೀಡಿದೆ.

ಮತ್ತಷ್ಟು ಓದಿ: ಸೋನಿಯಾ ಅಳಿಯ ರಾಬರ್ಟ್ ವಾದ್ರಾಗೆ ಮತ್ತೊಂದು ಸಂಕಷ್ಟ; ಅಕ್ರಮ ಹಣ ವರ್ಗಾವಣೆ ಆರೋಪಿ ಜತೆಗೆ ನಂಟು

ಜನವರಿ 2020 ರಲ್ಲಿ ಈ ಪ್ರಕರಣದಲ್ಲಿ ಥಂಪಿ ಅವರನ್ನು ಬಂಧಿಸಲಾಯಿತು ಮತ್ತು ಇಡಿ ಅವರು ವಾದ್ರಾ ಅವರ ಆಪ್ತ ಎಂದು ಆರೋಪಿಸಿದೆ. ಚಾರ್ಜ್ ಶೀಟ್‌ನಲ್ಲಿ, ಎಚ್‌ಎಲ್ ಪಹ್ವಾ ವಾದ್ರಾ ಮತ್ತು ಥಂಪಿ ಇಬ್ಬರಿಗೂ ಜಮೀನು ಮಾರಾಟ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಹರ್ಯಾಣದಲ್ಲಿ ಜಮೀನು ಖರೀದಿಸಲು ಬೇನಾಮಿ ಹಣ ನೀಡಲಾಗಿದ್ದು, ವಾದ್ರಾ ಜಮೀನು ಮಾರಾಟಕ್ಕೆ ಸಂಪೂರ್ಣ ಹಣ ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily Devotional: ನಮಃ ಮಂತ್ರಾಕ್ಷರದ ಅರ್ಥ ಮತ್ತು ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
Daily horoscope: ವೃಷಭ ರಾಶಿಯವರಿಗೆ ಇಂದು ಧನಯೋಗ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಕನ್ನಡ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಘೋಷಣೆ
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್