ಅಕ್ರಮ ಹಣ ವರ್ಗಾವಣೆ: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪಪಟ್ಟಿಯಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ. ಹರ್ಯಾಣದ ಫರಿದಾಬಾದ್‌ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು
ಪ್ರಿಯಾಂಕಾ ಗಾಂಧಿ ವಾದ್ರಾ

Updated on: Dec 28, 2023 | 12:43 PM

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪಪಟ್ಟಿಯಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ. ಹರ್ಯಾಣದ ಫರಿದಾಬಾದ್‌ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ.

ನವದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್‌ಎಲ್ ಪಹ್ವಾ ಅವರಿಂದ 2006 ರಲ್ಲಿ ಭೂಮಿ ಖರೀದಿಸಿ, ಫೆಬ್ರವರಿ 2010 ರಲ್ಲಿ ಅದೇ ಭೂಮಿಯನ್ನು ಅವರಿಗೆ ಮಾರಾಟ ಮಾಡುವಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ.

ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರ ನಡುವೆ 334 ಕನಾಲ್ (40.08 ಎಕರೆ) ಅಳತೆಯ ಮೂರು ತುಂಡು ಭೂಮಿಯನ್ನು ಖರೀದಿಸಿದ್ದಾರೆ ಮತ್ತು ಅದೇ ಭೂಮಿಯನ್ನು 2010ರಲ್ಲಿ ಮಾರಾಟ ಮಾಡಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಲಂಡನ್ ಮೂಲದ ಸಂಜಯ್ ಭಂಡಾರಿ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಈ ಪ್ರಕರಣದಲ್ಲಿ ಯುಎಇ ಮೂಲದ ಎನ್‌ಆರ್‌ಐ ಉದ್ಯಮಿ ಸಿಸಿ ಅಥವಾ ಚೆರುವತ್ತೂರು ಚಾಕುಟ್ಟಿ ಥಂಪಿ ಮತ್ತು ಯುಕೆ ಪ್ರಜೆ ಸುಮಿತ್ ಚಡ್ಡಾ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಇಡಿ ಹೇಳಿಕೆ ನೀಡಿದೆ.

ಮತ್ತಷ್ಟು ಓದಿ: ಸೋನಿಯಾ ಅಳಿಯ ರಾಬರ್ಟ್ ವಾದ್ರಾಗೆ ಮತ್ತೊಂದು ಸಂಕಷ್ಟ; ಅಕ್ರಮ ಹಣ ವರ್ಗಾವಣೆ ಆರೋಪಿ ಜತೆಗೆ ನಂಟು

ಜನವರಿ 2020 ರಲ್ಲಿ ಈ ಪ್ರಕರಣದಲ್ಲಿ ಥಂಪಿ ಅವರನ್ನು ಬಂಧಿಸಲಾಯಿತು ಮತ್ತು ಇಡಿ ಅವರು ವಾದ್ರಾ ಅವರ ಆಪ್ತ ಎಂದು ಆರೋಪಿಸಿದೆ.
ಚಾರ್ಜ್ ಶೀಟ್‌ನಲ್ಲಿ, ಎಚ್‌ಎಲ್ ಪಹ್ವಾ ವಾದ್ರಾ ಮತ್ತು ಥಂಪಿ ಇಬ್ಬರಿಗೂ ಜಮೀನು ಮಾರಾಟ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಹರ್ಯಾಣದಲ್ಲಿ ಜಮೀನು ಖರೀದಿಸಲು ಬೇನಾಮಿ ಹಣ ನೀಡಲಾಗಿದ್ದು, ವಾದ್ರಾ ಜಮೀನು ಮಾರಾಟಕ್ಕೆ ಸಂಪೂರ್ಣ ಹಣ ನೀಡಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us