ಅಕ್ರಮ ಹಣ ವರ್ಗಾವಣೆ: ದೆಹಲಿ ಸಚಿವ ಸತ್ಯೇಂದ್ರ ಜೈನ್​ಗೆ 14 ದಿನಗಳ ನ್ಯಾಯಾಂಗ ಬಂಧನ

Money Laundering:ಅಕ್ರಮ ಹಣ ವರ್ಗಾವಣೆ (Money Laundering) ಯಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ: ದೆಹಲಿ ಸಚಿವ ಸತ್ಯೇಂದ್ರ ಜೈನ್​ಗೆ 14 ದಿನಗಳ ನ್ಯಾಯಾಂಗ ಬಂಧನ
Satyendar Jain
TV9kannada Web Team

| Edited By: Nayana Rajeev

Jun 13, 2022 | 12:48 PM

ನವದೆಹಲಿ: ಅಕ್ರಮ ಹಣ ವರ್ಗಾವಣೆ (Money Laundering) ಯಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸತ್ಯೇಂದ್ರ ಜೈನ್ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಅವೆನ್ಯೂ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದ ಹಿಂದೆ ಜಾರಿ ನಿರ್ದೆಶನಾಯಲದ ಅಧಿಕಾರಿಗಳು ಸತ್ಯೇಂದ್ರ ಜೈನ್ ಅವರ ನಿವಾಸ ಸೇರಿ ಒಟ್ಟು 7 ಕಡೆ ಶೋಧ ನಡೆಸಿದ್ದರು. ಅಧಿಕಾರಿಗಳು 2.85 ಕೋಟಿ ರೂ.ನಷ್ಟು ನಗದು ಹಾಗೂ 133 ಚಿನ್ನದ ನಾಣ್ಯಗಳನ್ನು ವಶಕ್ಕೆ ಪಡೆದಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದ ಮುಂದುವರೆದ ಭಾಗವಾಗಿ ದೆಹಲಿಯಲ್ಲಿರುವ ಸತ್ಯೇಂದ್ರ ಜೈನ್ ಅವರ ನಿವಾಸ ಸೇರಿ ಒಟ್ಟು 7 ಕಡೆಗಳಲ್ಲಿ ದಾಳಿ ನಡೆಸಿತ್ತು.ಜೈನ್ ದೆಹಲಿಯಲ್ಲಿ ಹಲವಾರು ಶೆಲ್ ಕಂಪನಿಗಳನ್ನು ಖರೀದಿಸಿದ್ದಾರೆ ಮತ್ತು ಅವುಗಳ ಮೂಲಕ 16.39 ಕೋಟಿ ರೂ. ಮೌಲ್ಯದ ಕಪ್ಪು ಹಣವನ್ನು ವೈಟ್ ಮನಿಯನ್ನಾಗಿ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸತ್ಯೇಂದ್ರ ಜೈನ್ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಸಂಪೂರ್ಣ ಸುಳ್ಳು ಪ್ರಕರಣ ಎಂದು ಹೇಳಿದ್ದಾರೆ.ಹಣ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಚಿವರು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಾಯ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿತ್ತು.

ಪ್ರಕರಣವೇನು? ಕೋಲ್ಕತ್ತಾ ಮೂಲದ ಕಂಪನಿಯೊಂದಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಈ ವರ್ಷ ಏಪ್ರಿಲ್‌ನಲ್ಲಿ 4.81 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ವಶಪಡಿಸಿಕೊಂಡ ನಂತರ ಇಡಿ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಲಾಗಿತ್ತು. ನಿಖಾ ಸಂಸ್ಥೆಯು ಎಎಪಿ ನಾಯಕನ ವಿರುದ್ಧ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದ್ದು, ಜೈನ್ ಅವರು ಷೇರುದಾರರಾಗಿದ್ದ ನಾಲ್ಕು ಕಂಪನಿಗಳಿಂದ ಪಡೆದ ಹಣದ ಮೂಲವನ್ನು ವಿವರಿಸಿಲ್ಲ ಎಂದು ಜಾರಿ ನಿರ್ದೇಶನಾಲಯ ಆರೋಪ ಮಾಡಿತ್ತು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada