ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ನ್ಯಾಯಾಂಗ ಬಂಧನ 14 ದಿನಗಳವರೆಗೆ ವಿಸ್ತರಣೆ
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ (57) ಅವರನ್ನು ಮೇ 30 ರಂದು ಇಡಿ ಬಂಧಿಸಿತ್ತು.ಕಳೆದ ವಾರ ಅವರ ಆಮ್ಲಜನಕದ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ (Satyendar Jain) ಅವರ ನ್ಯಾಯಾಂಗ ಬಂಧನವನ್ನು ವಿಶೇಷ ಸಿಬಿಐ ನ್ಯಾಯಾಲಯ(Special CBI court) 14 ದಿನಗಳವರೆಗೆ ವಿಸ್ತರಿಸಿದೆ. ಆಸ್ಪತ್ರೆಗೆ ದಾಖಲಾಗಿರುವ ಎಎಪಿ ನಾಯಕ ಜೈನ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಿದ ಬಳಿಕ ಜೈನ್ ಅವರ ಕಸ್ಟಡಿಯನ್ನು ವಿಸ್ತರಿಸುವಂತೆ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ ಮನವಿಯ ಮೇರೆಗೆ ವಿಶೇಷ ನ್ಯಾಯಾಧೀಶ ಗೀತಾಂಜಲಿ ಗೋಯೆಲ್ ಈ ಆದೇಶವನ್ನು ಹೊರಡಿಸಿದ್ದಾರೆ. ಇದಕ್ಕಿಂತ ಮುಂಚೆ ವಿಚಾರಣೆಯ ಸಮಯದಲ್ಲಿ ಜೈನ್ ಅಥವಾ ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರು ನ್ಯಾಯಾಲಯದ ಮುಂದೆ ಹಾಜರಾಗಲಿಲ್ಲ ಎಂದು ತಿಳಿಸಿದ ನ್ಯಾಯಾಧೀಶರು ಮನವಿಯನ್ನು ಸ್ವೀಕರಿಸಲು ನಿರಾಕರಿಸಿದರು.
Special CBI court refuses to extend the judicial custody of Delhi Health Minister Satyendar Jain in alleged money laundering case as neither he was produced nor legally represented by a lawyer before the Court as he is hospitalised. Court asked ED to produce him through VC. pic.twitter.com/pfOySntFiD
— ANI (@ANI) June 27, 2022
ಜೈನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ ನಂತರ, ನ್ಯಾಯಾಲಯವು ವಿಡಿಯೊ ಕಾನ್ಫರೆನ್ಸ್ ಮೂಲಕ ಜೈನ್ ಅವರನ್ನು ಹಾಜರುಪಡಿಸಲು ಇಡಿಗೆ ನಿರ್ದೇಶಿಸಿತು.
ಏಜೆನ್ಸಿಯ ಮನವಿಯ ಮೇಲಿನ ವಾದವನ್ನು ಆಲಿಸಿದ ನ್ಯಾಯಾಧೀಶರು ಜೈನ್ ಅವರ ನ್ಯಾಯಾಂಗ ಬಂಧನವನ್ನು 14 ದಿನಗಳವರೆಗೆ ವಿಸ್ತರಿಸಿದರು.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈನ್ (57) ಅವರನ್ನು ಮೇ 30 ರಂದು ಇಡಿ ಬಂಧಿಸಿತ್ತು.ಕಳೆದ ವಾರ ಅವರ ಆಮ್ಲಜನಕದ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
Published On - 4:20 pm, Mon, 27 June 22