ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್​​ಗೆ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ

|

Updated on: Oct 12, 2023 | 2:57 PM

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್​​ ಇಂದು 3 ತಿಂಗಳವರೆಗೆ ವಿಸ್ತರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್​​ಗೆ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ
ನವಾಬ್ ಮಲಿಕ್
Follow us on

ದೆಹಲಿ, ಅ.12: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ (Nawab Malik) ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ಸುಪ್ರೀಂ ಕೋರ್ಟ್​​ ಇಂದು 3 ತಿಂಗಳವರೆಗೆ ವಿಸ್ತರಿಸಿದೆ. ಈಗಾಗಲೇ ಇಡಿ (ಜಾರಿ ನಿರ್ದೇಶನಾಲಯ) ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ನವಾಬ್ ಮಲಿಕ್ ಆರೋಗ್ಯ ಕಾರಣ ನೀಡಿ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಬಾಂಬೆ ಹೈಕೋರ್ಟ್ ನಿರಾಕರಿಸಿತ್ತು. ನಂತರ ಜುಲೈ 13ರಂದು ಜಾಮೀನು ವಿಚಾರವಾಗಿ ನವಾಬ್ ಮಲಿಕ್ ಸುಪ್ರೀಂಗೆ ಅರ್ಜಿ ಸಲ್ಲಿಸಿದರು.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ದೀಪಂಕರ್ ದತ್ತಾ ಅವರ ಪೀಠವು ಮಲಿಕ್ ಅವರಿಗೆ ಮಧ್ಯಂತರ ಜಾಮೀನನ್ನು ವಿಸ್ತರಿಸಿದೆ. ಮೂತ್ರಪಿಂಡದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆಗಸ್ಟ್ 11 ರಿಂದ ಎರಡು ತಿಂಗಳ ಕಾಲ ಮಧ್ಯಂತರ ಜಾಮೀನು ಪಡೆದ ನಂತರವು ಅವರ ಸ್ಥಿತಿ ಸರಿಯಿಲ್ಲದ ಕಾರಣ ಅವರ ಮಧ್ಯಂತರ ಜಾಮೀನನ್ನು ಮೂರು ತಿಂಗಳಿಗೆ ವಿಸ್ತರಿಸಿದೆ.

ಆದರೆ ಈ ಆದೇಶಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು ವಿರೋಧ ವ್ಕ್ತಪಡಿಸಿದ್ದಾರೆ. ದಾವೂದ್ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದರೆ ಎಂದು ಫೆಬ್ರವರಿ 2022 ರಲ್ಲಿ ಇಡಿ ಅವರನ್ನು ಬಂಧಿಸಿತ್ತು.

ಇದನ್ನೂ ಓದಿ: ಬಂಧನಕ್ಕೊಳಗಾಗಿರುವ ಸಚಿವ ನವಾಬ್ ಮಲಿಕ್ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲು

ಮಲಿಕ್ ಅವರು ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಪರಿಹಾರ ಕೋರಿದ್ದರು. ಅರ್ಹತೆಯ ಮೇರೆಗೆ ಜಾಮೀನು ಸಹ ಕೋರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ