ಕಲ್ಲಿದ್ದಲು ಕಳ್ಳ ಸಾಗಣೆ ಹಗರಣ: ಇಡಿ ಮುಂದೆ ಹಾಜರಾದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ

| Updated By: ರಶ್ಮಿ ಕಲ್ಲಕಟ್ಟ

Updated on: Sep 06, 2021 | 11:58 AM

Abhishek Banerjee: ನಾನು ತನಿಖೆಯನ್ನು ಎದುರಿಸಲು ಸಿದ್ಧನಿದ್ದೇನೆ ಮತ್ತು ನಾನು ಏಜೆನ್ಸಿಯೊಂದಿಗೆ ಸಹಕರಿಸುತ್ತೇನೆ" ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೋದರಳಿಯ, ಟಿಎಂಸಿ ಸಂಸದ  ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.

ಕಲ್ಲಿದ್ದಲು ಕಳ್ಳ ಸಾಗಣೆ ಹಗರಣ: ಇಡಿ ಮುಂದೆ ಹಾಜರಾದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ
ಅಭಿಷೇಕ್ ಬ್ಯಾನರ್ಜಿ
Follow us on

ದೆಹಲಿ: ಕಲ್ಲಿದ್ದಲು ಕಳ್ಳಸಾಗಣೆ ಹಗರಣಕ್ಕೆ ಸಂಬಂಧಿಸಿದ ಆರೋಪದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೋದರಳಿಯ, ಟಿಎಂಸಿ ಸಂಸದ  ಅಭಿಷೇಕ್ ಬ್ಯಾನರ್ಜಿ ಸೋಮವಾರ ಜಾರಿ ನಿರ್ದೇಶನಾಲಯ (ED) ಮುಂದೆ ಹಾಜರಾಗಿದ್ದಾರೆ.  33ರ ಹರೆಯದ ಅಭಿಷೇಕ್ ಬ್ಯಾನರ್ಜಿ  ಮಧ್ಯ ದೆಹಲಿಯ ಜಾಮ್ ನಗರದಲ್ಲಿರುವ ಕೇಂದ್ರ ಏಜೆನ್ಸಿಯ ಕಚೇರಿಗೆ 11 ಗಂಟೆಗೆ ಮುಂಚಿತವಾಗಿ ಬಂದರು.

“ನಾನು ತನಿಖೆಯನ್ನು ಎದುರಿಸಲು ಸಿದ್ಧನಿದ್ದೇನೆ ಮತ್ತು ನಾನು ಏಜೆನ್ಸಿಯೊಂದಿಗೆ ಸಹಕರಿಸುತ್ತೇನೆ” ಎಂದು ಅವರು ಹೇಳಿದರು.


ಪ್ರಕರಣದ ತನಿಖಾಧಿಕಾರಿಯು ಬ್ಯಾನರ್ಜಿಯವರ ಹೇಳಿಕೆಯನ್ನು ಮನಿ ಲಾಂಡರಿಂಗ್ ಕಾನೂನು (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ದಾಖಲಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಭಿಷೇಕ್ ಬ್ಯಾನರ್ಜಿ ಲೋಕಸಭೆಯಲ್ಲಿ ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದು, ತೃಣಮೂಲ ಕಾಂಗ್ರೆಸ್ (TMC) ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಅಸನ್ಸೋಲ್ ಮತ್ತು ಸುತ್ತಮುತ್ತಲಿನ ಕುನುಸ್ತೋರಿಯಾ ಮತ್ತು ಕಾಜೋರಾ ಪ್ರದೇಶಗಳಲ್ಲಿನ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಗೆ ಸಂಬಂಧಿಸಿದ ಬಹುಕೋಟಿ ಕಲ್ಲಿದ್ದಲು ಕಳ್ಳತನ ಹಗರಣದ ಆರೋಪದ ಮೇಲೆ ಸಿಬಿಐಯ 2020 ರ ಎಫ್‌ಐಆರ್ ಅನ್ನು ಅಧ್ಯಯನ ಮಾಡಿದ ನಂತರ ಇಡಿ ಪಿಎಂಎಲ್‌ಎ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ.

ಭಾನುವಾರ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ಯಾವುದೇ ಕೇಂದ್ರ ಸಂಸ್ಛೆಯು ಯಾವುದೇ ಅಕ್ರಮ ವಹಿವಾಟಿನಲ್ಲಿ ತನ್ನ ಪಾಲ್ಗೊಳ್ಳುವಿಕೆಯನ್ನು ಸಾಬೀತುಪಡಿಸಿದರೆ ಸ್ವತಃ ಗಲ್ಲಿಗೇರಿಸಿಕೊಳ್ಳುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

ಇದನ್ನೂ ಓದಿ:  Schools Reopen: ನಾಳೆಯಿಂದ 6 ರಿಂದ 8ನೇ ತರಗತಿ ಆರಂಭ, ಟಫ್ ರೂಲ್ಸ್ ಜೊತೆ 18 ತಿಂಗಳಿಂದ ಮುಚ್ಚಿದ್ದ ಸ್ಕೂಲ್ ಓಪನ್‌ಗೆ ಸಿದ್ಧತೆ

(Money laundering case TMC MP Abhishek Banerjee appears before Enforcement Directorate)

Published On - 11:57 am, Mon, 6 September 21