Tamil Nadu Elections 2021: ತಮಿಳುನಾಡಿನಲ್ಲಿ ಚುನಾವಣೆಗೆ ಮುನ್ನ ಹಣ ಹಂಚಲಾಗಿತ್ತು: ಕಮಲ್ ಹಾಸನ್ ಆರೋಪ

Tamil Nadu Voting Update: ಡಿಎಂಕೆ ಕಾರ್ಯಕರ್ತರು ಮತದಾರರರಿಗೆ ಹಣ ವಿತರಿಸುತ್ತಿರುವುದನ್ನು ನಾವು ನೋಡಿದ್ದೇವೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಹೇಳಿದ್ದಾರೆ.

Tamil Nadu Elections 2021: ತಮಿಳುನಾಡಿನಲ್ಲಿ ಚುನಾವಣೆಗೆ ಮುನ್ನ ಹಣ ಹಂಚಲಾಗಿತ್ತು: ಕಮಲ್ ಹಾಸನ್ ಆರೋಪ
ಕಮಲ್ ಹಾಸನ್ ಮತದಾನ
Follow us
|

Updated on:Apr 06, 2021 | 4:35 PM

ಕೊಯಮತ್ತೂರು: ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುನ್ನ ಸೋಮವಾರ ರಾತ್ರಿ ರಾಜಕೀಯ ಪಕ್ಷಗಳು ಜನರಿಗೆ ಹಣ ಹಂಚಿವೆ ಎಂದು ಮಕ್ಕಳ್ ನೀಧಿ ಮಯ್ಯಂ (MNM) ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಯವರಿಗೆ ದೂರು ನೀಡಿದ್ದಾರೆ. ಕಮಲ್ ಹಾಸನ್ ಇದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಕೆಲವೊಂದು ಮತಗಟ್ಟೆಗಳಲ್ಲಿ ಸಮಸ್ಯೆಯಾಗಿದೆ. ಆದರೆ ನಮ್ಮ ಪ್ರಧಾನ ದೂರು ಏನೆಂದರೆ ನಿನ್ನೆ ರಾತ್ರಿಯಿಂದ ರಾಜಕೀಯ ಪಕ್ಷಗಳು ಜನರಿಗೆ ಹಣ ಹಂಚಿವೆ. ಅವರು ತುಂಬಾ ಮೋಸದಿಂದ ಮತ್ತು ತ್ವರಿತ ಗತಿಯಲ್ಲಿ ಮಾಡಿದ್ದಾರೆ ಎಂದು ಕಮಲ್ ದೂರಿದ್ದಾರೆ.

ನಾವು ಕೆಲವರನ್ನು ಹಿಡಿದಿದ್ದೇವೆ, ಸಾಕ್ಷ್ಯಗಳು ಇವೆ. ಚುನಾವಣಾ ಆಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎನ್ಡಿ​ಟಿವಿ ಜತೆ ಮಾತನಾಡಿದ ಕಮಲ್ ಹೇಳಿದ್ದಾರೆ. ಈ ಕೃತ್ಯವನ್ನು ಖಂಡಿಸಿ ನಾನು ಪ್ರತಿಭಟನೆ ನಡೆಸುವುದಾಗಲೀ, ಮತದಾನ ಪ್ರಕ್ರಿಯೆಗೆ ತಡೆಯೊಡ್ಡುವುದಾಗಲೀ ಮಾಡುವುದಿಲ್ಲ. ನಾನು ಇಲ್ಲಿ ದೂರು ನೀಡಲು ಬಂದಿದ್ದೇನೆ ಎಂದಿದ್ದಾರೆ ಕಮಲ್.

ಚುನಾವಣಾ ಫಲಿತಾಂಶದ ಬಗ್ಗೆ ನಾನು ಧನಾತ್ಮಕವಾಗಿ ಚಿಂತಿಸುತ್ತಿದ್ದೇನೆ. ನಾನು ಕಮಲ್ ಹಾಸನ್ ಜತೆಗೆ ಬಂದಿದ್ದೇನೆ. ನಾನು ಅವರ ಮಗಳು, ಹಾಗಾಗಿ ಅವರ ಬೆಂಬಲಕ್ಕೆ ನಿಂತಿದ್ದೇನೆ. ಎಲ್ಲವೂ ಸರಿಹೋಗಲಿ ಎಂದು ಆಶಿಸುತ್ತೇನೆ ಎಂದು ಶ್ರುತಿ ಹಾಸನ್ ಪ್ರತಿಕ್ರಿಯಿಸಿದ್ದಾರೆ.

ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ್ ನೀಧಿ ಮಯ್ಯಂ ಪಕ್ಷದಿಂದ ಕಮಲ್ ಹಾಸನ್ ಸ್ಪರ್ಧಿಸುತ್ತಿದ್ದು ಬಿಜೆಪಿಯ ವನತಿ ಶ್ರೀನಿವಾಸನ್, ಕಾಂಗ್ರೆಸ್ ಪಕ್ಷದ ಮಯೂರ ಎಸ್. ಜಯಕುಮಾರ್ ಕಣದಲ್ಲಿದ್ದಾರೆ.

ತಮಿಳುನಾಡಿನ 234 ಚುನಾವಣಾ ಕ್ಷೇತ್ರಗಳಿಗೆ ಚುನಾವಣೆಗೆ ಒಂದೇ ಹಂತದ ಮತದಾನ ನಡೆಯುತ್ತಿದ್ದು ಮಧ್ಯಾಹ್ನ 2 ಗಂಟೆಗೆ ನಮಕ್ಕಲ್​ನಲ್ಲಿ ಶೇ 50.84 ಮತದಾನವಾಗಿದೆ. 3ಗಂಟೆಗೆ ರಾಣಿಪೇಟ್ ಜಿಲ್ಲೆಯಲ್ಲಿ ಶೇ 61.52ಮತದಾನವಾಗಿದೆ. ತಮಿಳುನಾಡಿನಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದ್ದು ಯಾವುದೇ ಅಹಿತಕರ ಘಟನೆಗಳು ವರದಿ ಆಗಿಲ್ಲ ಎಂದು ತಮಿಳುನಾಡಿನ ಮುಖ್ಯ ಚುನಾವಣಾಧಿಕಾರಿ ಸತ್ಯಬ್ರತ ಸಹೋ ಹೇಳಿದ್ದಾರೆ.

ತೊಂಡಮುತ್ತೂರ್ ಕ್ಷೇತ್ರದಲ್ಲಿ ಎಐಎಡಿಎಂಕೆ ಕಾರ್ಯಕರ್ತರಿಂದ ಹಲ್ಲೆ: ಡಿಎಂಕೆ ಆರೋಪ ತೊಂಡಮುತ್ತೂರ್ ವಿಧಾನಸಭಾ ಕ್ಷೇತ್ರದ ಸೆಲ್ವಪುರಂ ಮತಗಟ್ಟೆ ಹೊರಗಡೆ ಎಐಎಡಿಎಂಕೆ ಕಾರ್ಯಕರ್ತರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಡಿಎಂಕೆ ಅಭ್ಯರ್ಥಿ ಕಾರ್ತಿಕೇಯ ಶಿವಸೇನಾಪತಿ ಆರೋಪಿಸಿದ್ದಾರೆ.

ಡಿಎಂಕೆ ಹಣ ವಿತರಿಸುತ್ತಿರುವುದನ್ನು ನೋಡಿದ್ದೇವೆ : ಖುಷ್ಬೂ ಸುಂದರ್ ಡಿಎಂಕೆ ಕಾರ್ಯಕರ್ತರು ಮತದಾರರರಿಗೆ ಹಣ ವಿತರಿಸುತ್ತಿರುವುದನ್ನು ನಾವು ನೋಡಿದ್ದೇವೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ. ಅಡ್ಡದಾರಿ ಮೂಲಕ ಡಿಎಂಕೆ ಗೆಲ್ಲಲು ಪ್ರಯತ್ನಿಸುತ್ತಿದೆ ಎಂದು ಥೌಸಂಡ್ ಲೈಟ್ಸ್ ಚುನಾವಣಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ಹೇಳಿದ್ದಾರೆ.

ಗೆಲುವು ನಮ್ಮದೇ- ಕಾರ್ತಿ ಚಿದಂಬರಂ ತಮಿಳುನಾಡು ಚುನಾವಣೆಯಲ್ಲಿ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಭರ್ಜರಿ ಗೆಲುವು ಗಳಿಸಲಿದೆ. 2019ರ ಚುನಾವಣೆ ಇಲ್ಲಿ ಮತ್ತೆ ಪುನರಾವರ್ತನೆಯಾಗಲಿದೆ ಎಂದು ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಹೇಳಿದ್ದಾರೆ. ಶಿವಗಂಗಾ ಜಿಲ್ಲೆ ತಿರುಪತ್ತೂರ್ ಮತಗಟ್ಟೆಯಲ್ಲಿ ಪತ್ನಿ ಮತ್ತು ಮಗಳೊಂದಿಗೆ ಬಂದು ಕಾರ್ತಿ ಚಿದಂಬರಂ ಮತದಾನ ಮಾಡಿದ್ದಾರೆ.

ಉದಯನಿಧಿ ವಿರುದ್ಧ ಎಐಎಡಿಎಂಕೆ ದೂರು ಮತದಾನ ಮಾಡುವಾಗ ಡಿಎಂಕೆ ಪಕ್ಷದ ಲೋಗೊ ತೊಟ್ಟಿದ್ದರು ಎಂದು ಆರೋಪಿಸಿ ಎಐಎಡಿಎಂಕೆ ಉದಯನಿಧಿ ಸ್ಟಾಲಿನ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಖುಷ್ಬೂ ಸುಂದರ್ ವಿರುದ್ಧ ಡಿಎಂಕೆ ದೂರು ಬಿಜೆಪಿ ಅಭ್ಯರ್ಥಿ ಖುಷ್ಬೂ ಸುಂದರ್ ತಮ್ಮ ಕಾರಿನಲ್ಲಿ ಬಿಜೆಪಿ ಧ್ವಜವಿರಿಸಿ ಮತಗಟ್ಟೆಗೆ ಬಂದಿದ್ದು, ಚುನಾವಣಾ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಡಿಎಂಕೆ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಇದನ್ನೂ ಓದಿ:  Tamil Nadu Election 2021: ‘ನಾನು ರಾಜಕೀಯಕ್ಕಾಗಿ ಸಿನಿಮಾವನ್ನು ಸಂಪೂರ್ಣವಾಗಿ ಬಿಡಲೂ ಸಿದ್ಧನಿದ್ದೇನೆ..‘- ಕಮಲ್​ ಹಾಸನ್​

Published On - 4:35 pm, Tue, 6 April 21

ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?