AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಂತೆ ಬಂದು 6 ವರ್ಷದ ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನ ತಪ್ಪಿಸಿದ ಕೋತಿಗಳು

ಕಷ್ಟದಲ್ಲಿರುವಾಗ ದೇವರು ಯಾವ ರೂಪದಲ್ಲಿ ಬೇಕಾದರೂ ಬರಬಹುದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿ, ಪುಟ್ಟ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದಾಗ ಸಾಕ್ಷಾತ್ ಹನುಮಂತನಂತೆಯೇ ಕೋತಿಗಳು ಬಂದು ಬಾಲಕಿಯನ್ನು ರಕ್ಷಿಸಿವೆ. ಆಕೆ ಸುರಕ್ಷಿತವಾಗಿ ಮನೆಗೆ ಸೇರಿದ್ದಾಳೆ.

ದೇವರಂತೆ ಬಂದು 6 ವರ್ಷದ ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನ ತಪ್ಪಿಸಿದ ಕೋತಿಗಳು
ಕೋತಿ-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Sep 23, 2024 | 8:47 AM

Share

ದೇವರಂತೆ ಬಂದ ಕೋತಿಗಳು ಬಾಲಕಿ ಮೇಲೆ ನಡೆಯುತ್ತಿದ್ದ ಅತ್ಯಾಚಾರ ಯತ್ನವನ್ನು ತಪ್ಪಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್​ಪತ್​ನಲ್ಲಿ ನಡೆದಿದೆ. 6 ವರ್ಷದ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಕೋತಿಗಳ ಗುಂಪೊಂದು ಆ ವ್ಯಕ್ತಿಯ ಮೇಲೆ ದಾಳಿ ನಡೆಸಿವೆ.

ಯುಕೆಜಿ ವಿದ್ಯಾರ್ಥಿನಿ ಅಲ್ಲಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿ ಪೋಷಕರಿಗೆ ಈ ವಿಚಾರವನ್ನು ವಿವರಿಸಿದ್ದಾಳೆ. ಕೋತಿಗಳು ತನ್ನ ಪ್ರಾಣವನ್ನು ಉಳಿಸಿರುವುದಾಗಿ ಹೇಳಿದ್ದಾಳೆ. ಸೆಪ್ಟೆಂಬರ್ 20ರಂದು ಬಾಗ್​ಪತ್​ನ ದೌಲಾ ಗ್ರಾಮದಲ್ಲಿ ಘಟನೆ ನಡೆದಿದೆ, ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್​​ಗಳಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪರಾರಿಯಾಗಿದ್ದ ಆತನನ್ನು ಪೊಲೀಸರು ಹುಡುಕುತ್ತಿದ್ದಾರೆ.

ಪೊಲೀಸರ ಪ್ರಕಾರ ಆರೋಪಿ ಬಾಲಕಿಯನ್ನು ಅಪಹರಿಸಿ, ಒಂದೆಡೆ ಕರೆದೊಯ್ದು ಆಕೆಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯಕ್ಕೆ ಪ್ರಯತ್ನಿಸಿದ್ದರು. ಇದ್ದಕ್ಕಿದ್ದಂತೆ ಕೋತಿಗಳು ಸ್ಥಳಕ್ಕೆ ಬಂದಿದ್ದವು, ಆ ಕೋತಿಗಳನ್ನು ನೋಡಿ ಆರೋಪಿ ಪರಾರಿಯಾಗಿದ್ದಾನೆ.

ಗ್ರಾಮದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಆರೋಪಿ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ದೃಶ್ಯಾವಳಿಗಳಿಂದ ಆರೋಪಿ ಪತ್ತೆಗೆ ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

ಮತ್ತಷ್ಟು ಓದಿ: ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಆತ ಬೇರೆ ಗ್ರಾಮದ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮನೆಯ ಹೊರಗೆ ಆಟವಾಡುತ್ತಿರುವುದನ್ನು ಗಮನಿಸಿದ ಆತ ತನ್ನೊಂದಿಗೆ ಬರುವಂತೆ ಮನವೊಲಿಸಿದ್ದ ಎಂದು ಅವರು ತಿಳಿಸಿದ್ದಾರೆ.

ವಿರೋಧಿಸಿದರೆ ತನ್ನನ್ನು ಮತ್ತು ತನ್ನ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಕೋತಿಗಳ ದಾಳಿಯ ನಂತರ, ತಪ್ಪಿಸಿಕೊಂಡು ಹುಡುಗಿ ಮನೆಗೆ ಓಡಿ ಬಂದು ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಮನೆಯವರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್