AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಕಿಪಾಕ್ಸ್ ವೈರಸ್‌ನ ಮಾದರಿ ಪರೀಕ್ಷಿಸಲು ಭಾರತದಲ್ಲಿ 16 ಲ್ಯಾಬ್​​ಗಳ ಸ್ಥಾಪನೆ

ಆರೋಗ್ಯ ಸಚಿವಾಲಯದ ಮೂಲಗಳ ಪ್ರಕಾರ, ಮಂಕಿಪಾಕ್ಸ್ ಹರಡಿರುವ ದೇಶಗಳಿಂದ ಬರುವ ಜನರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುವುದು.

ಮಂಕಿಪಾಕ್ಸ್ ವೈರಸ್‌ನ ಮಾದರಿ ಪರೀಕ್ಷಿಸಲು ಭಾರತದಲ್ಲಿ 16 ಲ್ಯಾಬ್​​ಗಳ ಸ್ಥಾಪನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 26, 2022 | 12:41 PM

Share

ದೆಹಲಿ:  ಮಂಕಿಪಾಕ್ಸ್ ವೈರಸ್‌ನ (monkeypox virus) ಮಾದರಿ ಪರೀಕ್ಷಿಸಲು ಭಾರತದಲ್ಲಿ 16 ಲ್ಯಾಬ್​​ಗಳನ್ನು ಸ್ಥಾಪಿಸಲಾಗಿದೆ. ಉತ್ತರ ಪ್ರದೇಶ  (Uttar Pradesh) ಸರ್ಕಾರ ರಾಜ್ಯದಾದ್ಯಂತ  ಕೋವಿಡ್ ಆಸ್ಪತ್ರೆಗಳಲ್ಲಿ ಮಂಕಿಪಾಕ್ಸ್ ರೋಗಿಗಳಿಗಾಗಿ ಬೆಡ್ ಮೀಸಲಿಡಲಾಗಿದೆ. ಅಂದಹಾಗೆ  ಇಲ್ಲಿ ಈವರೆಗೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ.  ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ  ಮಾಡುವಂತೆ ಎಲ್ಲ ಆಸ್ಪತ್ರೆಗೆ ಸಿಬ್ಬಂದಿಗಳಿಗೆ ಸೂಚಿಸಲಾಗಿದೆ. ಮಂಕಿಪಾಕ್ಸ್ ಕಾಯಿಲೆ ಲಕ್ಷಣಗಳಿರುವ ವಿದೇಶಿ ಪ್ರಯಾಣಿಕರನ್ನು ದೆಹಲಿ ವಿಮಾನ ನಿಲ್ದಾಣದಿಂದಲೇ  ಲೋಕ್ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ಕಳುಹಿಸಲಾಗುವುದು. ನಗರದ ಲೋಕ್ ನಾಯಕ್ ಜೈ ಪ್ರಕಾಶ್ ಆಸ್ಪತ್ರೆಗೆ ದಾಖಲಾಗಿರುವ ರೋಗಿಯು ವಿದೇಶ ಪ್ರಯಾಣದ ಇತಿಹಾಸ ಹೊಂದಿಲ್ಲ. ಇದು  ಭಾರತದಲ್ಲಿ ಪತ್ತೆಯಾದ ನಾಲ್ಕನೇ ಮಂಕಿಪಾಕ್ಸ್ ಪ್ರಕರಣವಾಗಿದೆ. ಶನಿವಾರ ವಿಶ್ವ ಆರೋಗ್ಯ ಸಂಸ್ಥೆ  ಮಂಕಿಪಾಕ್ಸ್ ರೋಗವನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿತು. ಆರೋಗ್ಯ ಸಚಿವಾಲಯದ ಮೂಲಗಳ ಪ್ರಕಾರ, ಮಂಕಿಪಾಕ್ಸ್ ಹರಡಿರುವ ದೇಶಗಳಿಂದ ಬರುವ ಜನರ ಮೇಲೆ ಹೆಚ್ಚಿನ ನಿಗಾವಹಿಸಲಾಗುವುದು.

 ಉತ್ತರ ಪ್ರದೇಶದಲ್ಲಿ  ಶಂಕಿತ ಮಂಕಿಪಾಕ್ಸ್ ಪ್ರಕರಣದ ಬಗ್ಗೆ ವಿಶ್ವಆರೋಗ್ಯ ಸಂಸ್ಥೆ  ಎಚ್ಚರಿಕೆ

ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ (CMO) ರಾಜ್ಯದ ಔರಿಯಾ ಜಿಲ್ಲೆಯಲ್ಲಿ ಶಂಕಿತ ಮಂಕಿಪಾಕ್ಸ್ ಪ್ರಕರಣದ ಬಗ್ಗೆ ಎಚ್ಚರಿಕೆ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಮತ್ತು ಜಿಲ್ಲೆಯ ಆರೋಗ್ಯ ಇಲಾಖೆ ಈ ವಿಷಯದಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದೆ ಎಂದು ಮಿಂಟ್ ವರದಿ ಮಾಡಿದೆ.ಬಿದುನಾ ತಹಸಿಲ್‌ನ ಮೊಹಲ್ಲಾ ಜವಾಹರ್ ನಗರದ ಮಹಿಳೆಗೆ ಕಳೆದ ಒಂದು ವಾರದಿಂದ ಜ್ವರವಿದ್ದು ಅವರು ಮಂಕಿಪಾಕ್ಸ್ ರೋಗ ಲಕ್ಷಣಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ
Image
Monkeypox: ಕರ್ನಾಟಕದಲ್ಲಿ ಮುನ್ನೆಚ್ಚರಿಕೆ, ಎಲ್ಲ ಜಿಲ್ಲೆಗಳಲ್ಲಿ ಎರಡು ಬೆಡ್​ಗಳ ಪ್ರತ್ಯೇಕ ವಾರ್ಡ್​ ಮೀಸಲಿಡಲು ಸೂಚನೆ
Image
Monkeypox: ಮಂಕಿಪಾಕ್ಸ್​ಗೂ ಮಂಗಗಳಿಗೂ ಸಂಬಂಧವಿದೆಯೇ? ವೈರಸ್​ಗೆ ಮಂಕಿಪಾಕ್ಸ್ ಎಂದು ಹೆಸರು ಬರಲು ಕಾರಣವೇನು?
Image
Monkeypox VS Covid 19: ಮಂಕಿಪಾಕ್ಸ್​ ಹಾಗೂ ಕೋವಿಡ್-19 ನಡುವೆ ಸಾಮ್ಯತೆ ಇದೆಯೇ?

ಕರ್ನಾಟಕದ ವಿಮಾನ ನಿಲ್ದಾಣದಲ್ಲಿ ಮಂಕಿಪಾಕ್ಸ್ ಎಚ್ಚರಿಕೆ 

ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಂಕಿಪಾಕ್ಸ್ ಪೀಡಿತ ದೇಶಗಳಿಂದ ಅಥವಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಿಂದ ಬರುವವರ ಮೇಲೆ ನಿಗಾ ಇರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ.

Published On - 12:14 pm, Tue, 26 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ