AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox: ಭಾರತದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆ

ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ವೈರಸ್ ಪ್ರಕರಣ ದಾಖಲಾಗಿದೆ. ಆ ಮೂಲಕ ಭಾರತದಲ್ಲಿ ದಾಖಲಾದ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪತ್ತೆಯಾದ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ಯಾವುದೇ ವಿದೇಶಿ ಪ್ರಯಾಣದ ಇತಿಹಾಸವನ್ನು ಹೊಂದಿಲ್ಲ.

Monkeypox: ಭಾರತದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆ; ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆ
ಮಂಕಿಪಾಕ್ಸ್Image Credit source: google
TV9 Web
| Edited By: Rakesh Nayak Manchi|

Updated on:Jul 24, 2022 | 12:09 PM

Share

ದೆಹಲಿ: ಭಾರತದಲ್ಲಿ ಮಂಕಿಪಾಕ್ಸ್ ಸೋಂಕಿತರ ಸಂಖ್ಯೆ ಆಮೆ ವೇಗದಲ್ಲಿ ಏರಿಕೆಯಾಗುತ್ತಿದ್ದು, ಇದೀಗ ದೇಶದಲ್ಲಿ ಮತ್ತೊಂದು ಸೋಂಕಿತ ವ್ಯಕ್ತಿ ಪತ್ತೆಯಾಗಿದೆ. ಆ ಮೂಲಕ ದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ವೈರಸ್ (Monkeypox Virus) ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಪತ್ತೆಯಾದ ಮಂಕಿಪಾಕ್ಸ್ ಸೋಂಕಿತ ವ್ಯಕ್ತಿ ಯಾವುದೇ ವಿದೇಶಿ ಪ್ರಯಾಣದ ಇತಿಹಾಸವನ್ನು ಹೊಂದಿಲ್ಲ. ಅದಾಗ್ಯೂ ಸೋಂಕು ಲಕ್ಷಣಗಳಿಂದ ಬಳಲುತ್ತಿದ್ದ ಆ ವ್ಯಕ್ತಿಗೆ ಮಂಕಿಪಾಕ್ಸ್ ವೈರಲ್ ಪಾಸಿಟಿವ್ ಆಗಿದೆ.

ಕೇರಳದ ಬಳಿಕ ದೆಹಲಿಯ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ದೃಢಪಟ್ಟಿದ್ದು, 34 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ಈ ವ್ಯಕ್ತಿಯ ವಿದೇಶಿ ಪ್ರಯಾಣದ ಇತಿಹಾಸ ಇಲ್ಲದಿದ್ದರೂ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಆಯೋಜಿಸಿದ್ದ ಪಾರ್ಟಿಗೆ ಹಾಜರಾಗಿದ್ದರು. ಅದರಂತೆ ಇವರ ಪ್ರಾರ್ಥಮಿಕ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮುಂದಾಗುತ್ತಿದ್ದು, ಅವರನ್ನು ಕೂಡ ಮಂಕಿಪಾಕ್ಸ್ ತಪಾಸಣೆಗೆ ಒಳಪಡಿಸಲಿದ್ದಾರೆ.

ಸದ್ಯ ದೇಶದಲ್ಲಿ ಮಂಕಿಪಾಕ್ಸ್ ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿದ್ದು, ದೆಹಲಿಯಲ್ಲಿ ಶನಿವಾರ ಪತ್ತೆಯಾದ ಸೋಂಕಿತರನ್ನು ಹೊರತುಪಡಿಸಿ ಉಳಿದು ಮೂರು ಸೋಂಕು ಕೇರಳದಲ್ಲಿ ಪತ್ತೆಯಾಗಿದೆ. ಜುಲೈ ತಿಂಗಳ ಆರಂಭದಲ್ಲಿ ಯುಎಇಯಿಂದ ಕೇರಳಕ್ಕೆ ಆಗಮಿಸಿದ  35 ವರ್ಷದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ಪತ್ತೆಯಾಗಿತ್ತು. ನಂತರ 2ನೇ ಮಂಕಿಪಾಕ್ಸ್​ ಕೇಸ್ ಕೂಡ ಅಲ್ಲೇ ದಾಖಲಾಗಿತ್ತು. ಮೂರನೇ ಪ್ರಕರಣ ಮಲಪ್ಪುರಂ ಮೂಲದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿತ್ತು.

ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ಜಾಗತಿಕವಾಗಿ  ವೈರಸ್ ತನ್ನ ವ್ಯಾಪ್ತಿಯನ್ನು ಕೂಡ ಹೆಚ್ಚಿಸುತ್ತಿದೆ. ಸದ್ಯ 75 ದೇಶಗಳಿಗೆ ಕಾಲಿಟ್ಟ ಮಂಕಿಪಾಕ್ಸ್, 16 ಸಾವಿರಕ್ಕೂ ಹೆಚ್ಚು ಜನರನ್ನು ಸೋಂಕಿನಿಂದ ಬಳಲುವಂತೆ ಮಾಡಿದೆ. ಈ ನಡುವೆ ಮಂಕಿಪಾಕ್ಸ್ ಸೋಂಕಿನ ಪ್ರಕರಣಗಳಲ್ಲಿ ಏಕಾಏಕಿ ಏರಿಕೆಯಾಗುತ್ತಿದೆ. ಅದರಂತೆ ವಿಶ್ವ ಆರೋಗ್ಯ ಸಂಸ್ಥೆಯು ಮಂಕಿಪಾಕ್ಸ್ ಅನ್ನು ಜಾಗತಿಕ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಶನಿವಾರ ಘೋಷಿಸಿದೆ.

Published On - 12:08 pm, Sun, 24 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ