Breaking News: Monkeypox: ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರದ ಮಾರ್ಗಸೂಚಿ ಇಲ್ಲಿದೆ
ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ದೇಶಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಸರ್ಕಾರವು ಮಾರ್ಗಸೂಚಿ ಬಿಡುಗಡೆ ಮಾಡಿ.
ನವದೆಹಲಿ: ದೇಶದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದ್ದು, ದೇಶಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಸರ್ಕಾರವು ಮಾರ್ಗಸೂಚಿ ಬಿಡುಗಡೆ ಮಾಡಿ.
ಪ್ರಯಾಣಿಕರು ಅನುಸರಿಸಬೇಕಾದ ಕ್ರಮಗಳು -ಅನಾರೋಗ್ಯದಿಂದ ಬಳಲುತ್ತಿರುವವರ ಸಂಪರ್ಕದಲ್ಲಿದ್ದರೆ, ಅಥವಾ ನಿಮಗೆ ಯಾವುದೇ ಚರ್ಮರೋಗದ ಲಕ್ಷಣಗಳಿದ್ದರೆ ವಿಮಾನದಲ್ಲಿ ತೆರಳುವುದನ್ನು ಅವಾಯ್ಡ್ ಮಾಡಿ -ಇಲಿಗಳು, ಕೋತಿ, ಏಪ್ಸ್ಗಳು ಮೃತಪಟ್ಟಿದ್ದರೆ ಅಂತಹ ಜಾಗದಲ್ಲಿ ನೀವಿದ್ದರೆ ವಿಮಾನದಲ್ಲಿ ಪ್ರಯಾಣಿಸಬೇಡಿ -ನೀವು ಕಾಡು ಪ್ರಾಣಿಗಳ ಮಾಂಸ ಅದರಲ್ಲೂ ಆಫ್ರಿಕಾದ ಪ್ರಾಣಿಗಳ ಮಾಂಸವನ್ನು ತಿಂದಿದ್ದರೆ ನೀವು ವಿಮಾನದಲ್ಲಿ ಪ್ರಯಾಣಿಸುವುದನ್ನು ಸ್ವಲ್ಪ ದಿನದ ಮಟ್ಟಿಗೆ ಅವಾಯ್ಡ್ ಮಾಡಿ. -ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಯ ಬಟ್ಟೆ, ಹಾಸಿಗೆ ವಸ್ತ್ರಗಳು ಅಥವಾ ಯಾವುದೇ ವಸ್ತುವನ್ನು ನೀವು ಮುಟ್ಟಿದ್ದರೆ ನೀವು ಪ್ರಯಾಣಿಸಬೇಡಿ.
ಸುಮಾರು 60 ದೇಶಗಳಲ್ಲಿ ಜುಲೈ 13ರವರೆಗೆ 10,400ಕ್ಕೂ ಅಧಿಕ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದವು. ಮಂಕಿಪಾಕ್ಸ್ ವೈರಾಣು ಸಿಡುಬು ಉಂಟುಮಾಡುವ ವೈರಾಣುವಿಗೆ ಸಂಬಂಧಿಸಿದ್ದಾಗಿದ್ದು, ಸಿಡುಬು ವೈರಾಣುವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ. ಆದರೆ ಇವೆರಡೂ ಪೋಕ್ಸ್ವಿರಿಡೆ ಎಂಬ ತಳಿಯ ಪೈಕಿ ಆರ್ಥೋಪಾಕ್ಸ್ ವೈರಸ್ ಕುಲಕ್ಕೆ ಸೇರಿದ್ದಾಗಿದ್ದು ಮಂಕಿಪಾಕ್ಸ್ ನ ಮೊದಲ ಪ್ರಕರಣವನ್ನು 1958 ರಲ್ಲಿ ಸಂಶೋಧನೆಗಾಗಿ ಹಿಡಿದಿಟ್ಟಿದ್ದ ಮಂಗಗಳಿಂದ ಪತ್ತೆ ಮಾಡಲಾಗಿತ್ತು.
1970 ರಲ್ಲಿ ಪಶ್ಚಿಮ ಆಫ್ರಿಕಾದಲ್ಲಿ ಮೊದಲ ಬಾರಿಗೆ ಮಾನವರಲ್ಲಿ ಈ ಖಾಯಿಲೆ ಪತ್ತೆಯಾಗಿತ್ತು. 2020 ರಲ್ಲಿ ಡಬ್ಲ್ಯುಹೆಚ್ಒ ನೀಡಿದ ಮಾಹಿತಿಯ ಪ್ರಕಾರ 4,594 ಶಂಕಿತ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, 171 ಸಾವು ಸಂಭವಿಸಿದೆ (ಮರಣ ಪ್ರಮಾಣ ಶೇ.3.7 ರಷ್ಟಿದೆ) ಈ ಪ್ರಣಗಳು ಪತ್ತೆಯಾದಲ್ಲಿ ಪಿಸಿಆರ್ ಪರೀಕ್ಷೆ ಸೌಲಭ್ಯಗಳು ಲಭ್ಯವಿಲ್ಲದ ಕಾರಣ ಇವುಗಳನ್ನು ಶಂಕಿತ ಪ್ರಕರಣಗಳೆಂದು ಗುರುತಿಸಲಾಗಿದೆ.
ಲಕ್ಷಣಗಳು ಜ್ವರ, ತಲೆ ನೋವು, ಬೆನ್ನು ನೋವು, ಸ್ನಾಯು ನೋವು, ಚಳಿ ಹಾಗೂ ಬಳಲಿಕೆ, ಜ್ವರದೊಂದಿಗೆ ದೇಹದ ಬೇರೆ ಭಾಗಗಳಿಗೆ ಹರಡುವುದಕ್ಕೂ ಮುನ್ನ, ಮುಖ, ಕೈ ಕಾಲುಗಳಲ್ಲಿ ದದ್ದು ಹೊರಹೊಮ್ಮುತ್ತದೆ. ಬಳಿಕ ಬಾಯಿಯ ಒಳಗೆ, ಕಾರ್ನಿಯಾ, ಜನನಾಂಗಗಳಲ್ಲೂ ಕಾಣಿಸಿಕೊಳ್ಳಬಹುದಾಗಿದೆ.
Published On - 1:12 pm, Fri, 15 July 22