AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋತಿಯ ಕಣ್ಣಿನ ಪೊರೆಗೆ ಶಸ್ತ್ರ ಚಿಕಿತ್ಸೆ ಮಾಡಿ ದೃಷ್ಟಿ ಮರಳಿಸಿದ ವೈದ್ಯರು

ಹರ್ಯಾಣದ ವೈದ್ಯರು ಮಂಗನ ಕಣ್ಣಿನ ಪೊರೆಗೆ ಶಸ್ತ್ರ ಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕೋತಿಯೊಂದು ವಿದ್ಯುತ್​ ತಗುಲಿ ಕೆಳಗೆ ಬಿದ್ದಿತ್ತು, ನಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಪ್ರಾಣಿಪ್ರಿಯರೊಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು, ಆಗ ಮಂಗನ ಕಣ್ಣಿಗೆ ಪೊರೆ ಬಂದಿರುವ ಕಾರಣ ಅದಕ್ಕೆ ಕಣ್ಣು ಕಾಣದೆ ಅನಾಹುತಗಳು ಸಂಭವಿಸುತ್ತಿದೆ ಎಂಬುದನ್ನು ಅರಿತು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ.

ಕೋತಿಯ ಕಣ್ಣಿನ ಪೊರೆಗೆ ಶಸ್ತ್ರ ಚಿಕಿತ್ಸೆ ಮಾಡಿ ದೃಷ್ಟಿ ಮರಳಿಸಿದ ವೈದ್ಯರು
ಮಂಗ
ನಯನಾ ರಾಜೀವ್
|

Updated on: May 31, 2024 | 11:34 AM

Share

ಕೋತಿ(Monkey)ಯ ಕಣ್ಣಿನ ಯಶಸ್ವಿ ಪೊರೆ ಶಸ್ತ್ರ ಚಿಕಿತ್ಸೆ ನಡೆಸಿ ದೃಷ್ಟಿ ಮರಳಿಸಿ ವೈದ್ಯರು ಮಾನವೀಯತೆ ಮೆರೆದಿದ್ದಾರೆ. ಹರ್ಯಾಣದಲ್ಲಿ ಇದೇ ಮೊದಲ ಬಾರಿಗೆ ಮಂಗನ ಕಣ್ಣಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಮನುಷ್ಯರಂತೆ ಮಂಗಕ್ಕೂ ಕೂಡ ಕಣ್ಣಿನ ಪೊರೆ ಸಮಸ್ಯೆ ಕಾಡುತ್ತದೆ.

ಲುವಾಸ್‌ನಲ್ಲಿನ ಅನಿಮಲ್ ಸರ್ಜರಿ ಮತ್ತು ರೇಡಿಯಾಲಜಿ ವಿಭಾಗದ ಮುಖ್ಯಸ್ಥ ಆರ್‌ಎನ್ ಚೌಧರಿ ಅವರು ಮಂಗವನ್ನು ಹಂಸಿಯ ಪ್ರಾಣಿ ಪ್ರೇಮಿ ಮುನೀಶ್ ಆಸ್ಪತ್ರೆಗೆ ಕರೆತಂದಿದ್ದಾರೆ ಎಂದು ಹೇಳಿದರು. ಮಂಗಕ್ಕೆ ಕಣ್ಣು ಕಾಣದ ಹಿನ್ನೆಲೆಯಲ್ಲಿ ಹೇಗೋ ವಿದ್ಯುತ್​ ತಂತಿ ಮೇಲೆ ಹಾರಿದ ಪರಿಣಾಮ ವಿದ್ಯುತ್ ಪ್ರವಹಿಸಿತ್ತು. ಅದು ಕುಂಟುತ್ತಾ ಹೋಗುತ್ತಿತ್ತು. ಅದಕ್ಕೆ ಚಿಕಿತ್ಸೆ ಕೊಡಿಸಬೇಕೆಂದು ಕರೆದೊಯ್ದಾದ ಕಣ್ಣು ಕಾಣಿಸದಿರುವುದು ಗೊತ್ತಾಗಿದೆ. ನಂತರ ಚಿಕಿತ್ಸೆಗಾಗಿ ಕೋತಿಯನ್ನು ಲುವಾಸ್‌ನ ಶಸ್ತ್ರಚಿಕಿತ್ಸೆ ವಿಭಾಗಕ್ಕೆ ಕರೆತರಲಾಯಿತು ಎಂದರು.

ಪರೀಕ್ಷೆ ನಡೆಸಿದಾಗ ಎರಡು ಕಣ್ಣುಗಳಿಗೆ ಪೊರೆ ಬಂದಿರುವುದು ತಿಳಿದಿದೆ. ಬಳಿಕ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಈಗ ಮಂಗಕ್ಕೆ ಕಣ್ಣು ಕಾಣುತ್ತಿದೆ.

ಮತ್ತಷ್ಟು ಓದಿ:ಹುಕ್ಕೇರಿ: ರಸ್ತೆ ಅಪಘಾತದಲ್ಲಿ ಮರಿ ಮಂಗ ಸಾವು, ತಾಯಿಯ ಆಕ್ರಂದನ: ಸ್ಥಳೀಯರಿಂದ ಆರೈಕೆ

CPR ಮೂಲಕ ಮಂಗನ ಜೀವ ಉಳಿಸಿದ ಪೊಲೀಸ್​ ಯುಪಿಯ ಬುಲಂದ್‌ಶಹರ್‌ನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಸಿಬ್ಬಂದಿಯೊಬ್ಬರು ಕೋತಿಗೆ ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ. ಛಾತಾರಿ ಪೊಲೀಸ್ ಠಾಣೆ ಬಳಿ ಬಿಸಿಲಿಗೆ ಕೋತಿಯೊಂದು ಪ್ರಜ್ಞೆ ತಪ್ಪಿ ಬಿದ್ದಿರುವ ಘಟನೆ ವರದಿಯಾಗಿದೆ.

ಸ್ಥಳದಲ್ಲೇ ಇದ್ದ ಪೊಲೀಸ್‌ ಅಧಿಕಾರಿ ವಿಕಾಸ್‌ ತೋಮರ್‌ ತಕ್ಷಣವೇ ಕೋತಿಗೆ ಸಿಪಿಆರ್‌ ನೀಡಲು ಆರಂಭಿಸಿದರು. ಕ್ರಮೇಣ ಮಂಗನ ಸ್ಥಿತಿ ಸುಧಾರಿಸತೊಡಗಿತು. ಆಗ ಪೋಲೀಸರು ಕುಡಿಯಲು ನೀರು ಕೊಟ್ಟರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ