ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ […]

ಈ ಬಾರಿ ಮುಂಗಾರು ಮಳೆ ಶೇಕಡಾ 100ರಷ್ಟು ಉತ್ತಮ
ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ
ಸಾಧು ಶ್ರೀನಾಥ್​

Updated on: Apr 15, 2020 | 6:12 PM

ದೆಹಲಿ: ಕೊರೊನಾ ವೈರಸ್​ನಿಂದ ದೇಶಾದ್ಯಂತ ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಿರುವ ಬೆನ್ನಲ್ಲೇ ಸಮಾಧಾನಕರ ಸಂಗತಿಯೊಂದು ಹೊರಬಂದಿದೆ. ಈ ಬಾರಿ ಮುಂಗಾರು ಮಳೆಯು ಎಂದಿನಂತೆ ಸಾಮಾನ್ಯವಾಗಿ ಬೀಳಲಿದೆ ಎಂದು ಕೇಂದ್ರದ ಭೂ ವಿಜ್ಞಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ ತಿಂಗಳಿನಿಂದ ಸೆಪ್ಟೆಂಬರ್​ವರೆಗಿನ ಮುಂಗಾರು ಮಳೆಯು ಶೇ.100ರಷ್ಟು ಉತ್ತಮವಾಗಿ ಬೀಳುವ ನಿರೀಕ್ಷೆಯಿದೆ. ಹಾಗಾಗಿ ಕೊರೊನಾದಿಂದ ಕಂಗೆಟ್ಟಿದ್ದ ರೈತರಿಗೆ ಇದು ಸಿಹಿ ಸುದ್ದಿಯಾಗಿದೆ. ಈಗಾಗಲೇ ಲಾಕ್​ಡೌನ್​ನಿಂದ ರೈತರು ನಷ್ಟ ಅನುಭವಿಸಿದ್ದಾರೆ. ಮುಂಗಾರು ಮಳೆಗಾಲದ ವೇಳೆಗೆ ಕೊರೊನಾ ಕ್ಲಿಯರ್ ಆಗಿ ರೈತರಿಗೆ ಶುಭಸುದ್ದಿ ತರುತ್ತಾ ಎಂಬುದು ಕಾದುನೋಡಬೇಕಾಗಿದೆ.

Published On - 6:11 pm, Wed, 15 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us