Himachal Pradesh Flood: ಹಿಮಾಚಲಪ್ರದೇಶದಲ್ಲಿ ಭಾರೀ ಮಳೆ; ಭೂಕುಸಿತವಾಗಿ 10 ಜನ ನಾಪತ್ತೆ

Himachal Pradesh Rain Updates: ಹಿಮಾಚಲ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಇಲ್ಲಿನ ಕಂಗ್ರಾ ಜಿಲ್ಲೆಯ ಹಳ್ಳಿಯಲ್ಲಿ ಗುಡ್ಡ ಕುಸಿದು 10 ಜನರು ಕಣ್ಮರೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

Himachal Pradesh Flood: ಹಿಮಾಚಲಪ್ರದೇಶದಲ್ಲಿ ಭಾರೀ ಮಳೆ; ಭೂಕುಸಿತವಾಗಿ 10 ಜನ ನಾಪತ್ತೆ
ಹಿಮಾಚಲ ಪ್ರದೇಶದ ಪ್ರವಾಹ
Follow us
TV9 Web
| Updated By: Digi Tech Desk

Updated on:Jul 13, 2021 | 1:09 PM

ಕಂಗ್ರಾ: ಉತ್ತರ ಭಾರತದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಭೀತಿ ಎದುರಾಗಿದೆ. ಹಿಮಾಚಲ ಪ್ರದೇಶದ (Himachal Pradesh Flood) ಕಂಗ್ರಾ ಜಿಲ್ಲೆಯ ಶಾಹ್​ಪುರ ತೆಹ್ಸಿಲ್​ನ ಬೋಹ್ ಎಂಬ ಗ್ರಾಮದಲ್ಲಿ ಮಳೆಯಿಂದ ಭೂಕುಸಿತ (Landslide) ಸಂಭವಿಸಿದೆ. ಈ ವೇಳೆ ಮಣ್ಣಿನಡಿ ಸಿಲುಕಿದ್ದ 7 ಜನರನ್ನು ಎನ್​ಡಿಆರ್​ಎಫ್ (NDRF) ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನೂ 10 ಜನರು ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ (Rescue Operation) ನಡೆಸಲಾಗುತ್ತಿದೆ.

ಹಿಮಾಚಲ ಪ್ರದೇಶದಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೋಹ್ ಎಂಬ ಕುಗ್ರಾಮದಲ್ಲಿ ಇದ್ದಕ್ಕಿದ್ದಂತೆ ಬೆಟ್ಟ ಕುಸಿದ ಪರಿಣಾಮವಾಗಿ 17 ಜನರು ಮಣ್ಣಿನಡಿ ಸಿಲುಕಿದ್ದರು. ಅವರಲ್ಲಿ 7 ಜನರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ಮಳೆ ನಿಲ್ಲದ ಕಾರಣದಿಂದ ಕೆಸರಿನಡಿ ಸಿಲುಕಿರುವ ಬಾಕಿ 10 ಜನರನ್ನು ಹುಡುಕುವುದು ಕಷ್ಟವಾಗಿದೆ. ನಿನ್ನೆ ಸಂಜೆಯೇ ಈ ಘಟನೆ ನಡೆದಿದ್ದು, 8 ಗಂಟೆಗಳ ಕಾಲ ನಿರಂತರವಾಗಿ ಎನ್​ಡಿಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಹಿಮಾಚಲ ಪ್ರದೇಶದ ಧರ್ಮಶಾಲಾ (Dharamshala) ಸುತ್ತಮುತ್ತ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಧರ್ಮಶಾಲಾದಲ್ಲಿ ಪ್ರವಾಹದ ಹೊಡೆತಕ್ಕೆ ಮನೆಗಳು, ಕಾರು, ಸೇತುವೆಗಳು ಕೊಚ್ಚಿಹೋಗಿರುವ ವಿಡಿಯೋಗಳು ಭಾರೀ ವೈರಲ್ ಆಗಿತ್ತು. ಹಿಮಾಚಲ ಪ್ರದೇಶ ರಾಜ್ಯದ ಧರ್ಮಶಾಲಾ ಬಳಿ ಇರುವ ಭಾಗ್ಸು ನಾಗ್ ಗ್ರಾಮದಲ್ಲಿ ಪ್ರವಾಹದಿಂದ ಹತ್ತಾರು ಕಾರುಗಳು ರಸ್ತೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿದ್ದವು.

ಹಾಗೇ, ಮಂಝಿ ನದಿ ಉಕ್ಕಿ ಹರಿದು ಗ್ರಾಮದೊಳಗೆ ನುಗ್ಗಿದ ಭಯಾನಕ ದೃಶ್ಯಗಳು ಪ್ರವಾಸಿಗರ ಪಾಲಿನ ಸ್ವರ್ಗವಾದ ಹಿಮಾಚಲ ಪ್ರದೇಶದ ರೌದ್ರ ರೂಪವನ್ನು ತೋರಿಸುತ್ತಿದ್ದವು.

ಅದರ ಬೆನ್ನಲ್ಲೇ ಕಂಗ್ರಾ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇಲ್ಲಿನ ಸುತ್ತಮುತ್ತಲಿನ ಜನರು ಪ್ರಾಣಾಪಾಯದ ಭೀತಿಯಲ್ಲಿದ್ದಾರೆ. ಹಿಮಾಚಲಪ್ರದೇಶ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದರೂ ಪ್ರಾಕೃತಿಕ ವಿಕೋಪವನ್ನು ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಜುಲೈ 15ರವರೆಗೂ ಹಿಮಾಚಲಪ್ರದೇಶದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Dharamshala Flood: ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಭಾರೀ ಪ್ರವಾಹ; ಕಣ್ಣೆದುರೇ ಕೊಚ್ಚಿಹೋಯ್ತು ಕಾರುಗಳು

ಇದನ್ನೂ ಓದಿ: Karnataka Weather: ಕರ್ನಾಟಕದಲ್ಲಿ ಕೊಂಚ ತಗ್ಗಿದ ವರುಣನ ಆರ್ಭಟ; ಮಲೆನಾಡು, ಕರಾವಳಿ ಭಾಗದಲ್ಲಿ ಇಂದು ಯೆಲ್ಲೋ ಅಲರ್ಟ್​

Published On - 12:53 pm, Tue, 13 July 21