Monsoon 2022: ತಮಿಳುನಾಡಿನಾದ್ಯಂತ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ

ತಮಿಳುನಾಡಿಗೆ ಮುಂಗಾರು( Monsoon) ಆಗಮಿಸಿದ್ದು, ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Monsoon 2022: ತಮಿಳುನಾಡಿನಾದ್ಯಂತ ಇಂದು ಗುಡುಗು ಸಹಿತ ಭಾರಿ ಮಳೆಯ ಮುನ್ಸೂಚನೆ
Rain
Follow us
TV9 Web
| Updated By: ನಯನಾ ರಾಜೀವ್

Updated on: Jun 22, 2022 | 11:15 AM

ತಮಿಳುನಾಡಿಗೆ ಮುಂಗಾರು( Monsoon) ಆಗಮಿಸಿದ್ದು, ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈನ ಸುತ್ತಮುತ್ತಲ ಪ್ರದೇಶಗಳಾದ ತಿರುವಳ್ಳೂರು, ಕಾಂಚಿಪುರಂ, ಚೆಂಗಲ್​ಪಟ್ಟು, ರಾಣಿಪೇಟ್, ನೀಲ್​ಗಿರಿಸ್, ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳಲ್ಲೂ ಮುಂದಿನ 1-3 ಗಂಟೆಗಳ ಒಳಗೆ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.

ಕಳೆದ ಎರಡು ದಿನಗಳಿಂದ ಚೆನ್ನೈ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳಲ್ಲಿ ಇಡೀ ತಮಿಳುನಾಡಿನಾದ್ಯಂತ ಅತಿ ಹೆಚ್ಚಿನ ಮಳೆಯಾಗಲಿದೆ ಎಂದು ಚೆನ್ನೈನ ಸ್ಥಳೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಂಗಳವಾರ ನೀಲ್​ಗಿರೀಸ್, ಕೊಯಮತ್ತೂರು, ದಿಂಡಿಗಲ್, ಥೇನಿ, ಕೃಷ್ಣಗಿರಿ, ತಿರುಪತ್ತೂರು, ಧರ್ಮಪುರಿ, ತಿರುವಲ್ಲೂರು, ಚೆನ್ನೈ, ಕಾಂಚಿಪುರಂ, ಚೆಂಗಲ್​ಪಟ್ಟುವಿನಲ್ಲಿ ಮಳೆಯಾಗಿದೆ.

ಪುದುಚೇರಿ, ಕಾರೈಕಲ್ ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ. ಕನಿಷ್ಠ ಉಷ್ಣಾಂಶ 24-25 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಬಹುದು. ಮುಂದಿನ 48 ಗಂಟೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26-27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.

ಕರ್ನಾಟಕದಲ್ಲೂ ಮಳೆ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ದಾವಣಗೆರೆ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್