ತಮಿಳುನಾಡಿಗೆ ಮುಂಗಾರು( Monsoon) ಆಗಮಿಸಿದ್ದು, ಇಂದು ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚೆನ್ನೈನ ಸುತ್ತಮುತ್ತಲ ಪ್ರದೇಶಗಳಾದ ತಿರುವಳ್ಳೂರು, ಕಾಂಚಿಪುರಂ, ಚೆಂಗಲ್ಪಟ್ಟು, ರಾಣಿಪೇಟ್, ನೀಲ್ಗಿರಿಸ್, ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳಲ್ಲೂ ಮುಂದಿನ 1-3 ಗಂಟೆಗಳ ಒಳಗೆ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ.
ಕಳೆದ ಎರಡು ದಿನಗಳಿಂದ ಚೆನ್ನೈ ಹಾಗೂ ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಮುಂದಿನ ಐದು ದಿನಗಳಲ್ಲಿ ಇಡೀ ತಮಿಳುನಾಡಿನಾದ್ಯಂತ ಅತಿ ಹೆಚ್ಚಿನ ಮಳೆಯಾಗಲಿದೆ ಎಂದು ಚೆನ್ನೈನ ಸ್ಥಳೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮಂಗಳವಾರ ನೀಲ್ಗಿರೀಸ್, ಕೊಯಮತ್ತೂರು, ದಿಂಡಿಗಲ್, ಥೇನಿ, ಕೃಷ್ಣಗಿರಿ, ತಿರುಪತ್ತೂರು, ಧರ್ಮಪುರಿ, ತಿರುವಲ್ಲೂರು, ಚೆನ್ನೈ, ಕಾಂಚಿಪುರಂ, ಚೆಂಗಲ್ಪಟ್ಟುವಿನಲ್ಲಿ ಮಳೆಯಾಗಿದೆ.
ಪುದುಚೇರಿ, ಕಾರೈಕಲ್ ಪ್ರದೇಶದಲ್ಲಿ ಸಾಧಾರಣ ಮಳೆಯಾಗಲಿದೆ. ಕನಿಷ್ಠ ಉಷ್ಣಾಂಶ 24-25 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಬಹುದು. ಮುಂದಿನ 48 ಗಂಟೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26-27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ.
ಕರ್ನಾಟಕದಲ್ಲೂ ಮಳೆ: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 26ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ದಾವಣಗೆರೆ, ಕೋಲಾರ, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ