Monsoon 2022: ಕರ್ನಾಟಕದ ಕರಾವಳಿಯಲ್ಲಿ ಇಂದು ಮಳೆ; ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

Karnataka Weather Today: ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Monsoon 2022: ಕರ್ನಾಟಕದ ಕರಾವಳಿಯಲ್ಲಿ ಇಂದು ಮಳೆ; ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
ಮಳೆImage Credit source: Times of India
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 28, 2022 | 5:49 AM

ಬೆಂಗಳೂರು: ಬೆಂಗಳೂರಿನಲ್ಲಿ (Bengaluru Rains) ಎರಡು ದಿನಗಳಿಂದ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಕಡಿಮೆಯಾಗಿದೆ. ಆದರೂ ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ ಮತ್ತು ಲಕ್ಷದ್ವೀಪದಲ್ಲಿ ಇಂದು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ (Rainfall) ಸಾಧ್ಯತೆ ಇದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಯಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇಂದು ಉತ್ತರಾಖಂಡದಲ್ಲಿ ಹಿಮ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಒಡಿಶಾ, ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ರಾಜಸ್ಥಾನದಲ್ಲಿ ಚಂಡಮಾರುತದ ಸಾಧ್ಯತೆಯಿದೆ. ಪಶ್ಚಿಮ ರಾಜಸ್ಥಾನದಲ್ಲಿ ಬಿಸಿಗಾಳಿಯ ಮುನ್ಸೂಚನೆ ಇದೆ.

ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಒಳನಾಡಿನಲ್ಲಿ ಇಂದು ಗುಡುಗು ಸಹಿತ ಹಗುರ ಮಳೆ

ಇದನ್ನೂ ಓದಿ
Image
Karnataka Rain: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಇಂದು ಚದುರಿದ ಮಳೆ; ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
Image
Karnataka Rain: ಕರ್ನಾಟಕದ ಕರಾವಳಿ, ಒಳನಾಡಿನಲ್ಲಿ ಇಂದು ಗುಡುಗು ಸಹಿತ ಹಗುರ ಮಳೆ
Image
Karnataka Rain: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಚದುರಿದ ಮಳೆ

ಭಾನುವಾರ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಸಾಕಷ್ಟು ವ್ಯಾಪಕವಾದ ಹಿಮ ಅಥವಾ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಸೋಮವಾರದಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಇಂದು ಮತ್ತು ಭಾನುವಾರ ಹಿಮಾಚಲ ಪ್ರದೇಶದಲ್ಲಿ ಚದುರಿದ ಮಳೆ ಅಥವಾ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮುಂಗಾರು ವಿಳಂಬ: ಮೇ 27ರಂದೇ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿತ್ತು. ಆದರೆ, ಮುಂಗಾರು ಕೊಂಚ ವಿಳಂಬವಾಗಲಿದ್ದು, ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ. ಈಗಾಗಲೇ ಅಂಡಮಾನ್ ದ್ವೀಪಗಳನ್ನು ತಲುಪಿರುವ ಮುಂಗಾರು ಮಾರುತಗಳು ಈಗ ಅರಬ್ಬಿ ಸಮುದ್ರದ ಕಡೆ ಚಲಿಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಮೇ 29ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.

ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯು ಮುಂದಿನ 2 ದಿನಗಳವರೆಗೆ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮೇ 30ರವರೆಗೆ ಕೇರಳ ಮತ್ತು ಮಾಹೆಯಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮೇ 30ರವರೆಗೆ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗಲಿದೆ.

ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್