ಬೆಂಗಳೂರು: ಬೆಂಗಳೂರಿನಲ್ಲಿ (Bengaluru Rains) ಎರಡು ದಿನಗಳಿಂದ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಕಡಿಮೆಯಾಗಿದೆ. ಆದರೂ ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳ ಮತ್ತು ಲಕ್ಷದ್ವೀಪದಲ್ಲಿ ಇಂದು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ (Rainfall) ಸಾಧ್ಯತೆ ಇದೆ. ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಅರುಣಾಚಲ ಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು ಮತ್ತು ಕರ್ನಾಟಕದ ಕರಾವಳಿಯಲ್ಲಿ ಅಲ್ಲಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇಂದು ಉತ್ತರಾಖಂಡದಲ್ಲಿ ಹಿಮ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಒಡಿಶಾ, ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ರಾಜಸ್ಥಾನದಲ್ಲಿ ಚಂಡಮಾರುತದ ಸಾಧ್ಯತೆಯಿದೆ. ಪಶ್ಚಿಮ ರಾಜಸ್ಥಾನದಲ್ಲಿ ಬಿಸಿಗಾಳಿಯ ಮುನ್ಸೂಚನೆ ಇದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಕರಾವಳಿ, ಒಳನಾಡಿನಲ್ಲಿ ಇಂದು ಗುಡುಗು ಸಹಿತ ಹಗುರ ಮಳೆ
ಭಾನುವಾರ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಸಾಕಷ್ಟು ವ್ಯಾಪಕವಾದ ಹಿಮ ಅಥವಾ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಸೋಮವಾರದಂದು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್, ಇಂದು ಮತ್ತು ಭಾನುವಾರ ಹಿಮಾಚಲ ಪ್ರದೇಶದಲ್ಲಿ ಚದುರಿದ ಮಳೆ ಅಥವಾ ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮುಂಗಾರು ವಿಳಂಬ:
ಮೇ 27ರಂದೇ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿತ್ತು. ಆದರೆ, ಮುಂಗಾರು ಕೊಂಚ ವಿಳಂಬವಾಗಲಿದ್ದು, ಇನ್ನೆರಡು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಪ್ರವೇಶವಾಗುವ ಸಾಧ್ಯತೆಯಿದೆ. ಈಗಾಗಲೇ ಅಂಡಮಾನ್ ದ್ವೀಪಗಳನ್ನು ತಲುಪಿರುವ ಮುಂಗಾರು ಮಾರುತಗಳು ಈಗ ಅರಬ್ಬಿ ಸಮುದ್ರದ ಕಡೆ ಚಲಿಸುತ್ತಿವೆ. ಮುಂಜಾಗ್ರತಾ ಕ್ರಮವಾಗಿ ಕೇರಳದ ಬಹುತೇಕ ಜಿಲ್ಲೆಗಳಲ್ಲಿ ಮೇ 29ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯು ಮುಂದಿನ 2 ದಿನಗಳವರೆಗೆ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮೇ 30ರವರೆಗೆ ಕೇರಳ ಮತ್ತು ಮಾಹೆಯಲ್ಲಿ ಗುಡುಗು ಮತ್ತು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮೇ 30ರವರೆಗೆ ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಚದುರಿದ ಮಳೆಯಾಗಲಿದೆ.
ಇನ್ನಷ್ಟು ಮಳೆಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ