Himachal Pradesh Rain: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹದ ಎಚ್ಚರಿಕೆ, 7 ಜಿಲ್ಲೆಗಳಿಗೆ ರೆಡ್ ಅಲರ್ಟ್​

|

Updated on: Jul 09, 2023 | 10:46 AM

ಮುಂಗಾರು ಈ ಬಾರಿ ತಡವಾಗಿ ಆಗಮಿಸಿದರೂ ಹಲವು ರಾಜ್ಯಗಳಲ್ಲಿ ಅನಾಹುತಗಳನ್ನು ಸೃಷ್ಟಿಸುತ್ತಿದೆ. ದೆಹಲಿಯ ಎನ್​ಸಿಆರ್​ನಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ.

Himachal Pradesh Rain: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹದ ಎಚ್ಚರಿಕೆ, 7 ಜಿಲ್ಲೆಗಳಿಗೆ ರೆಡ್ ಅಲರ್ಟ್​
ಮಳೆ
Image Credit source: Mint
Follow us on

ಮುಂಗಾರು ಈ ಬಾರಿ ತಡವಾಗಿ ಆಗಮಿಸಿದರೂ ಹಲವು ರಾಜ್ಯಗಳಲ್ಲಿ ಅನಾಹುತಗಳನ್ನು ಸೃಷ್ಟಿಸುತ್ತಿದೆ. ದೆಹಲಿಯ ಎನ್​ಸಿಆರ್​ನಲ್ಲಿ ಶನಿವಾರ ಬೆಳಗ್ಗೆಯಿಂದ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಹಿಮಾಚಲಪ್ರದೇಶದಲ್ಲೂ ಮಳೆ ಸುರಿಯುತ್ತಿದ್ದು, ಪ್ರವಾಹ ಎಚ್ಚರಿಕೆ ನೀಡಲಾಗಿದ್ದು 7 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಇದಲ್ಲದೇ ಜುಲೈ 10ಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಏತನ್ಮಧ್ಯೆ, ಹಿಮಾಚಲ ಪ್ರದೇಶದ ಲಾಹೌಲ್ ಸ್ಪಿತಿಯಲ್ಲಿಯೂ ಪ್ರವಾಹ ಮತ್ತು ಹಿಮಕುಸಿತದ ಎಚ್ಚರಿಕೆಗಳನ್ನು ನೀಡಲಾಗಿದೆ.

ಲಾಹೌಲ್-ಸ್ಪಿತಿಯಲ್ಲಿ ಆಗುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಮತ್ತು ಹಿಮಕುಸಿತಗಳು ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶನಿವಾರದಂದು 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 3 ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಇದಲ್ಲದೇ ಭೂಕುಸಿತದ ಎಚ್ಚರಿಕೆಯನ್ನೂ ನೀಡಲಾಗಿದೆ.

ಮತ್ತಷ್ಟು ಓದಿ: Amarnath Yatra: ಭಾರಿ ಮಳೆ, ಭೂಕುಸಿತ, ಸತತ 3ನೇ ದಿನವೂ ಅಮರನಾಥ ಯಾತ್ರೆ ಸ್ಥಗಿತ, ಸಾವಿರಾರು ಯಾತ್ರಿಕರ ಪರದಾಟ

ಕುಲುವಿನಲ್ಲಿನ ಹವಾಮಾನ ವೈಪರೀತ್ಯದಿಂದಾಗಿ ಜನರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಮಳೆಯಿಂದಾಗಿ ಇಲ್ಲಿ ಭೂಕುಸಿತಗಳು ಸಂಭವಿಸುತ್ತಿದ್ದು, ರಸ್ತೆಗಳಲ್ಲಿ ಅವಶೇಷಗಳು ಶೇಖರಣೆಯಾಗಿವೆ. ಇದರಿಂದಾಗಿ ಹಲವೆಡೆ ರಸ್ತೆ ಬಂದ್ ಆಗಿದೆ. ಮಳೆ ನಿಂತ ತಕ್ಷಣ ರಸ್ತೆಗಳನ್ನು ಸ್ವಚ್ಛಗೊಳಿಸುವ ಕೆಲಸ ಮಾಡಲಾಗುತ್ತಿದೆ.

ಅದೇ ಸಮಯದಲ್ಲಿ, ಮಂಡಿ ಮತ್ತು ಕುಲುವಿನಲ್ಲಿ ನಿರಂತರ ಭಾರೀ ಮಳೆಯ ನಡುವೆ ಬಿಯಾಸ್ ನದಿ ಉಕ್ಕಿ ಹರಿಯುತ್ತಿದೆ. ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 3ರಲ್ಲಿ ಮಂಡಿಯಿಂದ ಕುಲು ಕಡೆಗೆ ಸಂಚಾರವನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.
ಇದಲ್ಲದೇ ಜಮ್ಮು-ಕಾಶ್ಮೀರದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಜನರ ಸಮಸ್ಯೆಗಳು ಹೆಚ್ಚಿವೆ.

ಇದರ ಪರಿಣಾಮ ಅಮರನಾಥ ಯಾತ್ರೆಯ ಮೇಲೂ ಕಾಣುತ್ತಿದೆ. ಪ್ರತಿಕೂಲ ಹವಾಮಾನದಿಂದಾಗಿ ಶನಿವಾರ ಸತತ ಎರಡನೇ ದಿನವೂ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. ಗುರುವಾರ ರಾತ್ರಿಯಿಂದ ಜಮ್ಮು ಮತ್ತು ಕಾಶ್ಮೀರದ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಇದಲ್ಲದೆ, ಅನೇಕ ಎತ್ತರದ ಪ್ರದೇಶಗಳಲ್ಲಿ ಹಿಮಪಾತವೂ ಸಂಭವಿಸಿದೆ.

ಇವುಗಳಲ್ಲಿ ಮಹಾಗುನ್ ಟಾಪ್ ಮತ್ತು ಅಮರನಾಥ ಗುಹೆ ದೇವಾಲಯದ ಸುತ್ತಲಿನ ಪ್ರದೇಶಗಳು ಸೇರಿವೆ. ಸೋಮವಾರದವರೆಗೆ ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದಲ್ಲದೆ, ಭಾನುವಾರದವರೆಗೆ ರಾಜಸ್ಥಾನ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ