ಉತ್ತರ ಭಾರತದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು 12 ಮಂದಿ ಮೃತಪಟ್ಟಿದ್ದಾರೆ, ಹಿಮಾಚಲ ಪ್ರದೇಶದೊಂದೇ ಕಡೆ 20 ಮಂದಿ ಸಾವನ್ನಪ್ಪಿದ್ದಾರೆ. ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಾಗಲಿದೆ.
ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ನೀರು ನಿಂತಿರುವುದು ಟ್ರಾಫಿಕ್ ಜಾಮ್‌ಗೆ ಕಾರಣವಾಯಿತು. ನಗರವು 24 ಗಂಟೆಗಳಲ್ಲಿ 153 ಮಿಮೀ ಮಳೆಯನ್ನು ದಾಖಲಿಸಿದೆ, ಇದು 1982 ರಿಂದ ಜುಲೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಎಂದು ಹೇಳಲಾಗುತ್ತಿದೆ.
ಇಂದು ಕೂಡ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಗುರುಗ್ರಾಮದ ಹಲವಾರು ಭಾಗಗಳು ಜಲಾವೃತವಾಗಿದ್ದು, ಹಲವು ಕಡೆ ವಿದ್ಯುತ್ ಕಡಿತವಾಗಿತ್ತು.
ಮತ್ತಷ್ಟು ಓದಿ: Karnataka Rains: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಜುಲೈ 16ರವರೆಗೂ ಭಾರಿ ಮಳೆಯ ಮುನ್ಸೂಚನೆ
ನಾಳೆ ದೆಹಲಿಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ, ಜುಲೈ 15 ರವರೆಗೆ ಲಘು ಮಳೆಯಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ 58 ವರ್ಷದ ಮಹಿಳೆಯೊಬ್ಬರು ಫ್ಲಾಟ್‌ನ ಮೇಲ್ಛಾವಣಿಯು ಅವರ ಮೇಲೆ ಕುಸಿದು ಬಿದ್ದು ಮೃತಪಟ್ಟರೆ, ರಾಜಸ್ಥಾನದಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಇಂದು ಮುಂಜಾನೆ ಭಾರೀ ಮಳೆಗೆ ಮನೆ ಕುಸಿದು ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಇದೇ ರೀತಿಯ ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಿನ್ನೆ ಪೂಂಚ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದಲ್ಲಿ ಇಬ್ಬರು ಸೇನಾ ಯೋಧರು ಕೊಚ್ಚಿ ಹೋಗಿದ್ದರು.
ರಾಜ್‌ಸಮಂದ್, ಜಲೋರ್, ಪಾಲಿ, ಅಜ್ಮೀರ್, ಅಲ್ವಾರ್, ಬನ್ಸ್ವಾರಾ, ಭರತ್‌ಪುರ್, ಭಿಲ್ವಾರಾ, ಬುಂದಿ, ಚಿತ್ತೋರ್‌ಗಢ, ದೌಸಾ, ಧೌಲ್‌ಪುರ್, ಜೈಪುರ ಮತ್ತು ಕೋಟಾ ಸೇರಿದಂತೆ ರಾಜಸ್ಥಾನದ ಒಂಬತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಮತ್ತಷ್ಟು ಓದಿ: ಮುಂದುವರೆದ ಮಳೆ, ನಾಳೆ ದೆಹಲಿಯಲ್ಲಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿದ ಸಿಎಂ ಅರವಿಂದ್ ಕೇಜ್ರಿವಾಲ್
ನಿರಂತರ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ವಾರ್ಷಿಕ ಅಮರನಾಥ ಯಾತ್ರೆಯನ್ನು ಸತತ ನಾಲ್ಕನೇ ದಿನವಾದ ಇಂದು ಸ್ಥಗಿತಗೊಳಿಸಲಾಗಿದೆ. ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಸುಮಾರು 3,000 ವಾಹನಗಳು ಸಿಲುಕಿಕೊಂಡಿವೆ, ಅಲ್ಲಿ ನಿನ್ನೆ ರಸ್ತೆಯ ಒಂದು ಭಾಗವು ಕುಸಿದಿದೆ.
ಶಿಮ್ಲಾ, ಸಿರ್ಮೌರ್, ಲಾಹೌಲ್ ಮತ್ತು ಸ್ಪಿತಿ, ಚಂಬಾ ಮತ್ತು ಸೋಲನ್‌ನಲ್ಲಿ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳು ಉಂಟಾಗಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಚಂಡೀಗಢದಲ್ಲಿ ದಿನವಿಡೀ ಮಳೆ ಸುರಿಯಿತು, ಕೇರಳದ 6 ಜಿಲ್ಲೆಗಳಿಯೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದಲ್ಲೂ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ