ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ, ಇಲ್ಲಿಯವರೆಗೆ 81 ಮಂದಿ ಸಾವು

ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಿರಂತರ ಮಳೆ ಮತ್ತು ಭೂಕುಸಿತದಿಂದ 81 ಜನರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆಯ ಅವಶೇಷಗಳಡಿ ಸಿಲುಕಿರುವ ದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ. ಮುಂದಿನ ಕೆಲವು ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ, ಇಲ್ಲಿಯವರೆಗೆ 81 ಮಂದಿ ಸಾವು
ಹಿಮಾಚಲ ಪ್ರದೇಶ ಮಳೆImage Credit source: Mint
Follow us
ನಯನಾ ರಾಜೀವ್
|

Updated on: Aug 17, 2023 | 9:24 AM

ಹಿಮಾಚಲ ಪ್ರದೇಶ(Himachal Pradesh) ಮತ್ತು ಉತ್ತರಾಖಂಡ(Uttarakhand)ದಲ್ಲಿ ನಿರಂತರ ಮಳೆ ಮತ್ತು ಭೂಕುಸಿತ(Landslide)ದಿಂದ 81 ಜನರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ರಕ್ಷಿಸಲು ಮತ್ತು ಹಲವಾರು ಸ್ಥಳಗಳಲ್ಲಿ ಮನೆಯ ಅವಶೇಷಗಳಡಿ ಸಿಲುಕಿರುವ ದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ. ಮುಂದಿನ ಕೆಲವು ದಿನಗಳಲ್ಲಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯಿಂದ ತತ್ತರಿಸಿರುವ ಹಿಮಾಚಲ ಪ್ರದೇಶದಲ್ಲಿ ಬುಧವಾರ ಮೃತರ ಸಂಖ್ಯೆ 71ಕ್ಕೆ ಏರಿಕೆಯಾಗಿದ್ದು, ಹೆಚ್ಚಿನ ಮೃತದೇಹಗಳು ಪತ್ತೆಯಾಗಿವೆ. ಕಳೆದ ಮೂರು ದಿನಗಳಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಭಾನುವಾರ ರಾತ್ರಿಯಿಂದ ಒಟ್ಟು 57 ಶವಗಳನ್ನು ಹೊರ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: Himachal Pradesh Rain: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಪ್ರವಾಹದ ಎಚ್ಚರಿಕೆ, 7 ಜಿಲ್ಲೆಗಳಿಗೆ ರೆಡ್ ಅಲರ್ಟ್​

ಶಿಮ್ಲಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭೂಕುಸಿತ ಉಂಟಾಗಿದೆ, ಅಲ್ಲಿ ಮೂರು ಪ್ರದೇಶಗಳು- ಸಮ್ಮರ್ ಹಿಲ್, ಫಾಗ್ಲಿ ಮತ್ತು ಕೃಷ್ಣ ನಗರವು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾಗಿವೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ ರಾಜ್ಯದಲ್ಲಿ ಒಟ್ಟು 214 ಜನರು ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಮತ್ತು 38 ಜನರು ಇನ್ನೂ ನಾಪತ್ತೆಯಾಗಿದ್ದಾರೆ.

ಸಮ್ಮರ್ ಹಿಲ್ ಮತ್ತು ಕೃಷ್ಣ ನಗರ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಸಮ್ಮರ್ ಹಿಲ್ ಸೈಟ್‌ನಿಂದ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಿಮ್ಲಾ ಡೆಪ್ಯುಟಿ ಕಮಿಷನರ್ ಆದಿತ್ಯ ನೇಗಿ ತಿಳಿಸಿದ್ದಾರೆ. ಇದುವರೆಗೆ ಸಮ್ಮರ್ ಹಿಲ್‌ನಲ್ಲಿ 13, ಫಾಗ್ಲಿಯಲ್ಲಿ ಐದು ಮತ್ತು ಕೃಷ್ಣನಗರದಲ್ಲಿ ಎರಡು ಮೃತ ದೇಹಗಳು ಪತ್ತೆಯಾಗಿವೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಸಂಭವಿಸುವ ಭೀತಿಯಲ್ಲಿ ಕೃಷ್ಣಾ ನಗರದಲ್ಲಿನ ಸುಮಾರು 15 ಮನೆಗಳನ್ನು ತೆರವುಗೊಳಿಸಲಾಗಿದ್ದು, ಕುಟುಂಬಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿವೆ. ಹಿಮಾಚಲ ಪ್ರದೇಶವು ಈ ವರ್ಷ 54 ದಿನಗಳ ಮುಂಗಾರಿನಲ್ಲಿ ಈಗಾಗಲೇ 742 ಮಿಮೀ ಮಳೆಯನ್ನು ಕಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ