Monsoon 2023: ಇಂದು ಈ ರಾಜ್ಯಗಳಲ್ಲಿ ಮಹಾ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ದೇಶದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 11ರಂದು ಹಿಮಾಚಲಪ್ರದೇಶ, ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಮಳೆಯು ಭಾರಿ ಅನಾಹುತವನ್ನುಂಟು ಮಾಡಿತ್ತು.

Monsoon 2023: ಇಂದು ಈ ರಾಜ್ಯಗಳಲ್ಲಿ ಮಹಾ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಮಳೆImage Credit source: India Today
Follow us
ನಯನಾ ರಾಜೀವ್
|

Updated on: Jul 12, 2023 | 10:43 AM

ದೇಶದ ಹಲವೆಡೆ ಇಂದು ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 11ರಂದು ಹಿಮಾಚಲಪ್ರದೇಶ, ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಮಳೆಯು ಭಾರಿ ಅನಾಹುತವನ್ನುಂಟು ಮಾಡಿತ್ತು. ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ಪಕ್ಕದ ಪ್ರದೇಶಗಳಲ್ಲಿ ಜುಲೈ 12 ರಂದು( 115.6 ರಿಂದ 204.4 ಮಿಮೀ) ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಭಾರೀ ಮಳೆಯ ನಡುವೆ, IMD ಜುಲೈ 12 ಕ್ಕೆ ಆರೆಂಜ್ ಅಲರ್ಟ್ ನೀಡಿದೆ. ಸತತ ಭಾರೀ ಮಳೆಯಿಂದಾಗಿ ಉತ್ತರಾಖಂಡದ ಸೋನ್‌ಪ್ರಯಾಗ ಮತ್ತು ಗೌರಿಕುಂಡ್‌ನಲ್ಲಿ ಕೇದಾರನಾಥ ಯಾತ್ರೆಯನ್ನು ನಿಲ್ಲಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಜುಲೈ 12-13ರಂದು ಬಿಹಾರದಲ್ಲಿ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ನೀಡಲಾಗಿದೆ. ಜುಲೈ 12 ರಂದು 204.4 ಮಿ.ಮೀಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ. ಸಿಕ್ಕಿಂ, ಪಶ್ಚಿಮ ಬಂಗಾಳಕ್ಕೆ ಆರೆಂಜ್ ಅಲರ್ಟ್​ ನೀಡಲಾಗಿದೆ.

ಇಂದು ಅರುಣಾಚಲ ಪ್ರದೇಶ, ಅಸ್ಸಾಂ ಹಾಗೂ ಮೇಘಾಲಯದಲ್ಲಿ ಮಹಾಮಳೆ ಸುರಿಯಲಿದೆ ಎಂದು ಹೇಳಲಾಗಿದೆ. ಪಂಜಾಬ್​ ಹಾಗೂ ಹರ್ಯಾಣದಲ್ಲಿ ಸತತ 3 ದಿನಗಳ ಭಾರಿ ಮಳೆ ಬಳಿಕ ಈಗ ಕೊಂಚ ಬಿಡುವು ಪಡೆದಿದೆ. ಈ ಪ್ರದೇಶದಲ್ಲಿ ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಮತ್ತಷ್ಟು ಓದಿ: Karnataka Rains: ಮುಂದಿನ 3 ದಿನಗಳ ಕಾಲ ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

ಪಂಜಾಬ್ ಪಟಿಯಾಲಾ, ರೂಪನಗರ, ಮೋಗಾ, ಲುಧಿಯಾನದಲ್ಲಿ 9 ಸಾವಿರಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಹಾಗೂ ಮೇಘಾಲಯ, ಅರುಣಾಚಲಪ್ರದೇಶ, ನಾಗಾಲ್ಯಾಂಡ್​, ಮಣಿಪುರ ಮತ್ತು ಬಿಹಾರದಲ್ಲಿ ಮುಂದಿನ 2 ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 14 ಹಾಗೂ 15ರಂದು ಒಡಿಶಾದಲ್ಲಿ ಭಾರಿ ಮಳೆಯಾಗಲಿದೆ, ಯಮುನಾ ನದಿಯ ನೀರಿನ ಮಟ್ಟವು ಬುಧವಾರ ಮುಂಜಾನೆ 207.18 ಮೀಟರ್‌ಗೆ ಏರಿದೆ ಮತ್ತು ರಾಜಧಾನಿಯಲ್ಲಿ ಪ್ರವಾಹದ ಭೀತಿಯನ್ನು ಉಂಟುಮಾಡುವ ನಿರೀಕ್ಷೆಯಿದೆ. ಅತಿ ಹೆಚ್ಚು ಪ್ರವಾಹ ಮಟ್ಟ ದಾಖಲೆ 207.49 ಮೀಟರ್ ಆಗಿದೆ.

ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಪ್ರವಾಹ ಮೇಲ್ವಿಚಾರಣಾ ಪೋರ್ಟಲ್ ಪ್ರಕಾರ, ಯಮುನಾ ನದಿಯು ಅತ್ಯಧಿಕ ದಾಖಲೆಗೆ ಉಬ್ಬಿತು ಮತ್ತು ಹಳೆ ರೈಲ್ವೆ ಸೇತುವೆಯಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ 206.76 ಮೀಟರ್‌ಗಳಿಂದ ಬುಧವಾರ ಬೆಳಿಗ್ಗೆ 7 ಗಂಟೆಗೆ 207.18 ಮೀಟರ್‌ಗಳಿಗೆ ಏರಿದೆ.

ಮಳೆಯಿಂದಾಗಿ ಯಮುನಾ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ನದಿ ತೀರದ ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ