Monsoon 2024: ಮೇ ತಿಂಗಳಲ್ಲೇ ಭಾರತ ಪ್ರವೇಶಿಸಲಿದೆ ಮುಂಗಾರು, ಯಾವ್ಯಾವ ರಾಜ್ಯಗಳಲ್ಲಿ ಯಾವಾಗ ಮಳೆ?

ಈ ಬಾರಿ ನೈಋತ್ಯ ಮುಂಗಾರು ವಾಡಿಕೆಗೂ ಮುನ್ನವೇ ದೇಶವನ್ನು ಆವರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 19ರೊಳಗೆ ಮುಂಗಾರು ದೇಶವನ್ನು ಪ್ರವೇಶಿಸಲಿದೆ ಮೇ ಕೊನೆಯ ವಾರದಲ್ಲಿ ಕರ್ನಾಟಕ, ಕೇರಳ ಸೇರಿದಂತೆ ಹಲವೆಡೆ ಮಳೆ ಶುರುವಾಗಲಿದೆ.

Monsoon 2024: ಮೇ ತಿಂಗಳಲ್ಲೇ ಭಾರತ ಪ್ರವೇಶಿಸಲಿದೆ ಮುಂಗಾರು, ಯಾವ್ಯಾವ ರಾಜ್ಯಗಳಲ್ಲಿ ಯಾವಾಗ ಮಳೆ?
Image Credit source: NOAA
Follow us
ನಯನಾ ರಾಜೀವ್
|

Updated on: May 14, 2024 | 10:33 AM

ಶಾಖದ ಅಲೆಯಿಂದ ಕಂಗೆಟ್ಟಿದ್ದ ದೇಶದ ಜನತೆಗೆ ಭಾರತೀಯ ಹವಾಮಾನ ಇಲಾಖೆ(IMD) ಸಿಹಿ ಸುದ್ದಿ ನೀಡಿದೆ. ಮೇ ತಿಂಗಳಲ್ಲೇ ಮುಂಗಾರು(Monsoon) ಆಗಮನದ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ಮೇ 19ರೊಳಗೆ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಹೇಳಿದೆ. ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ್ ಮಹಾಪಾತ್ರ ಪ್ರಕಾರ, ನೈಋತ್ಯ ಮುಂಗಾರು ಎರಡು ಮೂರು ದಿನ ಮುಂಚಿತವಾಗಿ ಆಗಮಿಸುವ ನಿರೀಕ್ಷೆಯಿದೆ.

ಮುಂಗಾರು ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳಕ್ಕೆ ಪ್ರವೇಸಿಸುತ್ತದೆ. ಇದಾದ ಬಳಿಕ ಸಾಮಾನ್ಯವಾಗಿ ಉತ್ತರದ ಕಡೆಗೆ ಚಲಿಸುತ್ತದೆ. ಜುಲೈ 15ರ ವೇಳೆಗೆ ಇಡೀ ದೇಶವನ್ನೇ ಆವರಿಸುತ್ತದೆ. ಈ ವರ್ಷದಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರೀಕ್ಷಿಸಿದೆ.

ಭಾರತೀಯ ಹವಾಮಾನ ಇಲಾಖೆಯು ಏಪ್ರಿಲ್ 15ರಂದು ತನ್ನ ಮುನ್ಸೂಚನೆಯಲ್ಲಿ ಜೂನ್​ನಿಂದ ಸೆಪ್ಟೆಂಬರ್​ ನಡುವೆ ದೇಶಾದ್ಯಂತ ಮುಂಗಾರು ಮಳೆಯು ಸುಮಾರು ಶೇ. 106ರಷ್ಟು ನಿರೀಕ್ಷಿಸಲಾಗಿದೆ. ಪ್ರಸ್ತುತ, ದೇಶದ ಹಲವು ರಾಜ್ಯಗಳಲ್ಲಿ ಮಳೆಯಿಂದಾಗಿ ಹವಾಮಾನವು ಆಹ್ಲಾದಕರವಾಗಿರುತ್ತದೆ. ಬಿಹಾರ, ಜಾರ್ಖಂಡ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಏತನ್ಮಧ್ಯೆ, ಪ್ರಸ್ತುತ ಕರ್ನಾಟಕದ ಒಳ ಭಾಗಗಳಲ್ಲಿ ಚಂಡಮಾರುತದ ಪರಿಚಲನೆ ಇದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಕೊಡಗು ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ

ಮುಂದಿನ 5 ದಿನಗಳಲ್ಲಿ ಮಧ್ಯಪ್ರದೇಶ, ವಿದರ್ಭ, ಛತ್ತೀಸ್‌ಗಢ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ (40-60 ಕಿಮೀ) ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಕೂಡ ಐದು ದಿನ ಮುಂಚಿತವಾಗಿಯೇ ಮಳೆ ಶುರುವಾಗಲಿದೆ. ಮೇ ಕೊನೆಯ ವಾರದಲ್ಲೇ ಕರ್ನಾಟಕದಲ್ಲಿ ಮುಂಗಾರು ಆರಂಭವಾಗಲಿದೆ.

ಗುಜರಾತ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಸಂಬಂಧಿಸಿದಂತೆ, ಮೇ 14 (ಮಂಗಳವಾರ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಹಲವು ಪ್ರದೇಶಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಮಿಂಚು ಮತ್ತು ಬಲವಾದ ಗಾಳಿ ಬೀಸಬಹುದು.

IMD ಪ್ರಕಾರ, ಈ ದಿನ ಮಧ್ಯಪ್ರದೇಶದ ಅನೇಕ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯು ಸಂಭವಿಸಬಹುದು. ಇದಲ್ಲದೇ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ