ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಇಂದು (ಜುಲೈ 19) ಕೆಲವು ರಾಜ್ಯಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ. IMD ಪ್ರಕಾರ, ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಕರ್ನಾಟಕದ ದಕ್ಷಿಣ ಭಾಗ, ಕರಾವಳಿ ಕರ್ನಾಟಕ, ಗುಜರಾತ್, ಆಂಧ್ರ ಪ್ರದೇಶದ ಕರಾವಳಿ, ಯಾನಂ, ವಿದರ್ಭ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.
ಇಂದು ಕೇರಳ, ಮಾಹೆ, ತಮಿಳುನಾಡಿನಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದ ಮುಂಬೈನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದ್ದು, ಪಾಲ್ಘರ್, ಥಾಣೆ, ರಾಯಗಢ, ಸಿಂಧುದುರ್ಗ, ಪುಣೆ, ಅಮರಾವತಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಬೈನ ಪ್ರಾದೇಶಿಕ ಹವಾಮಾನ ಕೇಂದ್ರ (ಆರ್‌ಎಂಸಿ) ಇಂದು ಗೊಂಡಿಯಾ, ಗಡ್‌ಚಿರೋಲಿ, ಚಂದ್ರಾಪುರ, ಭಂಡಾರಾ, ಸತಾರಾ, ರತ್ನಗಿರಿಗೆ ರೆಡ್ ಅಲರ್ಟ್ ಘೋಷಿಸಿದೆ.
IMD ಪ್ರಕಾರ, ಒಡಿಶಾದಲ್ಲಿ ಜುಲೈ 20ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮರಾಠವಾಡ, ಪಶ್ಚಿಮ ಮಧ್ಯಪ್ರದೇಶದಲ್ಲಿ ಮಳೆಯಾಗಲಿದೆ. ಜುಲೈ 21 ಮತ್ತು 22ರಂದು ಮಧ್ಯಪ್ರದೇಶದಲ್ಲಿ ಮಳೆಯ ಆರ್ಭಟ ಉಂಟಾಗಲಿದೆ. ಇಂದು ರಾಯಲಸೀಮೆ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ಕರ್ನಾಟಕ ಮಹಾ ಮಳೆಗೆ ಹಲವೆಡೆ ಪ್ರವಾಹ, ಜಲ ದಿಗ್ಬಂಧನ: ನದಿಯಂತಾದ ರಸ್ತೆಗಳು
ಈಶಾನ್ಯ ಭಾರತದಲ್ಲಿ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅರುಣಾಚಲ, ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಜುಲೈ 20ರಿಂದ 22ರವರೆಗೆ ಭಾರೀ ಮಳೆಯಾಗಲಿದೆ. ಈಗಾಗಲೇ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಕಣ್ಣೂರಿನಲ್ಲಿ ಸುಮಾರು 80 ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ. ಸುಮಾರು 71 ಕುಟುಂಬಗಳನ್ನು ಜಿಲ್ಲಾಡಳಿತವು ಅವರ ಸಂಬಂಧಿಕರಿಗೆ ಸ್ಥಳಾಂತರಿಸಿದೆ.
ಕರ್ನಾಟಕದ ಹಲವೆಡೆ ರೆಡ್ ಅಲರ್ಟ್ ಘೋಷಣೆ:
ಭಾರತದ ಹವಾಮಾನ ಇಲಾಖೆಯು ಜುಲೈ 20ರವರೆಗೆ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಇಂದು ಮತ್ತು ಜುಲೈ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ ಎಂದು ಪಿಟಿಐ ವರದಿ ಮಾಡಿದೆ.
ಇದನ್ನೂ ಓದಿ: Karnataka Rains: ಜುಲೈ 24ರವರೆಗೆ ಕರ್ನಾಟಕದ ಈ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ
ರೆಡ್ ಅಲರ್ಟ್ ಎಂದರೆ 24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚು ಭಾರೀ ಮಳೆಯನ್ನು ಸೂಚಿಸುತ್ತದೆ. ಇಲ್ಲಿನ ಅಧಿಕಾರಿಗಳು ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಕಳೆದ ಎರಡು ದಿನಗಳಿಂದ ಈ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ, ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಪ್ರವಾಹದ ಸಾಧ್ಯತೆಯಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಭೂಕುಸಿತ ಮತ್ತು ಬಂಡೆ ಕುಸಿತದ ಸಾಧ್ಯತೆಯಿಂದಾಗಿ ಸಂಪಾಜೆ ಮತ್ತು ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿ 275 ಅನ್ನು ಮುಚ್ಚುವುದಾಗಿ ಘೋಷಿಸಿದ್ದಾರೆ. ಈ ನಿರ್ಬಂಧವು ಜುಲೈ 22ರವರೆಗೆ ಪ್ರತಿದಿನ ರಾತ್ರಿ 8 ರಿಂದ ಬೆಳಿಗ್ಗೆ 6 ರವರೆಗೆ ಇರುತ್ತದೆ. ಶಿರಾಡಿ ಘಾಟ್ನಲ್ಲೂ ಭೂಕುಸಿತ ಉಂಟಾಗಿರುವುದರಿಂದ ರಸ್ತೆ ಸಂಪರ್ಕ ಕಡಿತವಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ