AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2025: ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಈಗಾಗಲೇ ದೇಶದ ನಾನಾ ಭಾಗಗಳಲ್ಲಿ ವಾರಕ್ಕೆ 2-3 ಬಾರಿ ಮಳೆಯಾಗುತ್ತಿದೆ. ಈ ಬಾರಿ ಪ್ರತಿ ವರ್ಷಕ್ಕಿಂತ ಮೊದಲೇ ಮಳೆಗಾಲ ಶುರುವಾಗುವ ನಿರೀಕ್ಷೆಯಿದೆ. ಹಾಗೇ, ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ, ಜೂನ್ ತಿಂಗಳು ಶುರುವಾಗುತ್ತಿದ್ದಂತೆ ಭಾರತದಲ್ಲಿ ಮಾನ್ಸೂನ್ ಆರಂಭವಾಗುವ ಲಕ್ಷಣಗಳು ಹೆಚ್ಚಾಗಿವೆ. 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ.

Monsoon 2025: ಭಾರತದಲ್ಲಿ ಈ ವರ್ಷ ಸಾಮಾನ್ಯಕ್ಕಿಂತ ಹೆಚ್ಚು ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ
Rain In Kolkata
ಸುಷ್ಮಾ ಚಕ್ರೆ
|

Updated on: Apr 15, 2025 | 4:25 PM

Share

ನವದೆಹಲಿ, ಏಪ್ರಿಲ್ 15: ಈ ವರ್ಷ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಈ ವರ್ಷದ ಮಾನ್ಸೂನ್ (Monsoon 2025) ಋತುವಿನಲ್ಲಿ ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. ಹಾಗೇ, ಭಾರತ ಹವಾಮಾನ ಇಲಾಖೆ (ಐಎಂಡಿ) ದೀರ್ಘಾವಧಿಯ ಸರಾಸರಿಯ 105% ಕಾಲೋಚಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1ರ ಸುಮಾರಿಗೆ ಕೇರಳಕ್ಕೆ ಪ್ರವೇಶಿಸಲು ಆರಂಭಿಸುತ್ತದೆ, ಸೆಪ್ಟೆಂಬರ್ ಮಧ್ಯದ ವೇಳೆಗೆ ಹಿಂದೆ ಸರಿಯುತ್ತದೆ. ಅಂದಾಜು ಸರಾಸರಿಗಿಂತ ಹೆಚ್ಚಿನ ಮಳೆಯು ಕೃಷಿ ವಲಯಕ್ಕೆ ಅನುಕೂಲಕರ ವಾತಾವರಣವನ್ನು ಒದಗಿಸಬಹುದು ಎಂದು ಭೂ ವಿಜ್ಞಾನ ಸಚಿವಾಲಯ ತಿಳಿಸಿದೆ.

ಐಎಂಡಿ ಪ್ರಕಾರ, ಈ ವರ್ಷದ ಮುನ್ಸೂಚನೆಯು ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಹೆಚ್ಚಿನ ಭಾಗಗಳಲ್ಲಿ ಅನುಕೂಲಕರ ಮಳೆಯ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಸೂಚಿಸಿದೆ. 4 ತಿಂಗಳ ಮಾನ್ಸೂನ್ ಋತುವಿನಲ್ಲಿ ಲಡಾಖ್, ಈಶಾನ್ಯ ಭಾರತ ಮತ್ತು ತಮಿಳುನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Karnataka Weather: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಇದನ್ನೂ ಓದಿ
Image
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
Image
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
Image
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
Image
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?

“4 ತಿಂಗಳ ಮಾನ್ಸೂನ್ ಋತುವಿನಲ್ಲಿ (ಜೂನ್ ತಿಂಗಳಿಂದ ಸೆಪ್ಟೆಂಬರ್) ಭಾರತದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ದೀರ್ಘಾವಧಿಯ ಸರಾಸರಿ 87 ಸೆಂ.ಮೀ.ನಷ್ಟು ಸಂಚಿತ ಮಳೆಯಾಗುವ ಅಂದಾಜು ಮಾಡಲಾಗಿದೆ” ಎಂದು ಭಾರತ ಹವಾಮಾನ ಇಲಾಖೆ (IMD) ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!