Monsoon 2023: ಕೇರಳಕ್ಕೆ ಮುಂಗಾರು ಆಗಮನ, ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ
ಕೇರಳಕ್ಕೆ ಆಗಮನವಾಗಿದ್ದು, ಕೇರಳದಲ್ಲಿ ಮಳೆ ಶುರುವಾಗಿದೆ. ಸಾಮಾನ್ಯಕ್ಕಿಂತ ಒಂದು ವಾರ ತಡವಾಗಿದೆ. ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ವ್ಯಾಪಕ ಮಳೆಯಾಗಿದೆ ಎಂದು ಐಎಂಡಿ ತಿಳಿಸಿದೆ.
ಕೇರಳಕ್ಕೆ ಆಗಮನವಾಗಿದ್ದು, ಕೇರಳದಲ್ಲಿ ಮಳೆ ಶುರುವಾಗಿದೆ. ಸಾಮಾನ್ಯಕ್ಕಿಂತ ಒಂದು ವಾರ ತಡವಾಗಿದೆ. ಕಳೆದ 24 ಗಂಟೆಗಳಲ್ಲಿ ಕೇರಳದಲ್ಲಿ ವ್ಯಾಪಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷವೂ ಜೂನ್ 11 ರಂದು ಮುಂಗಾರು ಮಾರುತಗಳು ಕೇರಳಕ್ಕೆ ಆಗಮಿಸುತ್ತಿದ್ದವು ಅದಾದ ಬಳಿಕ ಒಂದೆರಡು ದಿನಗಳಲ್ಲಿ ಕರ್ನಾಟಕದಲ್ಲಿ ಕೂಡ ಮಳೆ ಆರಂಭವಾಗುತ್ತಿತ್ತು. ಇದೀಗ ಮುಂಗಾರು ಒಂದು ವಾರ ತಡವಾಗಿದ್ದರೂ ಕೂಡ ಬಿಪರ್ಜಾಯ್ ಚಂಡಮಾರುತದಿಂದಾಗಿ ಮಳೆಯ ಪ್ರಭಾವ ಹೆಚ್ಚಿದೆ.
ಕಳೆದ 150 ವರ್ಷಗಳಲ್ಲಿ, ಕೇರಳದ ಮೇಲೆ ಮಾನ್ಸೂನ್ ಆರಂಭದ ದಿನಾಂಕವು ವ್ಯಾಪಕವಾಗಿ ಬದಲಾಗಿದೆ, IMD ಡೇಟಾದ ಪ್ರಕಾರ, 1918 ರಲ್ಲಿ ಮೇ 11 ಮತ್ತು ಹೆಚ್ಚು ವಿಳಂಬವಾದದ್ದು 1972 ರಲ್ಲಿ ಜೂನ್ 18 ಆಗಿದೆ. ನೈಋತ್ಯ ಮಾನ್ಸೂನ್ ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ರಂದು, 2020 ರಲ್ಲಿ ಜೂನ್ 1 ರಂದು, 2019 ರಲ್ಲಿ ಜೂನ್ 8 ರಂದು ಮತ್ತು 2018 ರಲ್ಲಿ ಮೇ 29 ರಂದು ದಕ್ಷಿಣ ರಾಜ್ಯಕ್ಕೆ ಆಗಮಿಸಿತ್ತು.
ಮತ್ತಷ್ಟು ಓದಿ: Karnataka Rains: ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಅಬ್ಬರ, ಕರ್ನಾಟಕದ ಕರಾವಳಿ ಭಾಗದಲ್ಲಿ 3 ದಿನ ಕಟ್ಟೆಚ್ಚರ, ಯೆಲ್ಲೋ ಅಲರ್ಟ್ ಘೋಷಣೆ
ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ತಮಿಳುನಾಡು, ಕರ್ನಾಟಕ, ಮತ್ತು ನೈಋತ್ಯ, ಮಧ್ಯ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು ಮತ್ತು ಕೇರಳದ ಉಳಿದ ಭಾಗಗಳಲ್ಲಿ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈಶಾನ್ಯ ಭಾರತದ ಮೇಲೆ ಮಳೆ ಬೀಳುವ ನಿರೀಕ್ಷೆಯಿದೆ, ಇದು ಮಾನ್ಸೂನ್ ಮಾರುತಗಳನ್ನು ಈಶಾನ್ಯ ಭಾರತದೆಡೆಗೆ ಕರೆದೊಯ್ಯಲು ಸಹಾಯ ಮಾಡುತ್ತದೆ.
ಹೊಳೆಹೊನ್ನೂರು, ಚನ್ನರಾಯಪಟ್ಟಣ, ಶೋರಾಪುರದಲ್ಲಿ ಮಳೆಯಾಗಿದೆ. ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹಾಗೂ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲ ವಾತಾವರಣವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಸಂಜೆ ಮಳೆಯಾಗುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ 39.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:32 pm, Thu, 8 June 23