AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2025: ಕೇರಳಕ್ಕೆ ಮುಂಗಾರು ಪ್ರವೇಶ; 2009ರ ಬಳಿಕ ಮೊದಲ ಬಾರಿ ಬೇಗ ಮಳೆಗಾಲ ಶುರು

ಕೇರಳಕ್ಕೆ ಸಾಮಾನ್ಯ ದಿನಾಂಕಕ್ಕಿಂತ 8 ದಿನ ಮುಂಚಿತವಾಗಿಯೇ ಮುಂಗಾರು ಪ್ರವೇಶವಾಗಿದೆ. 2009ರ ಬಳಿಕ ಇದೇ ಮೊದಲ ಬಾರಿಗೆ ಮೇ ಅಂತ್ಯದೊಳಗೆ ಮುಂಗಾರು ಆಗಮನವಾಗಿದೆ. 16 ವರ್ಷಗಳ ಬಳಿಕ ಮೊದಲ ಬಾರಿ ಇಷ್ಟು ಬೇಗ ಮಾನ್ಸೂನ್ ಆಗಮನವಾಗಿದೆ. ಸಾಮಾನ್ಯವಾಗಿ ಜೂನ್ 1ರಿಂದ 5ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶವಾಗುತ್ತದೆ. ಆದರೆ ಇಂದೇ (ಮೇ 24) ಮುಂಗಾರು ಕೇರಳವನ್ನು ಪ್ರವೇಶಿಸಿದೆ. ಈ ಮೂಲಕ ನೈಋತ್ಯ ಮಾನ್ಸೂನ್ ಕೇರಳವನ್ನು ಸಾಮಾನ್ಯ ದಿನಾಂಕಕ್ಕಿಂತ 8 ದಿನ ಮುಂಚಿತವಾಗಿ ಪ್ರವೇಶಿಸಿದೆ" ಎಂದು ಹವಾಮಾನ ಇಲಾಖೆ ಹೇಳಿದೆ.

Monsoon 2025: ಕೇರಳಕ್ಕೆ ಮುಂಗಾರು ಪ್ರವೇಶ; 2009ರ ಬಳಿಕ ಮೊದಲ ಬಾರಿ ಬೇಗ ಮಳೆಗಾಲ ಶುರು
Rain Updates
ಸುಷ್ಮಾ ಚಕ್ರೆ
|

Updated on:May 24, 2025 | 3:51 PM

Share

ತಿರುವನಂತಪುರಂ, ಮೇ 24: ಇಂದು ನೈಋತ್ಯ ಮಾನ್ಸೂನ್ (Monsoon 2025) ಕೇರಳವನ್ನು ತಲುಪಿದೆ. 2009ರಲ್ಲಿ ಮೇ 23ರಂದು ಮಾನ್ಸೂನ್ ಆಗಮನವಾಗಿತ್ತು. ಅದಾದ ಬಳಿಕ ಇದೇ ಮೊದಲ ಬಾರಿ ಅಂದರೆ 16 ವರ್ಷಗಳ ಬಳಿಕ ಮೇ ಕೊನೆಯ ವಾರದೊಳಗೆ ಮಾನ್ಸೂನ್ ಆರಂಭವಾಗಿದೆ. ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜೂನ್ 1ರ ಬಳಿಕ ಕೇರಳಕ್ಕೆ ಪ್ರವೇಶವಾಗಲಿದೆ. ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ಇದು ಸೆಪ್ಟೆಂಬರ್ 17ರ ಸುಮಾರಿಗೆ ವಾಯುವ್ಯ ಭಾರತದಿಂದ ಹಿಮ್ಮೆಟ್ಟಲು ಪ್ರಾರಂಭಿಸುತ್ತದೆ ಮತ್ತು ಅಕ್ಟೋಬರ್ 15ರ ವೇಳೆಗೆ ಸಂಪೂರ್ಣವಾಗಿ ಕಡಿಮೆಯಾಗುತ್ತದೆ.

ಕಳೆದ ವರ್ಷ ಮೇ 30ರಂದು ದಕ್ಷಿಣ ರಾಜ್ಯದ ಮೇಲೆ ಮಾನ್ಸೂನ್ ಪ್ರವೇಶಿಸಿತು. 2023ರಲ್ಲಿ ಜೂನ್ 8, 2022ರಲ್ಲಿ ಮೇ 29, 2021ರಲ್ಲಿ ಜೂನ್ 3, 2020ರಲ್ಲಿ ಜೂನ್ 1, 2019ರಲ್ಲಿ ಜೂನ್ 8 ಮತ್ತು 2018ರಲ್ಲಿ ಮೇ 29ಎಂದು ಕೇರಳಕ್ಕೆ ಮಾನ್ಸೂನ್ ಆಗಮನವಾಗಿತ್ತು. ಹವಾಮಾನಶಾಸ್ತ್ರಜ್ಞರ ಪ್ರಕಾರ, ಮಳೆಗಾಲದ ಋತುವಿನಲ್ಲಿ ಮಳೆಯ ಪ್ರಾರಂಭದ ದಿನಾಂಕ ಮತ್ತು ದೇಶದಲ್ಲಿ ಒಟ್ಟು ಮಳೆಯ ನಡುವೆ ಯಾವುದೇ ನೇರ ಸಂಬಂಧವಿಲ್ಲ. ಕೇರಳದಲ್ಲಿ ಮುಂಗಾರು ಬೇಗ ಅಥವಾ ತಡವಾಗಿ ಆಗಮಿಸುತ್ತದೆ ಎಂದರೆ ಅದು ದೇಶದ ಇತರ ಭಾಗಗಳನ್ನು ಅದಕ್ಕೆ ಅನುಗುಣವಾಗಿ ಆವರಿಸುತ್ತದೆ ಎಂದರ್ಥವಲ್ಲ.

ಇದನ್ನೂ ಓದಿ
Image
ಕೇರಳಕ್ಕೆ ಮೇ 25ರೊಳಗೆ ಮುಂಗಾರು ಪ್ರವೇಶ; ಕರ್ನಾಟಕದಲ್ಲೂ ಬೇಗ ಮಳೆಗಾಲ ಶುರು
Image
Bangalore Rains: ಬೆಂಗಳೂರಿನಲ್ಲಿ ಮಧ್ಯಾಹ್ನದಿಂದಲೇ ಶುರುವಾದ ಮಳೆ
Image
ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆ
Image
ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಸಾಲು ಅವಾಂತರ

ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಆಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮೇ 28ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ಐಎಂಡಿ ಪ್ರಕಾರ, ಮುಂಗಾರು ಕೇರಳದಲ್ಲಿ ಮಾತ್ರವಲ್ಲದೆ ಕರ್ನಾಟಕದ ಕೆಲವು ಭಾಗಗಳು, ಪುದುಚೇರಿ, ತಮಿಳುನಾಡು ಮತ್ತು ಮಿಜೋರಾಂನಲ್ಲಿಯೂ ಆಗಮಿಸಿದೆ. ಇದು ವೇಗವಾಗಿ ಮುಂದುವರಿಯುತ್ತಿದ್ದು, ಮುಂದಿನ 2-3 ದಿನಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡಿನ ಉಳಿದ ಪ್ರದೇಶಗಳು ಹಾಗೂ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನ ಕೆಲವು ಭಾಗಗಳನ್ನು ತಲುಪುವ ನಿರೀಕ್ಷೆಯಿದೆ. ಕೇರಳಕ್ಕೆ ಕೊನೆಯ ಬಾರಿಗೆ ಮುಂಗಾರು ಮಳೆ 2009 ಮತ್ತು 2001ರಲ್ಲಿ ಇಷ್ಟು ಬೇಗ ಆಗಮಿಸಿತ್ತು. ಆಗ ಮೇ 23ರಂದು ಮುಂಗಾರು ಕೇರಳ ರಾಜ್ಯವನ್ನು ತಲುಪಿತ್ತು.

ಕಳೆದ 25 ವರ್ಷಗಳಲ್ಲಿ, ಅತ್ಯಂತ ವಿಳಂಬವಾದ ಆಗಮನ 2016ರಲ್ಲಿ ಸಂಭವಿಸಿತ್ತು. ಆಗ ಮಾನ್ಸೂನ್ ಜೂನ್ 9ರಂದು ಕೇರಳವನ್ನು ಪ್ರವೇಶಿಸಿತ್ತು. ಕಳೆದ ಎರಡು ದಿನಗಳಿಂದ ಕೇರಳ ರಾಜ್ಯದಲ್ಲಿ ಮಾನ್ಸೂನ್ ಆರಂಭಕ್ಕೆ ಅನುಕೂಲಕರವಾದ ಎಲ್ಲಾ ಪರಿಸ್ಥಿತಿಗಳು ಅಭಿವೃದ್ಧಿಗೊಂಡಿವೆ. ಕಡಿಮೆ ಒತ್ತಡದ ಪ್ರದೇಶ ಮತ್ತು ಮುಂದುವರಿಯುತ್ತಿರುವ ಮಾನ್ಸೂನ್ ವ್ಯವಸ್ಥೆಯ ಸಂಯೋಜನೆಯಿಂದಾಗಿ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: ದೆಹಲಿಯಲ್ಲಿ 23 ಕೊವಿಡ್ ಕೇಸ್ ದಾಖಲು; ಬೆಡ್, ಆಕ್ಸಿಜನ್ ರೆಡಿ ಮಾಡಿಟ್ಟುಕೊಳ್ಳಲು ಸರ್ಕಾರ ಆದೇಶ

ಮೇ 29ರವರೆಗೆ ಕೇರಳ ಮತ್ತು ಕರ್ನಾಟಕದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದೆ. ಮುಂದಿನ ಐದು ದಿನಗಳಲ್ಲಿ ತಮಿಳುನಾಡು, ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿಯೂ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:46 pm, Sat, 24 May 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್