AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parliament Monsoon Session: ಸದನ ನಡೆಯದೆ, ಚರ್ಚೆ ಇಲ್ಲದೆ ಯಾವ ಸಮಸ್ಯೆಗೂ ಪರಿಹಾರ ಸಿಗದು : ಹರ್ಭಜನ್ ಸಿಂಗ್

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್(Harbhajan Singh) ಅವರು ಸದನದ ಕಲಾಪದಲ್ಲಿ ಭಾಗವಹಿಸಿದ್ದರು,  ಈ ವೇಳೆ ಸದನದ ಒಳಗಿನ ಗದ್ದಲದ ಕುರಿತು ಮಾತನಾಡಿದ ಅವರು, ಸದನದೊಳಗೆ ಸಾಕಷ್ಟು ಗದ್ದಲಗಳು ನಡೆದಿವೆ

Parliament Monsoon Session: ಸದನ ನಡೆಯದೆ, ಚರ್ಚೆ ಇಲ್ಲದೆ ಯಾವ ಸಮಸ್ಯೆಗೂ ಪರಿಹಾರ ಸಿಗದು : ಹರ್ಭಜನ್ ಸಿಂಗ್
ಹರ್ಭಜನ್ ಸಿಂಗ್Image Credit source: ABP Live
ನಯನಾ ರಾಜೀವ್
|

Updated on: Jul 28, 2023 | 11:39 AM

Share

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್(Harbhajan Singh) ಅವರು ಸದನದ ಕಲಾಪದಲ್ಲಿ ಭಾಗವಹಿಸಿದ್ದರು,  ಈ ವೇಳೆ ಸದನದ ಒಳಗಿನ ಗದ್ದಲದ ಕುರಿತು ಮಾತನಾಡಿದ ಅವರು, ಸದನದೊಳಗೆ ಸಾಕಷ್ಟು ಗದ್ದಲಗಳು ನಡೆದಿವೆ, ಎಲ್ಲ ವಿರೋಧ ಪಕ್ಷಗಳ ನಾಯಕರು ಕಪ್ಪು ಬಟ್ಟೆ ಧರಿಸಿ ಬಂದಿದ್ದಾರೆ, ಘೋಷಣೆಗಳನ್ನು ಕೂಗಿದ್ದಾರೆ, ಇದರಿಂದಾಗಿ ಸದನ ನಡೆಯಲು ಸಾಧ್ಯವಾಗಲಿಲ್ಲ. ಸದನ ನಡೆದು, ಚರ್ಚೆಯಾಗುವವರೆಗೆ ಯಾವುದೇ ಸಮಸ್ಯೆಗೆ ಪರಿಹಾರ ಸಿಗದು ಎಂದರು.

ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಪ್ರಧಾನಿ ಮೋದಿ ಅವರು ಸಂವೇದನಾಶೀಲತೆ ಪ್ರದರ್ಶಿಸಬೇಕು ಮತ್ತು ಸಂಸತ್ತಿಗೆ ಬಂದು ಮಣಿಪುರದ ವಿಷಯದ ಬಗ್ಗೆ ಮಾತನಾಡಬೇಕು ಎಂದು ಹೇಳಿದ್ದಾರೆ. ಒಂದೆಡೆ ಮಣಿಪುರ ಹೊತ್ತಿ ಉರಿಯುತ್ತಿದ್ದು, ಪರಿಹಾರ ಶಿಬಿರಗಳಲ್ಲಿ ವಾಸಿಸುವ ಅನಿವಾರ್ಯತೆ ಎದುರಾಗಿದೆ ಎಂದರು.

ಮತ್ತಷ್ಟು ಓದಿ: Manipur Violence: ಮಣಿಪುರ ಹಿಂಸಾಚಾರ ವಿಚಾರ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ

ಮಣಿಪುರ ಹಿಂಸಾಚಾರದ ಬಗ್ಗೆ ಸಂಸತ್ತಿನಲ್ಲಿ ಕೋಲಾಹಲ ಎರಡೂವರೆ ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರದಿಂದಾಗಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಕಿಡಿ ಕಾರುತ್ತಿವೆ. ಬುಧವಾರ ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಅದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅಂಗೀಕರಿಸಿದ್ದಾರೆ.

ಈ ಅವಿಶ್ವಾಸ ನಿರ್ಣಯವನ್ನು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಡಿಸಿದರು. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬುಧವಾರ ಭಾರೀ ಕೋಲಾಹಲ ಉಂಟಾಯಿತು.

ಇದರಿಂದಾಗಿ ಸದನದ ಕಲಾಪವನ್ನು ಹಲವು ಬಾರಿ ಮುಂದೂಡಲಾಯಿತು. ಇಂದಿಗೂ ಇದೇ ಪರಿಸ್ಥಿತಿ ಇದೆ. ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ವ್ಯಕ್ತಪಡಿಸಲು ಸಂಸದರು ಕಪ್ಪು ಬಟ್ಟೆ ಧರಿಸಿ ಸದನಕ್ಕೆ ಬಂದಿದ್ದು, ನಿರಂತರ ಗದ್ದಲ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ