ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್(Harbhajan Singh) ಅವರು ಸದನದ ಕಲಾಪದಲ್ಲಿ ಭಾಗವಹಿಸಿದ್ದರು, ಈ ವೇಳೆ ಸದನದ ಒಳಗಿನ ಗದ್ದಲದ ಕುರಿತು ಮಾತನಾಡಿದ ಅವರು, ಸದನದೊಳಗೆ ಸಾಕಷ್ಟು ಗದ್ದಲಗಳು ನಡೆದಿವೆ, ಎಲ್ಲ ವಿರೋಧ ಪಕ್ಷಗಳ ನಾಯಕರು ಕಪ್ಪು ಬಟ್ಟೆ ಧರಿಸಿ ಬಂದಿದ್ದಾರೆ, ಘೋಷಣೆಗಳನ್ನು ಕೂಗಿದ್ದಾರೆ, ಇದರಿಂದಾಗಿ ಸದನ ನಡೆಯಲು ಸಾಧ್ಯವಾಗಲಿಲ್ಲ. ಸದನ ನಡೆದು, ಚರ್ಚೆಯಾಗುವವರೆಗೆ ಯಾವುದೇ ಸಮಸ್ಯೆಗೆ ಪರಿಹಾರ ಸಿಗದು ಎಂದರು.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಪ್ರಧಾನಿ ಮೋದಿ ಅವರು ಸಂವೇದನಾಶೀಲತೆ ಪ್ರದರ್ಶಿಸಬೇಕು ಮತ್ತು ಸಂಸತ್ತಿಗೆ ಬಂದು ಮಣಿಪುರದ ವಿಷಯದ ಬಗ್ಗೆ ಮಾತನಾಡಬೇಕು ಎಂದು ಹೇಳಿದ್ದಾರೆ. ಒಂದೆಡೆ ಮಣಿಪುರ ಹೊತ್ತಿ ಉರಿಯುತ್ತಿದ್ದು, ಪರಿಹಾರ ಶಿಬಿರಗಳಲ್ಲಿ ವಾಸಿಸುವ ಅನಿವಾರ್ಯತೆ ಎದುರಾಗಿದೆ ಎಂದರು.
ಮತ್ತಷ್ಟು ಓದಿ: Manipur Violence: ಮಣಿಪುರ ಹಿಂಸಾಚಾರ ವಿಚಾರ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಿಂದ ಅವಿಶ್ವಾಸ ನಿರ್ಣಯ ಮಂಡನೆ
ಮಣಿಪುರ ಹಿಂಸಾಚಾರದ ಬಗ್ಗೆ ಸಂಸತ್ತಿನಲ್ಲಿ ಕೋಲಾಹಲ
ಎರಡೂವರೆ ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಹಿಂಸಾಚಾರದಿಂದಾಗಿ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಕಿಡಿ ಕಾರುತ್ತಿವೆ.
ಬುಧವಾರ ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಅದನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅಂಗೀಕರಿಸಿದ್ದಾರೆ.
ಈ ಅವಿಶ್ವಾಸ ನಿರ್ಣಯವನ್ನು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಡಿಸಿದರು. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬುಧವಾರ ಭಾರೀ ಕೋಲಾಹಲ ಉಂಟಾಯಿತು.
ಇದರಿಂದಾಗಿ ಸದನದ ಕಲಾಪವನ್ನು ಹಲವು ಬಾರಿ ಮುಂದೂಡಲಾಯಿತು. ಇಂದಿಗೂ ಇದೇ ಪರಿಸ್ಥಿತಿ ಇದೆ. ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ವ್ಯಕ್ತಪಡಿಸಲು ಸಂಸದರು ಕಪ್ಪು ಬಟ್ಟೆ ಧರಿಸಿ ಸದನಕ್ಕೆ ಬಂದಿದ್ದು, ನಿರಂತರ ಗದ್ದಲ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ