All-Party Meeting: ಜು.20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ, ಮಣಿಪುರ ಹಿಂಸಾಚಾರ ಚರ್ಚೆಗೆ ಕೇಂದ್ರ ಒಪ್ಪಿಗೆ

ನಾಳೆಯಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಪ್ರಾರಂಭವಾಗಲಿದ್ದು, ಸದನದಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಇದೀಗ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

All-Party Meeting: ಜು.20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ, ಮಣಿಪುರ ಹಿಂಸಾಚಾರ ಚರ್ಚೆಗೆ ಕೇಂದ್ರ ಒಪ್ಪಿಗೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 19, 2023 | 4:25 PM

ದೆಹಲಿ: ನಾಳೆಯಿಂದ (ಜು.20) ಸಂಸತ್ತಿನಲ್ಲಿ ಮುಂಗಾರು ಅಧಿವೇಶನ (Monsoon session) ಆರಂಭವಾಗಲಿದೆ, ಅದಕ್ಕೂ ಮುನ್ನ ಇಂದು ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು. ಇದು ಲೋಕಸಭೆಯ ವಾಡಿಕೆಯಾಗಿದ್ದು, ಎಲ್ಲಾ ಪಕ್ಷಗಳನ್ನು ಒಟ್ಟುಗೂಡಿಸಿ ಅವರ ಸಮಸ್ಯೆಗಳನ್ನು ಪರಿಹರಿಸುವುದು ಇದರ ಉದ್ದೇಶವಾಗಿದೆ. ಇದರ ಜತೆಗೆ ಸದನದಲ್ಲಿ ಯಾವುದಾದರೂ ಪ್ರಮುಖ ವಿಚಾರದ ಬಗ್ಗೆ ಚರ್ಚೆಯಾಗಬೇಕಾ ಎಂಬ ಅಭಿಪ್ರಾಯವನ್ನು ಕೂಡ ಪಡೆಯುತ್ತಾರೆ. ಈ ಹಿಂದೆ ಸಂಸತ್ತಿನಲ್ಲಿ ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಯಾಗಬೇಕು ಎಂದು ವಿಕ್ಷಪಗಳು ಒತ್ತಾಯಿಸಿತ್ತು, ಇದೀಗ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಈ ಬಗ್ಗೆ ಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು, ಮಣಿಪುರದಲ್ಲಿ 80 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 2 ತಿಂಗಳ ಹಿಂಸಾಚಾರ ಸೇರಿದಂತೆ ಸಂಸತ್ತಿನಲ್ಲಿ ಎಲ್ಲಾ ವಿಷಯಗಳನ್ನು ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದರು.

ಬೆಲೆ ಏರಿಕೆ ಮತ್ತು ಮಣಿಪುರದಂತಹ ವಿಷಯಗಳ ಬಗ್ಗೆ ಚರ್ಚೆ ಮಾಡಲೇಬೇಕು, ಇದರಲ್ಲಿ ಯಾವುದೇ ಸಂಧಾನ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಈ ಹಿಂದೆ ಹೇಳಿತ್ತು. ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರತಿಕ್ರಿಯೆಯನ್ನು ಕೇಳುತ್ತಿದೆ. ಇದೀಗ ಈ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಒಪ್ಪಿಗೆ ನೀಡಿದೆ.

ಇದನ್ನೂ ಓದಿ: ಜು.20ರಿಂದ ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭ, ಸರ್ವಪಕ್ಷ ಸಭೆ ಕರೆದ ಸರ್ಕಾರ

ನಾವು ಪ್ರಜಾಪ್ರಭುತ್ವವನ್ನು ತಾಯಿ ಎಂದು ಕರೆಯುತ್ತೇವೆ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ ಕೆಲವೊಂದು ವಿಚಾರಗಳ ಬಗ್ಗೆ ಪ್ರಧಾನಿ ಮಾತನಾಡದಿದ್ದಾಗ, ಅವರು (ಸಂಸತ್ತಿಗೆ) ಹಾಜರಾಗದಿದ್ದಾಗ, ಸಾರ್ವಜನಿಕ ಕಾಳಜಿಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಬಿಡದಿದ್ದಾಗ, ಯಾವ ರೀತಿಯ ಪ್ರಜಾಪ್ರಭುತ್ವದ ತಾಯಿಗೆ ಗೌರವ ನೀಡಿತ್ತೇವೆ. ಟೀಕೆಗಳ ಬಗ್ಗೆ ಮಾತ್ರ ಮಾತನಾಡುತ್ತಾರೆ. ಸಾರ್ವಜನಿಕ ಕಳವಳಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್‌ನ ಜೈರಾಮ್ ರಮೇಶ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ