AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಲೋಕಸಭೆಯಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ; ಮುಂಗಾರು ಅಧಿವೇಶನದಿಂದ 4 ಕಾಂಗ್ರೆಸ್ ಸಂಸದರು ವಜಾ

ಸಂಸದರಾದ ಮಣಿಕಂ ಟಾಗೋರ್, ರಮ್ಯಾ ಹರಿದಾಸ್, ಜೋತಿಮಣಿ ಮತ್ತು ಟಿಎನ್ ಪ್ರತಾಪನ್ ಅವರನ್ನು  ಮುಂಗಾರು ಅಧಿವೇಶನದಿಂದ ಅಮಾನತು ಮಾಡಲಾಗಿದೆ.

Breaking ಲೋಕಸಭೆಯಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ; ಮುಂಗಾರು ಅಧಿವೇಶನದಿಂದ 4 ಕಾಂಗ್ರೆಸ್ ಸಂಸದರು ವಜಾ
ಲೋಕಸಭೆಯಿಂದ ಅಮಾನತುಗೊಂಡ ಸಂಸದರು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 25, 2022 | 4:29 PM

Share

ಲೋಕಸಭೆಯಲ್ಲಿ(Lok Sabha) ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ. ಸಂಸದರಾದ ಮಣಿಕಂ ಟಾಗೋರ್, ರಮ್ಯಾ ಹರಿದಾಸ್, ಜೋತಿಮಣಿ ಮತ್ತು ಟಿಎನ್ ಪ್ರತಾಪನ್ ಅವರನ್ನು ಮುಂಗಾರು ಅಧಿವೇಶನದಿಂದ (Monsoon Session) ಅಮಾನತು ಮಾಡಲಾಗಿದೆ.  ಮುಂಗಾರು ಅಧಿವೇಶನದ 6ನೇ ದಿನವಾದ ಇಂದು (ಸೋಮವಾರ) ಬೆಲೆ ಏರಿಕೆ ವಿರುದ್ದ ಪ್ಲೆಕಾರ್ಡ್ ಹಿಡಿದು ಸಂಸದರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಇದಕ್ಕಿಂತ ಮುನ್ನ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸುತ್ತಿರುವುದನ್ನು ಖಂಡಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸುವುದಾದರೆ ಸದನದಿಂದ ಹೊರಗೆ ಹೋಗಿ ಎಂದು ಗುಡುಗಿದ್ದರು. ಸಂಸದರ ಪ್ರತಿಭಟನೆಗೆ ಅಸಮಾಧಾನ ಸೂಚಿಸಿದ ಸ್ಪೀಕರ್, ನಾನು 3 ಗಂಟೆಯ ನಂತರ ಚರ್ಚೆ ಮಾಡಲು ಸಿದ್ಧ. ಆದರೆ ಸದನದ ಒಳಗೆ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸುವುದನ್ನು ನಾನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ನೀವು ಪ್ಲೆಕಾರ್ಡ್ ತೋರಿಸಬೇಕೆಂದಿದ್ದರೆ ಅದನ್ನು ಸದನದ ಹೊರಗೆ ಮಾಡಿ. ನಾನು ಚರ್ಚೆಗೆ ಸಿದ್ದ ಆದರೆ ನನ್ನ ಮೃದು ಸ್ವಭಾವವನ್ನು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದು ಸ್ಪೀಕರ್ ಬಿರ್ಲಾ, ಸದನದ ಕಲಾಪನ್ನು ನಾಳೆಗೆ ಮುಂದೂಡಿದ್ದಾರೆ.

Published On - 4:02 pm, Mon, 25 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ