AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶ ಯಾವಾಗ? ಹವಾಮಾನ ಇಲಾಖೆ ಏನು ಹೇಳುತ್ತೆ ಇಲ್ಲಿದೆ ಮಾಹಿತಿ

ಈ ಬಾರಿ ಕೇರಳಕ್ಕೆ ಮುಂಗಾರು ಮಾರುತಗಳ ಆಗಮನದಲ್ಲಿ ಸ್ವಲ್ಪ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿದೆ.

Monsoon: ಕೇರಳಕ್ಕೆ ಮುಂಗಾರು ಮಾರುತಗಳ ಪ್ರವೇಶ ಯಾವಾಗ? ಹವಾಮಾನ ಇಲಾಖೆ ಏನು ಹೇಳುತ್ತೆ ಇಲ್ಲಿದೆ ಮಾಹಿತಿ
ಮುಂಗಾರು
ನಯನಾ ರಾಜೀವ್
|

Updated on: May 17, 2023 | 7:58 AM

Share

ಈ ಬಾರಿ ಕೇರಳಕ್ಕೆ ಮುಂಗಾರು ಮಾರುತಗಳ ಆಗಮನದಲ್ಲಿ ಸ್ವಲ್ಪ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.

ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮುಂಗಾರು ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.

ಮತ್ತಷ್ಟು ಓದಿ: Cyclone Mocha: ಮ್ಯಾನ್ಮಾರ್​ನಲ್ಲಿ ಮೋಕಾ ಚಂಡಮಾರುತದ ಅಬ್ಬರ, ಇದುವರೆಗೆ 81 ಮಂದಿ ಸಾವು

ಭಾರತವು ಕೃಷಿಯನ್ನೇ ಆಧರಿಸಿದ ದೇಶವಾಗಿದ್ದು, ಭಾರತದ ಆರ್ಥಿಕತೆಯು ಮಳೆಯನ್ನು ಅವಲಂಬಿಸಿದೆ. ದೇಶದ ಒಟ್ಟಾರೆ ವಾರ್ಷಿಕ ಮಳೆ ಪ್ರಮಾಣದಲ್ಲಿ ಶೇ.75ರಷ್ಟನ್ನು ಮುಂಗಾರು ಮಳೆಯೇ ಒಳಗೊಂಡಿದೆ.

ಈ ಬಾರಿ ಮುಂಗಾರು ವಿಳಂಬವಾದರೆ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ