ಈ ಬಾರಿ ಕೇರಳಕ್ಕೆ ಮುಂಗಾರು ಮಾರುತಗಳ ಆಗಮನದಲ್ಲಿ ಸ್ವಲ್ಪ ವಿಳಂಬವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಈ ಬಾರಿಯ ಬೇಸಿಗೆ ಸಾಮಾನ್ಯಕ್ಕಿಂತ ದೀರ್ಘವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನೈಋತ್ಯ ಮುಂಗಾರು ಸಾಮಾನ್ಯವಾಗಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.
ಈ ವರ್ಷ ಕೇರಳದ ಮೇಲೆ ನೈರುತ್ಯ ಮುಂಗಾರು ಪ್ರಾರಂಭವಾಗುವುದು ಸ್ವಲ್ಪ ವಿಳಂಬವಾಗುವ ಸಾಧ್ಯತೆಯಿದೆ. ಈ ಬಾರಿ 4 ದಿನ ವಿಳಂಬವಾಗಿ ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮುಂಗಾರು ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ಮತ್ತು 2020 ರಲ್ಲಿ ಜೂನ್ 1 ರಂದು ದೇವರ ನಾಡು ದಕ್ಷಿಣ ರಾಜ್ಯ ಪ್ರವೇಶಿಸಿತ್ತು.
ಮತ್ತಷ್ಟು ಓದಿ: Cyclone Mocha: ಮ್ಯಾನ್ಮಾರ್ನಲ್ಲಿ ಮೋಕಾ ಚಂಡಮಾರುತದ ಅಬ್ಬರ, ಇದುವರೆಗೆ 81 ಮಂದಿ ಸಾವು
ಭಾರತವು ಕೃಷಿಯನ್ನೇ ಆಧರಿಸಿದ ದೇಶವಾಗಿದ್ದು, ಭಾರತದ ಆರ್ಥಿಕತೆಯು ಮಳೆಯನ್ನು ಅವಲಂಬಿಸಿದೆ. ದೇಶದ ಒಟ್ಟಾರೆ ವಾರ್ಷಿಕ ಮಳೆ ಪ್ರಮಾಣದಲ್ಲಿ ಶೇ.75ರಷ್ಟನ್ನು ಮುಂಗಾರು ಮಳೆಯೇ ಒಳಗೊಂಡಿದೆ.
ಈ ಬಾರಿ ಮುಂಗಾರು ವಿಳಂಬವಾದರೆ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ