ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ, ತಂದೆಯ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಅಕ್ಕನ ಮದುವೆಗೆ ಒಂದು ದಿನ ಬಾಕಿ ಇರುವಾಗ 20 ವರ್ಷದ ಯುವಕ ಫರಾತ್ ಅಲಿ, ತಂದೆಯ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈದ್ ಮತ್ತು ಮದುವೆಗೆಂದು ಪಂಜಾಬ್‌ನಿಂದ ಬಂದಿದ್ದ ಫರಾತ್, ಸಾವಿಗೂ ಮುನ್ನ ವಿಡಿಯೋ ಮಾಡಿದ್ದಾನೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ, ಮಾನಸಿಕ ಒತ್ತಡದ ಕುರಿತು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ, ತಂದೆಯ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
ಸಾವು
Image Credit source: Free Press Journal

Updated on: Jun 01, 2026 | 7:53 AM

ಮೊರಾದಾಬಾದ್, ಜೂನ್ 1: ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ ತಂದೆಯ ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್​ನಲ್ಲಿ ನಡೆದಿದೆ. ಜಿಲ್ಲೆಯ ಕುಂದರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಕ್‌ಫಜ್‌ಪುರ ಗ್ರಾಮದಲ್ಲಿ ಹಬ್ಬ ಮತ್ತು ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಭೀಕರ ದುರಂತ ಸಂಭವಿಸಿದೆ. ಆರು ಸಹೋದರರಲ್ಲಿ ಕಿರಿಯವನಾದ ಫರತ್ ಅಲಿ (20) ಎಂಬ ಯುವಕ, ತನ್ನ ತಂದೆಯ ಪರವಾನಗಿ ಪಡೆದ (Licensed) ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪಂಜಾಬ್‌ನಲ್ಲಿ ಕೆಲಸ ಮಾಡುತ್ತಿದ್ದ ಫರಾತ್, ನಾಲ್ಕು ದಿನಗಳ ಹಿಂದೆಯಷ್ಟೇ ಈದ್ ಹಬ್ಬ ಆಚರಿಸಲು ಮತ್ತು ಇನ್ನೆಂಟು ದಿನಗಳಲ್ಲಿ ನಡೆಯಬೇಕಿದ್ದ ತನ್ನ ಸಹೋದರಿಯ ಮದುವೆಗಾಗಿ ಮನೆಗೆ ಮರಳಿದ್ದ.

ಘಟನೆ ನಡೆದಿದ್ದು ಹೇಗೆ?
ಶನಿವಾರ ರಾತ್ರಿ 9.30ರ ಸುಮಾರಿಗೆ ಫರಾತ್ ತನ್ನ ಕೋಣೆಯಲ್ಲಿದ್ದ ತಂದೆಯ ಬಂದೂಕಿನಿಂದ ಶೂಟ್ ಮಾಡಿಕೊಂಡಿದ್ದಾನೆ. ಗುಂಡಿನ ಶಬ್ದ ಕೇಳಿ ಕುಟುಂಬಸ್ಥರು ಓಡಿಬಂದಾಗ ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದನು. ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ.

ವಿಡಿಯೋ ಮಾಡಿ ಆತ್ಮಹತ್ಯೆ?
ಘಟನೆಗೆ ಕೆಲವೇ ಕ್ಷಣಗಳ ಮುನ್ನ ಫರಾತ್ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಒಂದನ್ನು ರೆಕಾರ್ಡ್ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಈ ವಿಡಿಯೋದಲ್ಲಿ, ನನ್ನ ಸಾವಿನ ನಂತರ ನನ್ನ ಕುಟುಂಬಕ್ಕೆ ಯಾರೂ ಕಿರುಕುಳ ನೀಡಬಾರದು ಎಂಬ ಸಂದೇಶವಿದೆ ಎನ್ನಲಾಗಿದೆ.

ಮತ್ತಷ್ಟು ಓದಿ: ತನ್ನ ಬಳಿ ಚಿಕಿತ್ಸೆಗೆಂದು ಬಂದಿದ್ದ ಹುಚ್ಚನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋವೈದ್ಯೆ ಆತ್ಮಹತ್ಯೆ

ಪೊಲೀಸ್ ತನಿಖೆ: ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಘಟನೆಗೆ ಬಳಸಲಾದ ಬಂದೂಕು ಮತ್ತು ಮೃತನ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಯುವಕ ತೀವ್ರ ಮಾನಸಿಕ ಒತ್ತಡದಲ್ಲಿದ್ದನೇ ಅಥವಾ ಯಾವುದೇ ವೈಯಕ್ತಿಕ ವಿವಾದಗಳನ್ನು ಎದುರಿಸುತ್ತಿದ್ದನೇ ಎಂಬ ಬಗ್ಗೆ ಮತ್ತು ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ತಿಳಿಯಲು ಪೊಲೀಸರು ಡಿಜಿಟಲ್ ಪುರಾವೆಗಳ ತನಿಖೆ ನಡೆಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us