PM ಕುಸುಮ್ ಯೋಜನೆಗೆ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಿಂದಲೇ ಹೆಚ್ಚು ರೈತರ ಬೇಡಿಕೆ -ಸಚಿವ ಪ್ರಲ್ಹಾದ ಜೋಶಿ

ವಿಪಕ್ಷದವರು ಪಿಎಂ ಕುಸುಮ್ ಯೋಜನೆ ವಿಫಲವಾಗಿದೆ ಎಂದು ಇಲ್ಲ-ಸಲ್ಲದ ಮಾತನಾಡುತ್ತಾರೆ. ಹಾಗೊಂದು ವೇಳೆ ಈ ಯೋಜನೆ ವಿಫಲವಾಗಿದ್ದರೆ ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕ ಸರ್ಕಾರದವರು ಏಕೆ ಅಧಿಕೃತವಾಗಿ ನಮಗೆ ಇಷ್ಟೊಂದು ಬೇಡಿಕೆ ಕಳುಹಿಸುತ್ತಿದ್ದರು? ಎಂದು ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.

PM ಕುಸುಮ್ ಯೋಜನೆಗೆ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಿಂದಲೇ ಹೆಚ್ಚು ರೈತರ ಬೇಡಿಕೆ -ಸಚಿವ ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ
Follow us
TV9 Web
| Updated By: ಆಯೇಷಾ ಬಾನು

Updated on: Aug 07, 2024 | 3:00 PM

ನವದೆಹಲಿ, ಆಗಸ್ಟ್​.07: ಪಿಎಂ ಕುಸುಮ್ ಯೋಜನೆಯಡಿ (PM Kusum Scheme) ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ಕರ್ನಾಟಕದಿಂದಲೇ 1.79 ಲಕ್ಷ ರೈತರು ಬೇಡಿಕೆ ಇಟ್ಟಿದ್ದಾರೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರು ತಿಳಿಸಿದ್ದಾರೆ. ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಸಚಿವರು, ಕರ್ನಾಟಕದಿಂದ ನಮಗೆ ಬರೋಬ್ಬರಿ 1,79,588 ಸೋಲಾರ್ ಪಂಪ್‌ ಅಳವಡಿಕೆಗೆ ಬೇಡಿಕೆ ಬಂದಿದೆ ಎಂದು ವಿವರಿಸಿದರು.

ವಿಫಲವಾಗಿದ್ರೆ ಬೇಡಿಕೆ ಏಕಿರುತ್ತಿತ್ತು? ವಿಪಕ್ಷದವರು ಪಿಎಂ ಕುಸುಮ್ ಯೋಜನೆ ಬಗ್ಗೆ ಇಲ್ಲ-ಸಲ್ಲದ ಮಾತನಾಡುತ್ತಾರೆ. ಹಾಗೊಂದು ವೇಳೆ ಈ ಯೋಜನೆ ವಿಫಲವಾಗಿದ್ದರೆ ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿರುವ ಕರ್ನಾಟಕ ಸರ್ಕಾರದವರು ಏಕೆ ಅಧಿಕೃತವಾಗಿ ನಮಗೆ ಇಷ್ಟೊಂದು ಬೇಡಿಕೆ ಕಳುಹಿಸುತ್ತಿದ್ದರು? ಎಂದು ಸಚಿವರು ಪ್ರಶ್ನಿಸಿದ್ದಾರೆ.

ಸೂರ್ಯ ಘರ್​ಗೆ 1.30 ಕೋಟಿ ನೋಂದಣಿ

ಪಿಎಂ ಕುಸುಮ್ ಯೋಜನೆಯನ್ನು 2019ರಲ್ಲಿ ಪ್ರಾರಂಭಿಸಿದ್ದು, ಸ್ವತಂತ್ರ ಸೋಲಾರ್ ಪಂಪ್‌ಗಳ ಸ್ಥಾಪನೆಗೆ ರೈತರಿಗೆ ಹಣಕಾಸಿನ ನೆರವು ಕೂಡ ನೀಡಲಾಗಿದೆ. ರೈತರಿಗೆ ಇದು ಆಶಾದಾಯಕ ವಾಗಿದೆ. ಇನ್ನು, ಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಗೆ ಜನರಿಂದ ಅಗಾಧ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜುಲೈ 2024ರವರೆಗೆ 1.30 ಕೋಟಿಗೂ ಹೆಚ್ಚು ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ವಿನೇಶ್ ಫೋಗಟ್ ಬೆನ್ನಿಗೆ ನಿಂತ ಪ್ರಧಾನಿ; ಭಾರತದ ಮುಂದಿರುವ ಆಯ್ಕೆಗಳ ಬಗ್ಗೆ ಪಿಟಿ ಉಷಾ ಜೊತೆ ಮೋದಿ ಚರ್ಚೆ

ಸೂರ್ಯ ಘರ್ ಯೋಜನೆಗೆ ಈಗಾಗಲೇ 15 ಲಕ್ಷಕ್ಕೂ ಹೆಚ್ಚು ಗ್ರಾಹಕರ ಅರ್ಜಿ ಸ್ವೀಕರಿಸಲಾಗಿದೆ. ಸುಮಾರು 2.3 ಲಕ್ಷ ಸೌರ ಮೇಲ್ಛಾವಣಿ ಸ್ಥಾಪಿಸಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರಗಳಿಂದಾಗಿ, ನವೀಕರಿಸಬಹುದಾದ ಇಂಧನ ಸ್ಥಾಪಿತ ಸಾಮರ್ಥ್ಯದಲ್ಲಿ ಭಾರತ ನಂ.4ನೇ ಸ್ಥಾನದಲ್ಲಿದೆ. ಪವನ ಶಕ್ತಿ ಸಾಮರ್ಥ್ಯದಲ್ಲಿ 4ನೇ ಸ್ಥಾನ ಮತ್ತು ಸೌರ ಪಿವಿ ಸಾಮರ್ಥ್ಯದಲ್ಲಿ 5ನೇ ಸ್ಥಾನದಲ್ಲಿದ್ದೇವೆ ಎಂದು ಸದನಕ್ಕೆ ಮಾಹಿತಿ ನೀಡಿದರು.

NDA ಸರ್ಕಾರ 21000 ಕೋಟಿ ವೆಚ್ಚ ಮಾಡಲಿದೆ: ಯುಪಿಎ ಆಡಳಿತಾವಧಿಯ ಒಂದು ದಶಕದಲ್ಲಿ ನವೀಕರಿಸಬಹುದಾದ ಇಂಧನ ಬಳಕೆಗೆ ಸರ್ಕಾರ ಕೇವಲ 6091 ಕೋಟಿ ರೂ. ವೆಚ್ಚ ಮಾಡಿತ್ತು. ಆದರೆ, NDA ಸರ್ಕಾರ ಈ ವರ್ಷವೇ ಬರೋಬ್ಬರಿ 21,000 ಕೋಟಿ ರೂ.ವೆಚ್ಚ ಮಾಡಲಿದೆ ಎಂದು ತಿಳಿಸಿದರು.

ಪ್ರಥಮ ಪ್ರಧಾನ ಕಚೇರಿ

ಪ್ರಧಾನಿ ಮೋದಿಯವರ ದೂರದೃಷ್ಟಿಯಿಂದಾಗಿ ಭಾರತ ಈಗ ಅಂತಾರಾಷ್ಟ್ರೀಯ ಸೌರ ಒಕ್ಕೂಟದ ಪ್ರಧಾನ ಕಚೇರಿಯನ್ನು ಹೊಂದಿದೆ. ಸ್ವಾತಂತ್ರ್ಯ ಬಂದಾಗಿನಿಂದ ಯಾವ ಅಂತರಾಷ್ಟ್ರೀಯ ಸಂಸ್ಥೆಯು ಭಾರತದಲ್ಲಿ ಪ್ರಧಾನ ಕಛೇರಿಯನ್ನು ಸ್ಥಾಪಿಸಲು ಯೋಚನೆಯನ್ನೇ ಮಾಡಿರಲಿಲ್ಲ. ಮೋದಿ ಕಾಲಘಟ್ಟದಲ್ಲಿ ಇದು ಸಾಧ್ಯವಾಗಿದ್ದು, ದೂರದೃಷ್ಟಿಯ ಅವರ ನಾಯಕತ್ವಕ್ಕೆ ಇದೊಂದು ನಿದರ್ಶನ ಎಂದು ಜೋಶಿ ಬಣ್ಣಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್