AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಹಂತಗಳಲ್ಲಿ ವಿದೇಶದಿಂದ ಭಾರತಕ್ಕೆ ಬರಲಿದ್ದಾರೆ 16 ಸಾವಿರಕ್ಕೂ ಹೆಚ್ಚು ಮಂದಿ

ಬೆಂಗಳೂರು: ವಿಶ್ವದಾದ್ಯಂತ ಕೊರೊನಾ ಸೋಂಕಿನ ಅಟ್ಟಹಾಸ ಮಿತಿಮೀರಿದೆ. ಈ ನಡುವೆ ವಿದೇಶಗಳಲ್ಲಿರುವ ಕನ್ನಡಿಗರನ್ನು ಭಾರತಕ್ಕೆ ಕರೆತರುವುದಕ್ಕೆ ಸಿದ್ಧತೆ ಶುರುವಾಗಿದೆ. 4,408 ಪ್ರವಾಸಿಗರು, 3,074 ವಿದ್ಯಾರ್ಥಿಗಳು, 2,784 ವಲಸಿಗರು, ವೃತ್ತಿನಿರತರು, 557 ಹಡಗು ಸಿಬ್ಬಂದಿ, ಸೇರಿದಂತೆದ ಮೊದಲ ಹಂತದಲ್ಲಿ 10,823 ಜನರನ್ನ ಕರೆತರಲು ಸಿದ್ಧತೆ ನಡೆಯುತ್ತಿದೆ. ನಂತರ 2,380 ಪ್ರವಾಸಿಗರು, 1,600 ವಿದ್ಯಾರ್ಥಿಗಳು, 1,503 ವಲಸಿಗರು, ವೃತ್ತಿನಿರತರು, 557 ಹಡಗು ಸಿಬ್ಬಂದಿ ಸೇರಿದಂತೆ 2ನೇ ಹಂತದಲ್ಲಿ 6,100 ಕನ್ನಡಿಗರನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತೆ. ಕೆನಡಾ-328, USA-927, UAE-2,575, ಕತಾರ್‌-414, […]

ಎರಡು ಹಂತಗಳಲ್ಲಿ ವಿದೇಶದಿಂದ ಭಾರತಕ್ಕೆ ಬರಲಿದ್ದಾರೆ 16 ಸಾವಿರಕ್ಕೂ ಹೆಚ್ಚು ಮಂದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2020 | 8:28 AM

Share

ಬೆಂಗಳೂರು: ವಿಶ್ವದಾದ್ಯಂತ ಕೊರೊನಾ ಸೋಂಕಿನ ಅಟ್ಟಹಾಸ ಮಿತಿಮೀರಿದೆ. ಈ ನಡುವೆ ವಿದೇಶಗಳಲ್ಲಿರುವ ಕನ್ನಡಿಗರನ್ನು ಭಾರತಕ್ಕೆ ಕರೆತರುವುದಕ್ಕೆ ಸಿದ್ಧತೆ ಶುರುವಾಗಿದೆ. 4,408 ಪ್ರವಾಸಿಗರು, 3,074 ವಿದ್ಯಾರ್ಥಿಗಳು, 2,784 ವಲಸಿಗರು, ವೃತ್ತಿನಿರತರು, 557 ಹಡಗು ಸಿಬ್ಬಂದಿ, ಸೇರಿದಂತೆದ ಮೊದಲ ಹಂತದಲ್ಲಿ 10,823 ಜನರನ್ನ ಕರೆತರಲು ಸಿದ್ಧತೆ ನಡೆಯುತ್ತಿದೆ.

ನಂತರ 2,380 ಪ್ರವಾಸಿಗರು, 1,600 ವಿದ್ಯಾರ್ಥಿಗಳು, 1,503 ವಲಸಿಗರು, ವೃತ್ತಿನಿರತರು, 557 ಹಡಗು ಸಿಬ್ಬಂದಿ ಸೇರಿದಂತೆ 2ನೇ ಹಂತದಲ್ಲಿ 6,100 ಕನ್ನಡಿಗರನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತೆ. ಕೆನಡಾ-328, USA-927, UAE-2,575, ಕತಾರ್‌-414, ಸೌದಿಯಿಂದ 927 ಜನರನ್ನ ಕರೆತರಲು ಸರ್ಕಾರ ನಿರ್ಧಾರಿಸಿದೆ.

ವಿದೇಶದಿಂದ ಬರುವ ಎಲ್ಲರಿಗೂ ಆರೋಗ್ಯ ತಪಾಸಣೆ ಮಾಡಲಾಗುತ್ತೆ. ವಿದೇಶದಿಂದ ಬಂದವರು ಆರೋಗ್ಯ ಸೇತು ಆ್ಯಪ್ ಬಳಕೆ ಮಾಡುವುದು ಕಡ್ಡಾಯವಾಗಿದೆ. ಅವರು ತಮ್ಮ ಆರೋಗ್ಯದ ಮಾಹಿತಿಯನ್ನು ಆ್ಯಪ್‌ನಲ್ಲಿ ದಾಖಲಿಸಬೇಕು. ಹೈಪರ್ ಟೆನ್ಷನ್, ಅಸ್ತಮಾ, ಇತರೆ ಕಾಯಿಲೆಗಳಿದ್ದರೂ ಆರೋಗ್ಯ ತಪಾಸಣೆ ವೇಳೆ ವೈದ್ಯರಿಗೆ ಮಾಹಿತಿ ನೀಡಬೇಕು.

ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿರಬೇಕು. ವಿದೇಶದಿಂದ ಬರುವವರಿಗೆ ಏರ್‌ಪೋರ್ಟ್‌ನಿಂದ ನೇರವಾಗಿ ಕ್ವಾರಂಟೈನ್‌ಗೆ ಶಿಫ್ಟ್ ಮಾಡಲಾಗುತ್ತೆ. 14 ದಿನ ಕ್ವಾರಂಟೈನ್​ನಲ್ಲಿರಬೇಕು. ಅವರನ್ನು ಕ್ವಾರಂಟೈನ್ ಸ್ಥಳಕ್ಕೆ ಕರೆದೊಯ್ಯಲು KSRTC, BMTC ಬಸ್‌ಗಳ ಸಿದ್ಧತೆ ಮಾಡಲಾಗುತ್ತೆ ಎಂಬ ಮಾಹಿತಿ ಸಿಕ್ಕಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?