ಪುಣೆ: ಬಸ್ ಕಂದಕಕ್ಕೆ ಉರುಳಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ (Maharashtra) ನಡೆದಿದೆ. ವರದಿಗಳ ಪ್ರಕಾರ, ಅಪಘಾತಕ್ಕೀಡಾದ ಬಸ್ (Bus Accident) ಪುಣೆಯಿಂದ ಲಾತೂರ್‌ಗೆ ಪ್ರಯಾಣಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಬಸ್‌ನ ಸ್ಟೇರಿಂಗ್ ರಾಡ್ ಮುರಿದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಉಂಟಾಗಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಕಣಿವೆಗೆ ಉರುಳಿದೆ.
ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯಕ್ಕೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: Dakshina Kannada: ಬಿಜೆಪಿ ಪ್ರಚಾರ ವಾಹನ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು
ಮತ್ತೊಂದು ಘಟನೆಯಲ್ಲಿ, ಸೋಮವಾರ ಅಸ್ಸಾಂನ ಮೊರಿಗಾಂವ್ ಜಿಲ್ಲೆಯ ಧರಮ್ತುಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-37ರಲ್ಲಿ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
“ಮಕರ ಸಂಕ್ರಾಂತಿಯಂದು ಲೋಹಿತ್ ನದಿಯಲ್ಲಿ ಪುಣ್ಯಸ್ನಾನ ಮಾಡಿ ಯಾತ್ರಾರ್ಥಿಗಳು ಹಿಂತಿರುಗುತ್ತಿದ್ದರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ತಕ್ಷಣವೇ ಮೋರಿಗಾಂವ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.