ಕಾಳಸಂತೆಯಲ್ಲಿ ಮಾರಾಟ: 3 ಸಾವಿರ ಕ್ವಿಂಟಾಲ್ ಪಡಿತರ ಜಪ್ತಿ! ಎಲ್ಲಿ?

ಕಲಬುರಗಿ: ಸರ್ಕಾರ ಬಡಜನರಿಗಾಗಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತದೆ. ಆದ್ರೆ ಸರ್ಕಾರದ ಯೋಜನೆಗಳು ಮಾತ್ರ ಬಹುತೇಕ ಫಲಾನುಭವಿಗಳಿಗೆ ತಲಪೋದಿಲ್ಲ. ಹೌದು.. ಕೊರೊನಾದಿಂದ ಇಡೀ ಜಗತ್ತೇ ತತ್ತರಿಸಿಹೋಗಿದೆ. ಅದರಲ್ಲೂ ಕೂಡಾ ಕಡುಬಡವರು ಉದ್ಯೋಗವಿಲ್ಲದೆ, ಹೊಟ್ಟೆ ತುಂಬಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ, ಕೇಂದ್ರ ಸರ್ಕಾರ ಬಡವರ ಹೊಟ್ಟೆ ತುಂಬಿಸಲು ಉಚಿತವಾಗಿ ಅಕ್ಕಿ ಮತ್ತು ಗೋಧಿ ನೀಡುತ್ತಿದೆ. ಆದ್ರೆ ಕಲಬುರಗಿಯಲ್ಲಿ ಬಡ ಜನರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ ಧಾನ್ಯಗಳು ಕಾಳ ಸಂತೆಯಲ್ಲಿ ಮಾರಾಟವಾಗ್ತಿವೆ. ಕಲಬುರಗಿ ಜಿಲ್ಲೆ ಕೊರೊನಾದ ಹಾಟಸ್ಪಾಟ್ […]

ಕಾಳಸಂತೆಯಲ್ಲಿ ಮಾರಾಟ: 3 ಸಾವಿರ ಕ್ವಿಂಟಾಲ್ ಪಡಿತರ ಜಪ್ತಿ! ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on:May 20, 2020 | 5:22 PM

ಕಲಬುರಗಿ: ಸರ್ಕಾರ ಬಡಜನರಿಗಾಗಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತದೆ. ಆದ್ರೆ ಸರ್ಕಾರದ ಯೋಜನೆಗಳು ಮಾತ್ರ ಬಹುತೇಕ ಫಲಾನುಭವಿಗಳಿಗೆ ತಲಪೋದಿಲ್ಲ. ಹೌದು.. ಕೊರೊನಾದಿಂದ ಇಡೀ ಜಗತ್ತೇ ತತ್ತರಿಸಿಹೋಗಿದೆ. ಅದರಲ್ಲೂ ಕೂಡಾ ಕಡುಬಡವರು ಉದ್ಯೋಗವಿಲ್ಲದೆ, ಹೊಟ್ಟೆ ತುಂಬಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯ, ಕೇಂದ್ರ ಸರ್ಕಾರ ಬಡವರ ಹೊಟ್ಟೆ ತುಂಬಿಸಲು ಉಚಿತವಾಗಿ ಅಕ್ಕಿ ಮತ್ತು ಗೋಧಿ ನೀಡುತ್ತಿದೆ. ಆದ್ರೆ ಕಲಬುರಗಿಯಲ್ಲಿ ಬಡ ಜನರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ ಧಾನ್ಯಗಳು ಕಾಳ ಸಂತೆಯಲ್ಲಿ ಮಾರಾಟವಾಗ್ತಿವೆ.

ಕಲಬುರಗಿ ಜಿಲ್ಲೆ ಕೊರೊನಾದ ಹಾಟಸ್ಪಾಟ್ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇನ್ನೊಂದಡೆ ಲಕ್ಷಾಂತರ ಜನರು ಕೆಲಸವಿಲ್ಲದೆ ಮನೆಯಲ್ಲಿ ಕುಳಿತಿದ್ದಾರೆ. ಮಹಾರಾಷ್ಟ್ರ, ಬೆಂಗಳೂರು ಸೇರಿದಂತೆ ಅನೇಕ ಕಡೆ ತುತ್ತಿನ ಚೀಲ ತುಂಬಿಸಿಕೊಳ್ಳಲು ಹೋಗಿದ್ದ ಸಾವಿರಾರು ವಲಸೆ ಕಾರ್ಮಿಕರು ಇದೀಗ ತಮ್ಮೂರಿಗೆ ಬಂದು ಸೇರಿದ್ದಾರೆ. ತುತ್ತು ಅನ್ನಕ್ಕೂ ಪರದಾಡುವಂತಹ ಲಕ್ಷಾಂತರ ಜನರು, ಸರ್ಕಾರದ ಸಹಾಯಕ್ಕಾಗಿ ಕಾಯುತ್ತಿದ್ದಾರೆ. ಇಂತವರ ಸಂಕಷ್ಟ ನೋಡಿಯೇ ರಾಜ್ಯ ಮತ್ತು ಕೇಂದ್ರ ಸರ್ಕಾರ BPL ಕಾರ್ಡ್ ಇದ್ದವರಿಗೆ ಉಚಿತವಾಗಿ ಅಕ್ಕಿ, ಗೋಧಿ ಕೊಡುತ್ತಿದೆ.

ಸರ್ಕಾರ ನೀಡುತ್ತಿರುವ ಪಡಿತರ ಫಲಾನುಭವಿಗಳಿಗೆ ಸೇರ್ತಿಲ್ಲ: ಆದ್ರೆ ಸರ್ಕಾರ ನೀಡುತ್ತಿರುವ ಅಕ್ಕಿ, ಬಹುತೇಕ ಫಲಾನುಭವಿಗಳಿಗೆ ಸೇರುತ್ತಿಲ್ಲ. ಸರ್ಕಾರ ನಮಗೆ ನೀಡಿದ್ದ ಅಕ್ಕಿ ತಲುಪಿಲ್ಲ ಎಂದು ಹೇಳುತ್ತಿದ್ದಾರೆ. ನೀಡಿದ್ರು ಕಡಿಮೆ ನೀಡಿದ್ದಾರೆ ಅನ್ನೋ ಅನೇಕ ದೂರುಗಳು ಕಲಬುರಗಿ ಜಿಲ್ಲೆಯಲ್ಲಿ ಕೇಳಿಬಂದಿದ್ದವು. ಈ ಬಗ್ಗೆ ಜಿಲ್ಲಾಡಳಿತ ಕೂಡಾ ಅನೇಕ ಪಡಿತರ ಅಂಗಡಿಗಳ ಲೈಸನ್ಸ್ ರದ್ದು ಮಾಡಿತು. ಹಾಗಂತ ಬಡಜನರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ ಧಾನ್ಯಗಳು ಏನಾದವು, ಎಲ್ಲಿ ಸೇರಿದವು ಅಂತ ಪತ್ತೆ ಮಾಡ್ತಾ ಹೋದಾಗ ಗೊತ್ತಾಗಿದ್ದು, ಕರಾಳ ದಂಧೆಯ ಇನ್ನೊಂದು ಮುಖ.

ಹೌದು, ಬಡ ಜನರ ಹೊಟ್ಟೆ ತುಂಬಿಸಬೇಕಿದ್ದ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗ್ತಿರೋದು ಜಿಲ್ಲೆಯಲ್ಲಿ ಬಯಲಾಗಿದೆ. ಕಲಬುರಗಿ ಆಹಾರ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಪೊಲೀಸರು ಕಳೆದ ಒಂದೇ ತಿಂಗಳಲ್ಲಿ ಜಿಲ್ಲೆಯಲ್ಲಿ ಮೂರು ಕಡೆ ಅಕ್ರಮವಾಗಿ ಪಡಿತರ ಧಾನ್ಯಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವದನ್ನು ಪತ್ತೆ ಮಾಡಿದ್ದಾರೆ.

3 ಸಾವಿರಕ್ಕೂ ಅಧಿಕ ಕ್ವಿಂಟಾಲ್ ಅಕ್ಕಿ ಜಪ್ತಿ: ಕಲಬುರಗಿ ಜಿಲ್ಲೆಯಲ್ಲಿ ಮೂರು ದಾಳಿಗಳಲ್ಲಿ ಮೂರು ಸಾವಿರಕ್ಕೂ ಅಧಿಕ ಕ್ವಿಂಟಾಲ್ ಅಕ್ಕಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ನಗರದ ಚೌಕ್ ಮತ್ತು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಲಾ ಒಂದೊಂದು ಪ್ರಕರಣ, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಹೌದು ಬಡಜನರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ ಅಕ್ಕಿಯನ್ನು, ಕಾಳ ಸಂತೆಯಲ್ಲಿ ಅಕ್ರಮ ದಂಧೆ ಮಾಡುವವರಿಗೆ ನೀಡಿದ್ದಾರೆ. ಅವರು ಅವುಗಳನ್ನು ಸಂಗ್ರಹಿಸಿ, ಬೇರೆ ಪಾಕೇಟ್​ಗಳನ್ನು ಮಾಡಿ, ನೆರೆ ರಾಜ್ಯಗಳಿಗೆ ಕಳುಹಿಸಿ, ಲಕ್ಷಾಂತರ ರೂಪಾಯಿ ಹಣ ಸಂಪಾದಿಸುತ್ತಾರೆ.

ಹೌದು ಕಲಬುರಗಿ ಜಿಲ್ಲೆಯ ಬಡ ಜನರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ ಧಾನ್ಯಗಳು, ನೆರೆಯ ಮಹಾರಾಷ್ಟ್ರ ಮತ್ತು ಬೇರೆ ರಾಜ್ಯಗಳಿಗೆ ಹೋಗುತ್ತವೆ. ಇದೇ ಅಕ್ಕಿಯನ್ನು ಪಾಲಿಶ್ ಮಾಡಿ, ಬೇರೆ ದೇಶಗಳಿಗೆ ಕಳುಹಿಸುವ ದಂಧೆ ಕೂಡಾ ಅನೇಕ ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿದೆ. ಸರ್ಕಾರ ಉಚಿತವಾಗಿ ಬಡ ಜನರಿಗೆ ನೀಡುವ ಅಕ್ಕಿ ಸೇರಿದಂತೆ ಪಡಿತರ ಧಾನ್ಯಗಳನ್ನು ಮಾರಾಟ ಮಾಡಿ ಕೋಟ್ಯಂತರ ರೂಪಾಯಿ ಹಣ ಗಳಿಸುವ ಅಕ್ರಮ ದಂದೆಯೇ ರಾಜ್ಯದಲ್ಲಿ ಅನೇಕ ವರ್ಷಗಳಿಂದ ನಡೆದುಕೊಂಡು ಬಂದಿದೆ. ಅನೇಕ ಕಡೆ ಪ್ರಕರಣ ದಾಖಲಾಗುತ್ತವೆ. ಆದ್ರೆ ಸರಿಯಾಗಿ ವಿಚಾರಣೆಯಾಗುತ್ತಿಲ್ಲಾ. ಹೀಗಾಗಿ ಅಕ್ರಮ ಕುಳಗಳು ನ್ಯಾಯಾಂಗದ ಕುಣಿಕೆಯಿಂದ ಕೂಡಾ ಪಾರಾಗುತ್ತಿವೆ.

Published On - 2:24 pm, Wed, 20 May 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್