ಒಡಿಶಾದಲ್ಲಿ ಪಟಾಕಿ ಸ್ಫೋಟಗೊಂಡು 30ಕ್ಕೂ ಹೆಚ್ಚು ಜನರಿಗೆ ಗಾಯ

ತೀವ್ರವಾಗಿ ಗಾಯಗೊಂಡ ವ್ಯಕ್ತಿಗಳನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಒಡಿಶಾದಲ್ಲಿ ಪಟಾಕಿ ಸ್ಫೋಟಗೊಂಡು 30ಕ್ಕೂ ಹೆಚ್ಚು ಜನರಿಗೆ ಗಾಯ
ಒಡಿಶಾದಲ್ಲಿ ಪಟಾಕಿ ಸ್ಫೋಟದಿಂದ ಗಾಯಗೊಂಡ ಜನರು
Updated By: ಸುಷ್ಮಾ ಚಕ್ರೆ

Updated on: Nov 24, 2022 | 8:12 AM

ಭುವನೇಶ್ವರ: ಒಡಿಶಾದ (Odisha) ಕೇಂದ್ರಪಾರದ ಸದರ್ ಪಿಎಸ್ ವ್ಯಾಪ್ತಿಯ ಬಲಿಯಾ ಬಜಾರ್‌ನಲ್ಲಿ ಪಟಾಕಿ (Firecrackers) ಸಿಡಿಸುವ ಸ್ಪರ್ಧೆ ನಡೆಯುತ್ತಿದ್ದಾಗ ಪಟಾಕಿ ಸ್ಫೋಟ ಸಂಭವಿಸಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭುವನೇಶ್ವರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬಲಿಯಾ ಬಜಾರ್‌ನಲ್ಲಿರುವ ವಿವಿಧ ಪೂಜಾ ಪೆಂಡಾಲ್‌ಗಳ ನಡುವೆ ಪಟಾಕಿ ಸಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವೇಳೆ ಶೇಖರಿಸಿಟ್ಟಿದ್ದ ಪಟಾಕಿಗಳ ರಾಶಿಯ ಮೇಲೆ ಪಟಾಕಿಯ ಬೆಂಕಿಯ ಕಿಡಿ ಬಿದ್ದು 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡ ಹಲವು ಜನರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಖ್ ಜೊತೆ ಮತ್ತೊಬ್ಬ ಯುವಕನಿದ್ದನೇ?

ನಾವು ತೀವ್ರವಾಗಿ ಗಾಯಗೊಂಡ ವ್ಯಕ್ತಿಗಳನ್ನು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಿದ್ದೇವೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸುಟ್ಟ ರೋಗಿಗಳ ಚಿಕಿತ್ಸೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 am, Thu, 24 November 22