ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಆರೋಗ್ಯ ಕಾರ್ಯಕರ್ತರ ಸಂಖ್ಯೆ 95 ಲಕ್ಷಕ್ಕಿಂತಲೂ ಹೆಚ್ಚು: ಕೇಂದ್ರ ಸಚಿವ ಹರ್ಷವರ್ಧನ್

ಕೊವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಆರೋಗ್ಯ ಕಾರ್ಯಕರ್ತರ ಸಂಖ್ಯೆ 95 ಲಕ್ಷಕ್ಕಿಂತಲೂ ಹೆಚ್ಚು: ಕೇಂದ್ರ ಸಚಿವ ಹರ್ಷವರ್ಧನ್
ಹರ್ಷವರ್ಧನ್

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,48,412 ಕೊವಿಡ್ ಪ್ರಕರಣಗನ್ನು ದಾಖಲಿಸಿದ್ದು 3,55,338 ರೋಗಿಗಳು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ ಎಂಬುದು ತುಂಬಾ ತೃಪ್ತಿಕರವಾಗಿದೆ. ಕ್ರಮೇಣ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತದೆ.

Rashmi Kallakatta

|

May 12, 2021 | 7:44 PM

ದೆಹಲಿ: ಜನವರಿ 16 ರಿಂದ ಲಸಿಕೆ ವಿತರಣೆ ಆರಂಭದಾಂದಿನಿಂದ 95 ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರಿಗೆ ತಮ್ಮ ಮೊದಲ ಡೋಸ್ ಕೊವಿಡ್ -19 ಲಸಿಕೆ ನೀಡಲಾಗಿದೆ ಮತ್ತು ಅವರಲ್ಲಿ 65 ಲಕ್ಷಕ್ಕೂ ಹೆಚ್ಚು ಮಂದಿ ತಮ್ಮ ಎರಡನೇ ಡೋಸ್ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಬುಧವಾರ ಮಾಹಿತಿ ನೀಡಿದ್ದಾರೆ. ಕೊವಿಡ್ ವ್ಯಾಕ್ಸಿನೇಷನ್ ಡ್ರೈವ್‌ನ ಪ್ರಗತಿಯನ್ನು ಪರಿಶೀಲಿಸಲು ಮತ್ತು ಅದನ್ನು ವೇಗಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಲು ಉತ್ತರಾಖಂಡ, ಹರಿಯಾಣ, ಪಂಜಾಬ್, ಬಿಹಾರ, ಜಾರ್ಖಂಡ್, ಒಡಿಶಾ, ಜಮ್ಮು ಮತ್ತು ಕಾಶ್ಮೀರ ಮತ್ತು ತೆಲಂಗಾಣದ ಆರೋಗ್ಯ ಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಕೇಂದ್ರ ಆರೋಗ್ಯ ಸಚಿವರು ಇಂದು ಸಭೆ ನಡೆಸಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಆರೋಗ್ಯ ಮೂಲಸೌಕರ್ಯಗಳ ಮೇಲಿನ ಒತ್ತಡವನ್ನು ಹೆಚ್ಚಿಸಿರುವ ದೇಶಾದ್ಯಂತ ಕೊವಿಡ್ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದಿದೆ ಎಂದು ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವರು ಹೇಳಿದರು. ಈ ಒತ್ತಡದ ಹೊರತಾಗಿಯೂ, ಪ್ರತಿಯೊಬ್ಬರೂ ಕೊವಿಡ್ ವಿರುದ್ಧ ಹೋರಾಡುವ ಪ್ರಯತ್ನಗಳನ್ನು ತೀವ್ರಗೊಳಿಸಿದರು.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,48,412 ಕೊವಿಡ್ ಪ್ರಕರಣಗನ್ನು ದಾಖಲಿಸಿದ್ದು 3,55,338 ರೋಗಿಗಳು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ ಎಂಬುದು ತುಂಬಾ ತೃಪ್ತಿಕರವಾಗಿದೆ. ಕ್ರಮೇಣ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತದೆ.

ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯ 25 ಲಕ್ಷಕ್ಕೂ ಹೆಚ್ಚಾಗಿದೆ ಮತ್ತು ದೇಶಾದ್ಯಂತ 2527 ಪರೀಕ್ಷಾ ಪ್ರಯೋಗಾಲಯಗಳಿವೆ ಎಂದು ಸಚಿವರು ಹೇಳಿದರು. ಜಮ್ಮು ಮತ್ತು ಕಾಶ್ಮೀರ, ಒಡಿಶಾ ಮತ್ತು ಉತ್ತರಾಖಂಡ ಪ್ರಕರಣಗಳ ಹೆಚ್ಚಳವು ಕಳವಳಕಾರಿಯಾಗಿದೆ ಎಂದ ಅವರು ಪಂಜಾಬ್‌ನಲ್ಲಿ ಕೊವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿವೆ ಎಂದಿದ್ದಾರೆ.

ಹರಿಯಾಣ ಮತ್ತು ಬಿಹಾರದಲ್ಲಿ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ.

ದೇಶಾದ್ಯಂತ 17,52,35,991 ಡೋಸ್ ಕೊವಿಡ್ ಲಸಿಕೆಗಳನ್ನು ನೀಡಲಾಗಿದೆ. 95,82,449 ಆರೋಗ್ಯ ಕಾರ್ಯಕರ್ತರಿಗೆ ಕೊವಿಡ್ ಲಸಿಕೆಯ ಮೊದಲ ಪ್ರಮಾಣವನ್ನು ನೀಡಲಾಗಿದ್ದ್ದು 65,39,376 ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಮೇ 1 ರಿಂದ 18-44 ವರ್ಷದೊಳಗಿನ 30,44,463 ಫಲಾನುಭವಿಗಳಿಗೆ ತಮ್ಮ ಮೊದಲ ಡೋಸ್‌ಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಎರಡನೇ ಡೋಸ್ ಬಾಕಿ ಇರುವ ಜನರಿಗೆ ಆದ್ಯತೆ ನೀಡುವಂತೆ ಅವರು ರಾಜ್ಯಗಳನ್ನು ಒತ್ತಾಯಿಸಿದರು. ಲಸಿಕೆ ಉತ್ಪಾದನೆಯು ಮೇ ಅಂತ್ಯದವರೆಗೆ ಎಂಟು ಕೋಟಿಗಳವರೆಗೆ ಮತ್ತು ಜೂನ್ ಅಂತ್ಯದವರೆಗೆ ಒಂಬತ್ತು ಕೋಟಿಗಳವರೆಗೆ ಹೋಗುತ್ತದೆ ಎಂದು ಅವರು ಭರವಸೆ ನೀಡಿದರು. ಸಭೆಯಲ್ಲಿ ಲಸಿಕೆ ವ್ಯರ್ಥವಾಗುವುದನ್ನು ಕಡಿಮೆ ಮಾಡಬೇಕೆಂದು ಹರ್ಷವರ್ಧನ್ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದರು.

ಇದನ್ನೂ ಓದಿ: ಕೊವಿಡ್ 19 ಸಾಂಕ್ರಾಮಿಕದ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡೋಣ: ಅಜೀಂ ಪ್ರೇಮ್​ಜಿ

Follow us on

Related Stories

Most Read Stories

Click on your DTH Provider to Add TV9 Kannada