ಮಹಾರಾಷ್ಟ್ರದ ವಯಸ್ಕ ಜನಸಂಖ್ಯೆಗಿಂತ ಹೆಚ್ಚಿನ ಮತದಾರರು!; ರಾಹುಲ್ ಗಾಂಧಿ ಗಂಭೀರ ಆರೋಪ
ಕಳೆದ ವರ್ಷ ನಡೆದ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಪ್ರತಿಪಕ್ಷಗಳಾದ ನಾವು ಈಗಾಗಲೇ ಚುನಾವಣಾ ಆಯೋಗದೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ಆದರೆ, ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳದ ಕಾರಣದಿಂದಾಗಿ ನ್ಯಾಯಾಲಯದ ಮೊರೆ ಹೋಗಲು ಯೋಚಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ನವದೆಹಲಿ: ಮಹಾರಾಷ್ಟ್ರದಲ್ಲಿ ಕಳೆದ ವರ್ಷಾಂತ್ಯದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿತ್ತು. ಇದಾದ ಬಳಿಕ ವಿಪಕ್ಷಗಳು ಮಹಾರಾಷ್ಟ್ರ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿದ್ದವು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು (ಶುಕ್ರವಾರ) ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ಕುರಿತು ಚುನಾವಣಾ ಆಯೋಗದಿಂದ ವರದಿ ಕೇಳಿದ್ದಾರೆ. ಹಾಗೇ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಳೆದ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ರಾಜ್ಯದ ನಿಜವಾದ ಜನಸಂಖ್ಯೆಗಿಂತ ಹೆಚ್ಚಿನ ನೋಂದಾಯಿತ ಮತದಾರರು ಕಂಡುಬಂದಿದ್ದಾರೆ. ಇದು ಬಿಜೆಪಿ ಪಕ್ಷಕ್ಕೆ ಪ್ರಯೋಜನವನ್ನು ನೀಡಿದೆ ಎಂದು ಹೇಳಿದ್ದಾರೆ.
ಶಿವಸೇನೆಯ (ಯುಬಿಟಿ) ಸಂಜಯ್ ರಾವತ್ ಮತ್ತು ಸುಪ್ರಿಯಾ ಸುಳೆ ಎನ್‌ಸಿಪಿ (ಎಸ್‌ಪಿ) ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭಾ ಚುನಾವಣೆಯ ನಂತರದ 5 ತಿಂಗಳಲ್ಲಿ ಮಹಾರಾಷ್ಟ್ರದಲ್ಲಿ 39 ಲಕ್ಷ ಮತದಾರರು ಸೇರ್ಪಡೆಯಾಗಿದ್ದಾರೆ. ಹಿಂದಿನ 5 ವರ್ಷಗಳಲ್ಲಿ ಇದು 32 ಲಕ್ಷವಾಗಿತ್ತು ಎಂದು ಆರೋಪಿಸಿದ್ದಾರೆ.
Our questions to the Election Commission on the Maharashtra elections:
– Why did EC add more voters in Maharashtra in 5 months than it did in 5 years?
– Why were there more registered voters in VS 2024 than the entire adult population of Maharashtra?
– One example among many… pic.twitter.com/K7fOWdnXmV
— Rahul Gandhi (@RahulGandhi) February 7, 2025
ಇದನ್ನೂ ಓದಿ: ಗುಡಿಸಲೆದುರು ಫೋಟೋಶೂಟ್ ಮಾಡಿಸಿಕೊಳ್ಳುವವರಿಗೆ ಬಡವರ ಕುರಿತ ಭಾಷಣ ನೀರಸವಾಗೇ ಇರುತ್ತದೆ; ರಾಹುಲ್ ಗಾಂಧಿಗೆ ಮೋದಿ ಚಾಟಿ
ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಚುನಾವಣಾ ಆಯೋಗವನ್ನು ಸಂಪರ್ಕಿಸಿದ್ದು, ಮತದಾರರ ಪಟ್ಟಿಯನ್ನು ಪರಿಶೀಲಿಸುವಂತೆ ಕೋರಿವೆ. ಆದರೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಮಹಾರಾಷ್ಟ್ರ ಚುನಾವಣೆಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ನಾವು ಚುನಾವಣಾ ಆಯೋಗಕ್ಕೆ ಹೇಳುತ್ತಲೇ ಇದ್ದೇವೆ. ಲೋಕಸಭಾ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗಳ ಮತದಾರರ ಪಟ್ಟಿಗಳು ನಮಗೆ ಬೇಕು” ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.
LIVE: Joint Press Conference | Constitution Club Of India, New Delhi https://t.co/kpb1Pa1Uqh
— Rahul Gandhi (@RahulGandhi) February 7, 2025
ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೂ ಮುನ್ನ ದಿಢೀರನೆ 70 ಲಕ್ಷ ಹೊಸ ಮತದಾರರ ಸೇರ್ಪಡೆ; ರಾಹುಲ್ ಗಾಂಧಿ ಆರೋಪ
“ವಾಸ್ತವ ಸಂಗತಿಯೆಂದರೆ ಹಿಮಾಚಲ ಪ್ರದೇಶ ರಾಜ್ಯದ ಜನಸಂಖ್ಯೆಯಷ್ಟು ಮತದಾರರನ್ನು ಮಹಾರಾಷ್ಟ್ರದಲ್ಲಿ ಹೊಸತಾಗಿ ಸೇರಿಸಲಾಗಿದೆ. ಹೊಸದಾಗಿ ಎಲ್ಲೆಲ್ಲಿ ಮತದಾರರ ಹೆಸರುಗಳನ್ನು ಸೇರಿಸಲಾಗಿದೆಯೋ ಆಯಾ ಕ್ಷೇತ್ರಗಳು ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಗೆದ್ದಲ್ಲೆಲ್ಲಾ ಹೊಸ ಮತದಾರರನ್ನು ಸೇರಿಸಲಾಗಿದೆ. ವಿಚಿತ್ರವಾದ ಸಂಗತಿಯೆಂದರೆ, ಚುನಾವಣಾ ಆಯೋಗದ ಪಟ್ಟಿಯಂತೆ ಮಹಾರಾಷ್ಟ್ರದ ಜನಸಂಖ್ಯೆಗಿಂತ ಹೆಚ್ಚಿನ ಮತದಾರರು ಮತ ಚಲಾಯಿಸಿದ್ದಾರೆ. ಇವು ಊಹಾಪೋಹಗಳಲ್ಲ, ಇದೇ ನಿಜವಾದ ಸತ್ಯ. ಇದು ನಮ್ಮ ದತ್ತಾಂಶವಲ್ಲ, ಇದು ಚುನಾವಣಾ ಆಯೋಗದ ದತ್ತಾಂಶ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ