AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ನ ಮದುವೆಯಾಗಲು ಹೆತ್ತವರಿಗೆ ವಿಷ ಉಣಿಸಿದ ಅಪ್ರಾಪ್ತ ಮಗಳು

ಮಧ್ಯಪ್ರದೇಶದ ಮೊರೆನಾದಲ್ಲಿ ಆಘಾತಕಾರಿ ಘಟನೆ: ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಹೆತ್ತವರಿಗೆ ಚಪಾತಿಯಲ್ಲಿ ಇಲಿ ವಿಷ ಬೆರೆಸಿ ಕೊಲೆಗೆ ಯತ್ನಿಸಿದ್ದಾಳೆ. ಪೋಷಕರ ಆರೋಗ್ಯ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಡಿಯೋ ಸಾಕ್ಷ್ಯದ ಆಧಾರದ ಮೇಲೆ ಬಾಲಕಿ ಮತ್ತು ಆಕೆಯ ಗೆಳೆಯನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಈ ಕೃತ್ಯ ಸಮಾಜದಲ್ಲಿ ಸಂಬಂಧಗಳ ಬಗ್ಗೆ ಆತಂಕ ಮೂಡಿಸಿದೆ.

ಬಾಯ್​ಫ್ರೆಂಡ್ನ ಮದುವೆಯಾಗಲು ಹೆತ್ತವರಿಗೆ ವಿಷ ಉಣಿಸಿದ ಅಪ್ರಾಪ್ತ ಮಗಳು
ಚಪಾತಿImage Credit source: Chaitra's Food Book
ನಯನಾ ರಾಜೀವ್
|

Updated on: Apr 13, 2026 | 10:48 AM

Share

ಮರೆನಾ, ಏಪ್ರಿಲ್ 13: ಅಪ್ರಾಪ್ತ ಬಾಲಕಿಯೊಬ್ಬಳು ಬಾಯ್​ಫ್ರೆಂಡ್​ನನ್ನು ಮದುವೆಯಾಗಲು ತನ್ನ ಹೆತ್ತವರಿಗೆ ವಿಷ(Poison) ಉಣಿಸಿರುವ ಘಟನೆ ಮಧ್ಯಪ್ರದೇಶದ ಮರೆನಾದಲ್ಲಿ ನಡೆದಿದೆ. ಮನುಷ್ಯತ್ವಕ್ಕೇ ಕಪ್ಪುಚುಕ್ಕಿ ಇಡುವಂತಹ ಘಟನೆಯೊಂದು ನಡೆದಿದೆ. ಪ್ರೀತಿಯ ಅಮಲಿನಲ್ಲಿ ಕುರುಡಾದ ಮಗಳೊಬ್ಬಳು, ಹೆತ್ತವರನ್ನೇ ಮುಗಿಸಲು ಸಂಚು ರೂಪಿಸಿದ ಕರಾಳ ಕಥೆ ಇಲ್ಲಿದೆ. ಹೆತ್ತವರು ಮಗಳ ಮೇಲೆ ಇಟ್ಟಿದ್ದ ನಂಬಿಕೆ ಹುಸಿಯಾಗಿದೆ, ಚಪಾತಿಯಲ್ಲಿ ಇಲಿ ಪಾಷಾಣ ಬೆರೆಸಿ ಪೋಷಕರಿಗೆ ನೀಡಿರುವ ಘಟನೆ ಬೆಳಕಿಗೆ . ಮೊರೆನಾ ಜಿಲ್ಲೆಯ ಪೋರ್ಸಾ ಎಂಬಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಗೆಳೆಯನ ಜೊತೆ ಸೇರಿ ತಂದೆ-ತಾಯಿಯನ್ನೇ ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ.

ತನ್ನ ಪ್ರೇಮಕ್ಕೆ ಅಡ್ಡಿಯಾಗುತ್ತಾರೆಂಬ ಕಾರಣಕ್ಕೋ ಏನೋ, ಈ ಬಾಲಕಿ ತನ್ನ ಗೆಳೆಯ ಸುದಾಮನ ಜೊತೆ ಸೇರಿ ಕ್ರೂರ ಯೋಜನೆಯೊಂದನ್ನು ರೂಪಿಸಿದ್ದಳು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ತಾನೇ ಅಡುಗೆ ಮಾಡುವ ಜವಾಬ್ದಾರಿ ವಹಿಸಿಕೊಂಡ ಬಾಲಕಿ, ಚಪಾತಿಯ ಹಿಟ್ಟಿನಲ್ಲಿ ಇಲಿ ವಿಷವನ್ನು ಬೆರೆಸಿದ್ದಾಳೆ. ಇದನ್ನು ತಿಂದ ತಾಯಿ ಮಿಥಿಲೇಶ್ ಮತ್ತು ತಂದೆ ಗಬ್ಬರ್ ಪ್ರಜಾಪತಿ ಅವರ ಆರೋಗ್ಯ ತಕ್ಷಣವೇ ಹದಗೆಟ್ಟಿದೆ. ಸದ್ಯ ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು, ಮೊರೆನಾದಿಂದ ಗ್ವಾಲಿಯರ್‌ನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.

ಈ ಪ್ರಕರಣವು ಆರಂಭದಲ್ಲಿ ಕೇವಲ ಫುಡ್​ಪಾಯ್ಸನ್​ನಂತೆ ತೋರಿತ್ತು. ಆದರೆ ಪೊಲೀಸರಿಗೆ ಸಿಕ್ಕ ಒಂದು ಆಡಿಯೋ ಕ್ಲಿಪ್ ಇಡೀ ಕಥೆಯನ್ನೇ ಬದಲಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಆಡಿಯೋದಲ್ಲಿ ಬಾಲಕಿ ಮತ್ತು ಆಕೆಯ ಗೆಳೆಯ ಸುದಾಮ ಪರಸ್ಪರ ಸಂಚು ಹೂಡುತ್ತಿರುವುದು ಸ್ಪಷ್ಟವಾಗಿದೆ.

ಮತ್ತಷ್ಟು ಓದಿ: ಮೌಂಟ್ ಎವರೆಸ್ಟ್​ ಪರ್ವತಾರೋಹಿಗಳಿಗೆ ವಿಷ ನೀಡಿದ ಆರೋಪ; 185 ಕೋಟಿ ರೂ. ಹಗರಣ ಬಯಲು

ಹತ್ತಿರದಲ್ಲೇ ಗೊಬ್ಬರದ ಅಂಗಡಿ ಇದೆ, ಅಲ್ಲಿಂದ ಇಲಿ ವಿಷ ತಂದಿಟ್ಟುಕೊ. ಇವತ್ತು ನಾನೇ ರೊಟ್ಟಿ ಮಾಡುತ್ತಿದ್ದೇನೆ, ನನಗೆ ಒಳ್ಳೆಯ ಅವಕಾಶ ಸಿಕ್ಕಿದೆ. ರೊಟ್ಟಿಯಲ್ಲಿ ವಿಷ ಬೆರೆಸಿ ಅವರಿಗೆ ತಿನ್ನಿಸಿಬಿಡುತ್ತೇನೆ ಎಂದು ಆಕೆ ಹೇಳಿದ್ದಳು. ಈ ಒಂದು ಸಂಭಾಷಣೆ ಪೊಲೀಸರ ಕೈಗೆ ಸಿಕ್ಕ ನಂತರವೇ ಮಗಳ ಕ್ರೂರ ಮುಖ ಅನಾವರಣಗೊಂಡಿತು.

ಪೋಷಕರಾದ ಮಿಥಿಲೇಶ್ ಮತ್ತು ಗಬ್ಬರ್ ಪ್ರಜಾಪತಿ ಅವರು ಪ್ರಾಣಾಪಾಯದಿಂದ ಪಾರಾದ ನಂತರ ಪೋರ್ಸಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆಡಿಯೋ ಸಾಕ್ಷ್ಯ ಮತ್ತು ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಅಪ್ರಾಪ್ತ ಬಾಲಕಿ ಮತ್ತು ಆಕೆಯ ಗೆಳೆಯ ಸುದಾಮನ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಇಬ್ಬರನ್ನೂ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಪ್ರೀತಿಯ ಹೆಸರಿನಲ್ಲಿ ಹೆತ್ತವರನ್ನೇ ಬಲಿ ಕೊಡಲು ಹೊರಟ ಮಗಳ ಈ ಕೃತ್ಯ ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ. ಸಂಬಂಧಗಳ ನಡುವಿನ ನಂಬಿಕೆ ಎಷ್ಟು ಶಿಥಿಲವಾಗಿದೆ ಎಂಬುದಕ್ಕೆ ಈ ಘಟನೆ ಕನ್ನಡಿಯಂತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ