ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರ ಸ್ಥಾನ; ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆ

ಶೇಕಡಾ 76 ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಅನುಮೋದಿಸಿದ್ದಾರೆ. ಶೇಕಡಾ 18 ರಷ್ಟು ಜನರು ಮಾತ್ರ ಅವರನ್ನು ಒಪ್ಪುವುದಿಲ್ಲ ಮತ್ತು ಶೇಕಡಾ 6 ರಷ್ಟು ಜನರು ಯಾವುದೇ ಅಭಿಪ್ರಾಯವನ್ನು ನೀಡಿಲ್ಲ. ಈ ಹಿಂದಿನ ರೇಟಿಂಗ್‌ಗಳಲ್ಲಿಯೂ ಮೋದಿ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದರು

ಅತ್ಯಂತ ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರ ಸ್ಥಾನ; ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆ
ಪ್ರಧಾನಿ ನರೇಂದ್ರ ಮೋದಿ
Follow us
|

Updated on: Sep 15, 2023 | 8:54 PM

ನವದೆಹಲಿ, ಸೆಪ್ಟೆಂಬರ್ 15: ಅಮೆರಿಕ ಮೂಲದ ‘ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್’ ಮಾರ್ನಿಂಗ್ ಕನ್ಸಲ್ಟ್ (Morning Consult) ನಡೆಸಿದ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಜಾಗತಿಕ ನಾಯಕರ ಪಟ್ಟಿಯಲ್ಲಿ ಶೇ 76 ರಷ್ಟು ರೇಟಿಂಗ್​ನೊಂದಿಗೆ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಶೇಕಡಾ 76 ರಷ್ಟು ಜನರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಅನುಮೋದಿಸಿದ್ದಾರೆ. ಶೇಕಡಾ 18 ರಷ್ಟು ಜನರು ಮಾತ್ರ ಅವರನ್ನು ಒಪ್ಪುವುದಿಲ್ಲ ಮತ್ತು ಶೇಕಡಾ 6 ರಷ್ಟು ಜನರು ಯಾವುದೇ ಅಭಿಪ್ರಾಯವನ್ನು ನೀಡಿಲ್ಲ ಎಂದು ಮಾರ್ನಿಂಗ್ ಕನ್ಸಲ್ಟ್ ವರದಿ ತಿಳಿಸಿದೆ.

ಈ ತಿಂಗಳ ಆರಂಭದಲ್ಲಿ ನವದೆಹಲಿಯಲ್ಲಿ ಜಿ20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮೋದಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಸ್ವಿಟ್ಜರ್ಲೆಂಡ್ ಅಧ್ಯಕ್ಷ ಅಲೈನ್ ಬರ್ಸೆಟ್ ಅವರು ಶೇಕಡಾ 64 ರಷ್ಟು ಅನುಮೋದನೆ ಪಡೆದಿದ್ದರೆ, ಮೆಕ್ಸಿಕೊದ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ಶೇ 61 ರಷ್ಟು ಅನುಮೋದನೆಯನ್ನು ಹೊಂದಿದ್ದಾರೆ.

ಈ ಹಿಂದಿನ ರೇಟಿಂಗ್‌ಗಳಲ್ಲಿಯೂ ಮೋದಿ ರ್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿದ್ದರು.

ಅಮೆರಿಕದ ಅಧ್ಯಕ್ಷ ಜೋ ಬೈಡನ್ ಶೇಕಡಾ 40, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಶೇಕಡಾ 37, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಶೇಕಡಾ 27 ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಶೇಕಡಾ 24 ರ ಅನುಮೋದನೆಯನ್ನು ಪಡೆದಿದ್ದಾರೆ.

ಈ ರೇಟಿಂಗ್‌ಗಳು ಸೆಪ್ಟೆಂಬರ್ 6 ರಿಂದ 12 ರವರೆಗೆ ಸಂಗ್ರಹಿಸಿದ ಡೇಟಾವನ್ನು ಆಧರಿಸಿವೆ ಎಂದು ಮಾರ್ನಿಂಗ್ ಕನ್ಸಲ್ಟ್ ಹೇಳಿದೆ. ಅಮೆರಿಕದಿಂದ, ಸರಾಸರಿ 45,000 ಮಂದಿ ಸಮೀಕ್ಷೆಯಲ್ಲಿ ಭಾಗಿಯಾದರೆ, ಇತರ ದೇಶಗಳಿಂದ, ಸರಿಸುಮಾರು 500 ರಿಂದ 5,000 ವರೆಗೆ ಜನ ಸಮೀಕ್ಷೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Engineers Day 2023: ದೇಶ ನಿರ್ಮಾಣಕ್ಕೆ ಕನ್ನಡಿಗ ಸರ್ ಎಂ ವಿಶ್ವೇಶ್ವರಯ್ಯ ಅವರ ಪಾತ್ರ ಉಲ್ಲೇಖಿಸಿ ವಿಶೇಷ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಜಿ20 ನಾಯಕರ ಶೃಂಗಸಭೆಯಲ್ಲಿ, ನವದೆಹಲಿ ಘೋಷಣೆಯನ್ನು ಸಂಪೂರ್ಣ ಒಮ್ಮತದೊಂದಿಗೆ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಘೋಷಣೆಯ ಪ್ರಮುಖ ನಿಲುವು ಎಲ್ಲಾ ಜಾಗತಿಕ ಶಕ್ತಿಗಳನ್ನು ಒಂದೇ ವೇದಿಕೆಯಡಿ ತರುವುದು ಮತ್ತು ರಷ್ಯಾ-ಉಕ್ರೇನ್ ಯುದ್ಧದಂತಹ ವಿಭಜಿತ ವಿಷಯದ ಬಗ್ಗೆ ಒಮ್ಮತವನ್ನು ರೂಪಿಸುವುದಾಗಿದೆ.

ಮಾರ್ನಿಂಗ್ ಕನ್ಸಲ್ಟ್ ಪ್ರಕಾರ, ಪೊಲಿಟಿಕಲ್ ಇಂಟೆಲಿಜೆನ್ಸ್ ಅದರ ಸ್ವಾಮ್ಯದ ವೇದಿಕೆಯಾಗಿದೆ ಮತ್ತು ಇದು ರಾಜಕೀಯ ಚುನಾವಣೆಗಳು, ಚುನಾಯಿತ ಅಧಿಕಾರಿಗಳು ಮತ್ತು ಮತದಾನದ ಸಮಸ್ಯೆಗಳ ಕುರಿತು ರಿಯಲ್ ಟೈಂ ಮತದಾನದ ಡೇಟಾವನ್ನು ಒದಗಿಸುತ್ತದೆ. ಮಾರ್ನಿಂಗ್ ಕನ್ಸಲ್ಟ್ ಪ್ರತಿದಿನ 20,000 ಕ್ಕೂ ಹೆಚ್ಚು ಜಾಗತಿಕ ಸಂದರ್ಶನಗಳನ್ನು ನಡೆಸುತ್ತದೆ. ಎಲ್ಲಾ ಸಂದರ್ಶನಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಯಾರೇ ದೊಡ್ಡವರಾದ್ರೂ ಕಾನೂನಿಗೆ ಹೊರತಲ್ಲ’: ವಸಿಷ್ಠ ಸಿಂಹ ಪ್ರತಿಕ್ರಿಯೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
‘ಮೆಜೆಸ್ಟಿಕ್’ ಸಿನಿಮಾ ಬಗ್ಗೆ ಭಾಮಾ ಹರೀಶ್ ಮಾತು, ದರ್ಶನ್​ಗೆ ಎಚ್ಚರಿಕೆ
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಮೈಸೂರು: ಆಕ್ಸೆಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಕೆಎಸ್​ಆರ್​ಟಿಸಿ ಬಸ್
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಕೊಲೆ ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ಶಿಫ್ಟ್​
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸದ್ಯದಲ್ಲೇ ನೀರಿನ‌ ದರ ಏರಿಕೆ? ಡಿಕೆಶಿ ಹೇಳಿದ್ದಿಷ್ಟು
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ
ರೀಲ್ಸ್​ಗೆ ಯುವತಿ ಬಲಿ, 15 ಸೆಕೆಂಡ್‌ನಲ್ಲೇ ಹಾರಿ ಹೋಯ್ತು ಪ್ರಾಣ ಪಕ್ಷಿ
ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಕುರಿತು ಕಮಿಷನರ್​ ಹೇಳಿದ್ದಿಷ್ಟು
ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ವರದಿ ಕುರಿತು ಕಮಿಷನರ್​ ಹೇಳಿದ್ದಿಷ್ಟು
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ಕೊಲೆ ಪ್ರಕರಣದ ಸಾಕ್ಷ್ಯ ನಾಶಕ್ಕೆ ನಡೆದಿತ್ತು ಪ್ಲ್ಯಾನ್
ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ವಿಜಯೇಂದ್ರ
ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದ ವಿಜಯೇಂದ್ರ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ
ದರ್ಶನ್ ನನ್ನ ಬಳಿ ಹೇಳಿ ಶೆಡ್​ಗೆ ಹೋಗಿಲ್ಲ; ಪಟ್ಟಣಗೆರೆ ಜಯಣ್ಣ