Yoga utsav: ಜನ ತಮ್ಮ ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಲು ಉತ್ತೇಜಿಸಬೇಕು -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕರೆ

ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎರಡು ವರ್ಷಗಳ ಬಿಡುವಿನ ನಂತರ ಭೌತಿಕವಾಗಿ ಈ ವರ್ಷ ಅಂತಾರಾಷ್ಟ್ರೀಯ ಯೋಗ ದಿನವನ್ನು ಮುಂದಿನ ತಿಂಗಳ ಜೂನ್ 21ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅದರ ನೇತೃತ್ವದಲ್ಲಿ ಕರ್ನಾಟಕದ ಮೈಸೂರಿನಲ್ಲಿ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮವಾಗಿ ನಡೆಯಲಿದೆ.

Yoga utsav: ಜನ ತಮ್ಮ ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಲು ಉತ್ತೇಜಿಸಬೇಕು -ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕರೆ
ಯೋಗ ಉತ್ಸವ ಆಚರಣೆಯಲ್ಲಿ ರಾಷ್ಟ್ರದ ಜತೆ ಕೈ ಜೋಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: May 25, 2022 | 9:09 PM

8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶಾಸ್ತ್ರಿ ಭವನದಲ್ಲಿಂದು ನಡೆದ ಕ್ಷಣಗಣನೆ ಯೋಗ ಕಾರ್ಯಕ್ರಮದಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ರಾಷ್ಟ್ರದ ಜೊತೆ ಸೇರ್ಪಡೆಯಾದರು. 2022ನೇ ಸಾಲಿನ ಮುಂಬರುವ ಅಂತಾರಾಷ್ಟ್ರೀಯ ಯೋಗ ದಿನದ ಕ್ಷಣಗಣನೆ ಆರಂಭವಾಗಿರುವುದರ ಅಂಗವಾಗಿ ಗಣಿ ಸಚಿವಾಲಯ ಆಯೋಜಿಸಿದ್ದ ‘ಯೋಗ ಉತ್ಸವ’ ಕಾರ್ಯಕ್ರಮದಲ್ಲಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯಗಳ ಸುಮಾರು 250 ಅಧಿಕಾರಿ ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ಆಯುಷ್ ಸಚಿವಾಲಯದ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಕೇಂದ್ರದ ತಜ್ಞರ ಪ್ರದರ್ಶನವನ್ನು ಅನುಕರಿಸಿ ಸಿಬ್ಬಂದಿ ಯೋಗ ಪ್ರದರ್ಶನ ಮಾಡಿದರು.

ಜನರು ಪ್ರತಿದಿನದ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಲು ಉತ್ತೇಜಿಸಬೇಕು ಎಂದ ಸಚಿವ ಪ್ರಹ್ಲಾದ್ ಜೋಶಿ ಅವರು ‘ದೈಹಿಕ ಹಾಗೂ ಮಾನಸಿಕ ಯೋಗಕ್ಷೇಮ ಎರಡಕ್ಕೂ ಹಾಗೂ ಸಮತೋಲಿತ ಜೀವನ ನಡೆಸಲು ಯೋಗ ಅತ್ಯಗತ್ಯ. ಯೋಗದ ಜನಪ್ರಿಯತೆ ಗಡಿಗಳನ್ನು ಮೀರಿದೆ ಮತ್ತು ಇಂದು ಜಗತ್ತಿನಾದ್ಯಂತ ಎಲ್ಲೆಡೆ ಅಳವಡಿಸಿಕೊಳ್ಳಲಾಗುತ್ತಿದೆ” ಎಂದರು.

ಕೇಂದ್ರ ಕಲ್ಲಿದ್ದಲು, ಗಣಿ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದ ‘ಯೋಗ ಉತ್ಸವ’ ಕಾರ್ಯಕ್ರಮದ ಬಗ್ಗೆ ರೈಲ್ವೆ ಇಲಾಖೆ ಟ್ವೀಟ್ ಇಲ್ಲಿದೆ:

Morning yoga calms the mind & prepares the body for the day ahead. Union Minister @JoshiPralhad, MoS @raosahebdanve & @arjunrammeghwal attended the countdown event in the run up to #IDY2022 A beautiful & fruitful yoga session held at Shastri Bhawan, New Delhi.

ಜಗತ್ತಿನಾದ್ಯಂತ ಯೋಗವನ್ನು ಜನಪ್ರಿಯಗೊಳಿಸಿದ್ದಕ್ಕಾಗಿ ಶ್ರೀ ಪ್ರಹ್ಲಾದ್ ಜೋಶಿ ಪ್ರಧಾನಮಂತ್ರಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು. “ಸ್ವತಃ ಯೋಗದ ಅತ್ಯಾಸಕ್ತಿಯ ಅಭ್ಯಾಸಿಯಾಗಿರುವುದರ ಜೊತೆಗೆ ಇದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯಾಗಿದೆ. ಕಲ್ಪನಾ ಶಕ್ತಿಯನ್ನು ಸೆಳೆದು ಯೋಗವನ್ನು ತಮ್ಮ ಜೀವನ ವಿಧಾನದಲ್ಲಿ ಅಳವಡಿಸಿಕೊಳ್ಳಲು ಜನರಿಗೆ ಪ್ರಧಾನಿ ಪ್ರೇರಣೆ ನೀಡುತ್ತಿದ್ದಾರೆ. ಭಾರತದಲ್ಲಿ ಮತ್ತು ಜಗತ್ತಿನಾದ್ಯಂತ ಯೋಗಾಭ್ಯಾಸ ನಿರೀಕ್ಷೆಗೂ ಮೀರಿ ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳಲಾಗುತ್ತಿದೆ” ಎಂದು ಸಚಿವರು ಹೇಳಿದರು,

ಕಲ್ಲಿದ್ದಲು, ಗಣಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ಶ್ರೀ ರಾವ್ ಸಾಹೇಬ್ ಪಾಟೀಲ್ ದನ್ವೆ, ಸಂಸದೀಯ ವ್ಯವಹಾರಗಳು ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವ ಶ್ರೀ ಅರ್ಜುನ್ ರಾಮ್ ಮೇಘವಾಲ್, ಕೇಂದ್ರ ಕಲ್ಲಿದ್ದಲು ಕಾರ್ಯದರ್ಶಿ ಶ್ರೀ ಅಲೋಕ್ ಟಂಡನ್ ಮತ್ತು ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಶ್ರೀ ಗ್ಯಾನೇಶ್ ಕುಮಾರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಬೇಕೆಂಬ ಪ್ರಸ್ತಾವವನ್ನು ಮಂಡಿಸಿದ ನಂತರ 2014ರಲ್ಲಿ ವಿಶ್ವ ಸಂಸ್ಥೆಯ ಮಹಾಧಿವೇಶನ ಪ್ರತಿ ವರ್ಷ ಜೂನ್ 21 ಅನ್ನು ಅಂತಾರಾಷ್ಟ್ರೀಯ ಯೋಗ ದಿನ(ಐಡಿವೈ)ವನ್ನಾಗಿ ಘೋಷಿಸಿತು. ಇದಕ್ಕೆ 175 ರಾಷ್ಟ್ರಗಳು ಅನುಮೋದನೆ ನೀಡಿದವು.

ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎರಡು ವರ್ಷಗಳ ಬಿಡುವಿನ ನಂತರ ಭೌತಿಕವಾಗಿ ಈ ವರ್ಷ ಅಂತಾರಾಷ್ಟ್ರೀಯ ಯೋಗ ದಿನವನ್ನು ಮುಂದಿನ ತಿಂಗಳ ಜೂನ್ 21ರಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅದರ ನೇತೃತ್ವದಲ್ಲಿ ಕರ್ನಾಟಕದ ಮೈಸೂರಿನಲ್ಲಿ ಬೃಹತ್ ಯೋಗ ಪ್ರದರ್ಶನ ಕಾರ್ಯಕ್ರಮವಾಗಿ ನಡೆಯಲಿದೆ.

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್